JDS vs BJP Twitter War; ಸದನದಲ್ಲಿ ಅಶ್ಲೀಲ ದೃಶ್ಯ ನೋಡಿದವರು, ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾರು?; ಜೆಡಿಎಸ್ ಪ್ರಶ್ನೆ

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ಕಿಡಿಕಾರಿದೆ.

ಎಚ್​ಡಿಕೆ ಮತ್ತು ಬಿಜೆಪಿ ನಾಯಕರು.

ಎಚ್​ಡಿಕೆ ಮತ್ತು ಬಿಜೆಪಿ ನಾಯಕರು.

 • Share this:
  ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ (BJP) ನಾಯಕರ ನಡುವಿನ ಮಾತಿನ ಸಮರ ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಇತ್ತೀಚೆಗೆ ಆರ್​ಎಸ್​ಎಸ್​ (RSS) ಮೇಲೆ ನೇರಾ ನೇರ ದಾಳಿ ನಡೆಸಿದ್ದ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ರಾಮ ಮಂದಿರದ (Ram Mandir) ಹೆಸರಿನಲ್ಲಿ ಆರ್​ಎಸ್​ಎಸ್​ ಸಂಗ್ರಹಿಸಿದ ದೇಣಿಗೆ ಬಗ್ಗೆ ಲೆಕ್ಕ ಕೇಳಿದ್ದರು. ಅಲ್ಲದೆ, ಆರ್​​ಎಸ್​ಎಸ್​ ಮಹಾತ್ಮಾ ಗಾಂಧಿಯನ್ನು ಕೊಂದ ಸಂಸ್ಥೆ ಎಂದು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದರು. ಹೆಚ್​ಡಿಕೆ ವಾಗ್ದಾಳಿಗೆ ಬಿಜೆಪಿ ನಾಯಕರೂ ಸಹ ತಿರುಗೇಟು ನೀಡಿದ್ದು, ಹೆಚ್​.ಡಿ. ಕುಮಾರಸ್ವಾಮಿ ಮಾನಸಿನ ಅಸ್ವಸ್ಥ ಎಂದು ಕಿಡಿಕಾರಿದ್ದರು. ಅಲ್ಲದೆ, ಜೆಡಿಎಸ್​ ಅಧಿಕಾರ ಕಾಲದ ಕೆಪಿಎಸ್​ಸಿ ಹಗರಣದ ಬಗ್ಗೆ ಮಾತೆತ್ತಿದ್ದರು. ಇದಕ್ಕೆ ಈಗ ಮತ್ತೆ ತಿರುಗೇಟು ನೀಡಿರುವ ಜೆಡಿಎಸ್​ ಭ್ರಷ್ಟಾಚಾರದಲ್ಲಿ ಜೈಲು ಪಾಲಾದ ಮತ್ತು ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಚಾರಿತ್ರ್ಯವನ್ನು ಪ್ರಶ್ನೆ ಮಾಡುವ ಕೆಲಸಕ್ಕೆ ಮುಂದಾಗಿದೆ.  ಈ ಬಗ್ಗೆ ಜೆಡಿಎಸ್​ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, "ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ.

  ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. "ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ" ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ" ಎಂದು ಕಿಡಿಕಾರಲಾಗಿದೆ.  ಮತ್ತೊಂದು ಟ್ವೀಟ್​ನಲ್ಲಿ ಸರಣಿ ಪ್ರಶ್ನೆಗಳನ್ನು ಕೇಳಲಾಗಿದ್ದು,  "ಬಿಜೆಪಿಗರು ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು?.  ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ" ಎಂದು ಹೀಯಾಳಿಸಲಾಗಿದೆ.

  ಅಲ್ಲದೆ, ಕೆಪಿಎಸ್​ಸಿ ಹಗರಣದ ಬಗ್ಗೆಯೂ ಉಲ್ಲೇಖಿಸಲಾಗಿದ್ದು, "ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?.  ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು?.

  ಇದನ್ನೂ ಓದಿ: HD Kumaraswamy ಒಂದೇ ಮಾತಿಗೆ ಸಿಡಿದೆದ್ದ ಬಿಜೆಪಿ ನಾಯಕರು; RSS ವಿರುದ್ಧ HDK ನಿರಂತರ ವಾಗ್ದಾಳಿ ಮರ್ಮವೇನು?

  ಕೆ.ಪಿ.ಎಸ್.ಸಿ ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ" ಎಂದು ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸಲಾಗಿದೆ.
  Published by:MAshok Kumar
  First published: