ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari, Minister of Road Transport & Highways) ಅವರು ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ (Bengaluru-Chennai Expressway) ಪ್ರಗತಿಯನ್ನು ಪರಿಶೀಲನೆ ನಡೆಸಿದರು. 120 ಕಿಮೀ ವೇಗದಲ್ಲಿ ಈ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರವನ್ನು 300 ಕಿಮೀ ನಿಂದ 262 ಕಿಮೀಗೆ ಕಡಿಮೆಯಾಗಿದೆ. ಈ ಮಾರ್ಗದ ಮೂಲಕ ಕರ್ನಾಟಕ (Karnataka) ಮತ್ತು ಆಂಧ್ರ ಪ್ರದೇಶದ (Andhra Pradesh) ಕೈಗಾರಿಕಾ ಕೇಂದ್ರಗಳು ನೇರವಾಗಿ ಚೆನ್ನೈ ಬಂದರನ್ನು ಸಂಪರ್ಕಿಸಬಹುದಾಗಿದೆ. ಇದೀಗ ನಿತಿನ್ ಗಡ್ಕರಿ ಅವರನ್ನು ಜೆಡಿಎಸ್ (JDS) ತನ್ನ ಶೈಲಿಯಲ್ಲಿ ವ್ಯಂಗ್ಯವಾಗಿ ಸ್ವಾಗತ ಕೋರಿದೆ. 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸ್ವಾಗತ ಎಂದು ಜೆಡಿಎಸ್ ಟ್ವೀಟ್ (JDS Tweet) ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.
ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ?
ಬೆಂಗಳೂರು-ಮೈಸೂರು ದಶಪಥ ಮುಖ್ಯ ಹೆದ್ದಾರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರೆ, ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ ಎಂದು ಜೆಡಿಎಸ್ ಕೇಳಿದೆ.
ಅಗುತ್ತಿರುವ ಅಪಘಾತಗಳಿಗೆ ಯಾರು ಹೊಣೆ?
ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ಗಳನ್ನು ನಿರ್ಮಿಸಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.
ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ?
ತಮಗೂ ಏನಾದ್ರೂ ಪಾಲು ಸಿಕ್ಕಿದೆಯಾ?
ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, ನಿತಿನ್ ಗಡ್ಕರಿ ಅವರೆ? ಅಥವಾ 40% ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ?
ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು. ವೈಮಾನಿನ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ ಎಂದು ಪ್ರಶ್ನೆ ಮಾಡಲಾಗಿದೆ.
ರಾಜ್ಯಕ್ಕೆ ಜೆಪಿ ನಡ್ಡಾ
ಬೆಂಗಳೂರು: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇಂದು ತುಮಕೂರು, ಮಧುಗಿರಿ ವಿಭಾಗದ ಶಕ್ತಿ ಕೇಂದ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ ಸಿದ್ದಗಂಗಾ ಮಠಕ್ಕೂ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ.
Inspected the progress of the Bengaluru – Chennai Expressway with Karnataka PWD Minister Shri @CCPatilBJP Ji and MP Shri @BNBachegowda_MP Ji. We are constructing this 262 km long 8-Lane structure worth of ₹16,730 Cr.#PragatiKaHighway #GatiShakti #BengaluruChennaiExpressway pic.twitter.com/Lq92uRdGjj
— Nitin Gadkari (@nitin_gadkari) January 5, 2023
ಇದನ್ನೂ ಓದಿ: Kalaburagi: ಬಾಲಕನನ್ನ ಅಪಹರಿಸಿ 10 ಲಕ್ಷಕ್ಕೆ ಡಿಮ್ಯಾಂಡ್; ಸಿಂಗಂ ಸ್ಟೈಲ್ನಲ್ಲಿ ಪೊಲೀಸರ ಕಾರ್ಯಚರಣೆ
ಶಿರಾದಲ್ಲಿ ಬೃಹತ್ ಸಮಾವೇಶ
ಇನ್ನು ನಾಡಿದ್ದು ವಾಲ್ಮೀಕಿ ಪೀಠ, ಪಂಚಮಸಾಲಿ ಪೀಠಕ್ಕೂ ಜೆ.ಪಿ.ನಡ್ಡಾ ಹೋಗಲಿದ್ದಾರೆ.. ನಾಳೆ ಶಿರಾದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದ್ದು 25 ಸಾವಿರ ಕಾರ್ಯಕರ್ತರನ್ನು ಉದ್ದೇಶಿಸಿ ನಡ್ಡಾ ಭಾಷಣ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ