ಉಪ ಚುನಾವಣೆಯಲ್ಲಿ ಜೆಡಿಎಸ್ 5-6 ಸ್ಥಾನ ಗೆಲ್ಲಲಿದೆ ; ಮಾಜಿ ಶಾಸಕ ಎನ್​​ ಎಚ್ ಕೋನರೆಡ್ಡಿ

ಮಹದಾಯಿ ವಿಷಯದಲ್ಲಿ ಬಿಜೆಪಿ ನಾಟಕವಾಡುತ್ತಿದೆ. ನ್ಯಾಯಾಧಿಕರಣ ತೀರ್ಪು ಕೊಟ್ಟರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಮಾಡುತ್ತಿಲ್ಲ ಎಂದು ತಿಳಿಸಿದರು.

G Hareeshkumar | news18-kannada
Updated:December 4, 2019, 10:20 PM IST
ಉಪ ಚುನಾವಣೆಯಲ್ಲಿ ಜೆಡಿಎಸ್ 5-6 ಸ್ಥಾನ ಗೆಲ್ಲಲಿದೆ ; ಮಾಜಿ ಶಾಸಕ ಎನ್​​ ಎಚ್ ಕೋನರೆಡ್ಡಿ
ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ
  • Share this:
ಹುಬ್ಬಳ್ಳಿ (ಡಿ.04) : ಉಪ ಚುನಾವಣೆಯಲ್ಲಿ 5- 6 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದ್ದು, ಡಿಸೆಂಬರ್ 9 ರ ನಂತರ ಮೈತ್ರಿ ಸರ್ಕಾರ ರಚನೆ ಬಗ್ಗೆ ಮಾತನಾಡುತ್ತೇವೆ ಎಂದು ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಮಗೆ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ನಂಟಸ್ತಿಕೆ ಮಾಡಿದ ಅನುಭವವಿದೆ. ಫಲಿತಾಂಶ ನೋಡಿಕೊಂಡು ಮಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎನ್ನುವ ಮೂಲಕ ರಾಜ್ಯ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವ ಸೂಚನೆ ನೀಡಿದ್ದಾರೆ.

ಬಿಜೆಪಿ ನಾಯಕರು ಜೆಡಿಎಸ್ ಬಗ್ಗೆ ಕೆಳಮಟ್ಟದ ಭಾಷೆ ಬಳಿಸಿ ಟೀಕಿಸುತ್ತಿದ್ದಾರೆ. ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಸಹಜ. ಆದರೆ ಕೀಳುಮಟ್ಟದ ಭಾಷೆ ಬಳಸುವುದು ಸರಿಯಲ್ಲ. ಮಹದಾಯಿ ವಿಷಯದಲ್ಲಿ ಬಿಜೆಪಿ ನಾಟಕವಾಡುತ್ತಿದೆ. ನ್ಯಾಯಾಧಿಕರಣ ತೀರ್ಪು ಕೊಟ್ಟರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಮಾಡುತ್ತಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : ಸಿದ್ದರಾಮಯ್ಯ ಮೂಲೆಗುಂಪು ಮಾಡಲು ಹೊರಟಿದ್ದ ಜೋಡೆತ್ತುಗಳ ಯೋಜನೆ ಸಂಪೂರ್ಣ ವಿಫಲ ; ಯತ್ನಾಳ

ಕುಮಾರಸ್ವಾಮಿಯವರು ಸಾಲಮನ್ನಾ ಮಾಡಿದ್ದರಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದೆ. ರೈತರು ಕುಮಾರಸ್ವಾಮಿಯವರ ಬೆಂಬಲಕ್ಕೆ ನಿಲ್ಲುತ್ತಾರೆ ಎನ್ನುವ ಭರವಸೆಯಿದೆ ಎಂದಿದ್ದಾರೆ.
First published:December 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading