ಶಿವಮೊಗ್ಗದಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (Popular front of india) ಅಂಗಸಂಸ್ಥೆಯಾಗಿರುವ ಸಿಎಫ್ಐ (CFI- Campus Front of India ) ಸೇರುವಂತೆ ವಿವಾದಾತ್ಮಕ ಬರಹ ಬರೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ (Shiralakoppa, Shivamogga) JOIN CFI ಎಂದು ಗೋಡೆ ಬರಹ ಬರೆಯಲಾಗಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆದು ಸ್ಟಾರ್ ಇಡಲಾಗಿದೆ. ಹಳೇ ಪೆಟ್ರೋಲ್ ಬಂಕ್ ಪಕ್ಕದಲ್ಲಿನ ಸಿಮೆಂಟ್ ಕಾಂಪೌಂಡ್, ಬೋವಿ ಕಾಲೋನಿಗೆ ಹೋಗುವ ವಿದ್ಯುತ್ ಕಂಬ, ದೊಡ್ಡ ಬ್ಯಾಣದಕೇರಿಗೆ ಹೋಗುವ ಕ್ರಾಸ್ ಬಳಿ ಗೋಡೆ ಮತ್ತು ವಿದ್ಯುತ್ ಕಂಬದ ಮೇಲೆ, ಚಂದ್ರಪ್ಪ ಎಂಬವರ ಮನೆಯ ಕ್ರಾಸ್ನ ವಿದ್ಯುತ್ ಕಂಬ, ಬಿಲಾಲ್ ಎಂಬವರ ಮನೆಯ ಬಳಿ ಇರುವ ಗ್ಯಾರೇಜ್ ಗೋಡೆ, ದೊಡ್ಡ ಬ್ಯಾಣದ ಕೇರಿಯ ರಸ್ತೆಯಿಂದ ಮಠದ ಕೇರಿಯ ರಸ್ತೆಯ ಬಾಜುವಿನ ಗೋಡೆ, ಹಾಗೂ ಫಾರೂಕ್ ಮತ್ತು ಬಿಲಾಲ್ ಮನೆಯ ಗೋಡೆಗಳ ಮೇಲೆ ಬರಹ ಬರೆಯಲಾಗಿದೆ.
ನವೆಂಬರ್ 28ರಂದು ಪೊಲೀಸರು ಗಸ್ತು ತಿರುಗುವಾಗ ಗೋಡೆ ಬರಹ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪಿಎಫ್ಐನ ಅಂಗಸಂಸ್ಥೆ ಸಿಎಫ್ಐ ವಿದ್ಯಾರ್ಥಿ ಸಂಘಟನೆಯಾಗಿದೆ.ಪಿಎಫ್ಐ, ಸಿಎಫ್ಐ ನಿಷೇಧಿತ ಸಂಘಟನೆಗಳಾಗಿವೆ.
ಪ್ರಕರಣ ದಾಖಲು, ತನಿಖೆ ಆರಂಭ
ಈ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪೊಲೀಸರು ಗಸ್ತು ತಿರುಗುವಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಯಾರು ಬರೆದಿದ್ದಾರೆ ಎಂಬವರನ್ನ ಪತ್ತೆ ಹಚ್ಚಲು ಖಾಕಿ ಪಡೆ ಬಲೆ ಬೀಸಿದೆ.
ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ
ಕಡಲನಗರಿ ಮಂಗಳೂರಿನಲ್ಲಿ ಕಿಡಿಗೇಡಿಗಳು ಉಗ್ರ ಸಂಘಟನೆಯ ಪರ ಬರಹ ಬರೆಯಲಾಗಿತ್ತು. ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆಯ ಬರೆಹದ ಜೊತೆಗೆ ಹ್ಯಾಷ್ ಟ್ಯಾಗ್ ಹಾಕಿ ಲಷ್ಕರ್ ಜಿಂದಾಬಾದ್ ಎಂದು ಬರೆಯಲಾಗಿತ್ತು.
ಮಂಗಳೂರು ಗೋಡೆ ಬರಹದ ಆರೋಪಿ
ಎರಡು ವರ್ಷಗಳ ಹಿಂದೆ ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಗೋಡೆ ಮೇಲೆ ಉಗ್ರ ಸಂಘಟನೆ ಲಷ್ಕರ್ ಪರವಾಗಿ ಬರಹ ಬರೆಯಲಾಗಿತ್ತು. ಈ ಪ್ರಕರಣದಲ್ಲಿ ಮಾಝ್ ಮುನೀರ್ ಜೊತೆ ಶಾರೀಕ್ನನ್ನು ಬಂಧಿಸಲಾಗಿತ್ತು.
ಸಂಘಿ ಮತ್ತು ಮನುವಾದಿಗಳೇ ನಿಮ್ಮ ಜೊತೆ ಡೀಲ್ ಮಾಡಲು ಲಷ್ಕರ್ ಮತ್ತು ತಾಲಿಬಾನ್ಗಳನ್ನ ಕರೆಸುವಂತೆ ಮಾಡಬೇಡಿ ಎಂದು ಗೋಡೆಯ ಮೇಲೆ ಬರೆಯಲಾಗಿತ್ತು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ಇಬ್ಬರು ಜಾಮೀನಿನ ಮೇಲೆ ಹೊರ ಬಂದಿದ್ದರು.
ಶಾರೀಕ್ ಆರೋಗ್ಯದಲ್ಲಿ ಚೇತರಿಕೆ
Mangaluru Cooker Bomb Blast: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರು (Police) ಹಾಗೂ ಎನ್ಐಎ (NIA) ಅಧಿಕಾರಿಗಳು ಸ್ಫೋಟದ ತನಿಖೆಯನ್ನ ಚುರುಕುಗೊಳಿಸಿದ್ದು ಪ್ರತಿಯೊಂದು ಹಂತದಲ್ಲೂ ಸಾಕ್ಷ್ಯಗಳನ್ನ ಕಲೆ ಹಾಕ್ತಿದ್ದಾರೆ. ಅತ್ತ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಶಂಕಿತ ಉಗ್ರ ಶಾರೀಕ್ಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಇದನ್ನೂ ಓದಿ: Mangaluru Blast: ಕುಕ್ಕರ್ನಲ್ಲಿ ಬಾಂಬ್ ಇಟ್ಟಿದ್ದ ಶಾರೀಕ್ ಎಂತಾ ಖತರ್ನಾಕ್ ಗೊತ್ತಾ? ಇಲ್ಲಿದೆ ಶಂಕಿತ ಉಗ್ರನ ಭಯಾನಕ ಹಿಸ್ಟರಿ
ಸದ್ಯ ಶಾರೀಕ್ ವೆಂಟಿಲೇಟರ್ (Ventilator) ಸ್ಥಿತಿಯಿಂದ ಹೊರಬಂದಿದ್ದು, ಆರೋಗ್ಯದಲ್ಲಿ (Health) ಚೇತರಿಕೆ ಕಂಡುಬಂದಿದೆ.
ಶಾರೀಕ್ ಹತ್ಯೆಗೆ ಸಂಚು
ಶಾರೀಕ್ಗೆ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಶಾರೀಕ್ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಆಸ್ಪತ್ರೆ ಮತ್ತು ವಾರ್ಡ್ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ (Police Protection) ಏರ್ಪಡಿಸಲಾಗಿದೆ.
ಇದನ್ನೂ ಓದಿ: Mangaluru Blast: ಐಸಿಸ್ ಸೇರಲು ಶಾರೀಕ್ ಯತ್ನ? ಬೆಂಗಳೂರಿನ ಅತ್ತೆ ಮನೆಯಲ್ಲಿ ವಾಸವಾಗಿದ್ನಾ ಉಗ್ರ?
ಹ್ಯಾಂಡ್ಲರ್ಸ್, ಸ್ಲೀಪರ್ ಸೆಲ್ಗಳನ್ನು ಆಕ್ಟಿವ್ ಮಾಡಿ ದಾಳಿ ನಡೆಸುವ ಶಂಕೆ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ