• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಕಲಬುರ್ಗಿಯಲ್ಲಿ ಕೊರೋನಾ ಕರ್ತವ್ಯಕ್ಕೂ ಕಳ್ಳಾಟ; ಮುಂದೆ ಕೆಲಸವೇ ಸಿಗದಂತೆ ಮಾಡುವುದಾಗಿ ಡಿಸಿ ಶರತ್ ಎಚ್ಚರಿಕೆ

ಕಲಬುರ್ಗಿಯಲ್ಲಿ ಕೊರೋನಾ ಕರ್ತವ್ಯಕ್ಕೂ ಕಳ್ಳಾಟ; ಮುಂದೆ ಕೆಲಸವೇ ಸಿಗದಂತೆ ಮಾಡುವುದಾಗಿ ಡಿಸಿ ಶರತ್ ಎಚ್ಚರಿಕೆ

ಜಿಲ್ಲಾಧಿಕಾರಿ ಶರತ್

ಜಿಲ್ಲಾಧಿಕಾರಿ ಶರತ್

ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಾದ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ವೈದ್ಯರು ಮಾತ್ರ ಕರ್ತವ್ಯಕ್ಕೆ ಗೈರಾಗುವ ಮೂಲಕ ಕೆಲಸದಿಂದ ವಿಮುಖರಾಗುತ್ತಿದ್ದಾರೆ. ಹೆಮ್ಮಾರಿ ಕೊರೋನಾಗೆ ಹೆದರಿ ಕರ್ತವ್ಯಕ್ಕೆ ಗೈರಾಗುತ್ತಿರುವುದರಿಂದಾಗಿ, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ತುಂಬಾ ತೊಡಕಾಗಲಾರಂಭಿಸಿದೆ.

ಮುಂದೆ ಓದಿ ...
  • Share this:

ಕಲಬುರ್ಗಿ(ಜು.26):  ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ಅಬ್ಬರ ಮುಂದುವರೆದಿದೆ. ಕೊರೋನಾ ಸೋಂಕಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಆದರೆ ಡೆಡ್ಲಿ ವೈರಸ್ ಗೆ ಹೆದರಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಬಹುತೇಕ ವೈದ್ಯರು, ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಕಳ್ಳಾಟ ತೋರುತ್ತಿದ್ದಾರೆ. ಈ ವಿಷಯ ಜಿಲ್ಲಾಧಿಕಾರಿಗಳನ್ನು ಗರಂ ಆಗುವಂತೆ ಮಾಡಿದೆ. ಕರ್ತವ್ಯಕ್ಕೆ ಗೈರಾಗುವ ಸರ್ಕಾರಿ, ಖಾಸಗಿ ಆಸ್ಪತ್ರೆಗ ವೈದ್ಯರು, ಸಿಬ್ಬಂದಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಕೊರೋನಾ ಹಾಟ್ ಸ್ಪಾಟ್ ಕಲಬುರಗಿ ಜಿಲ್ಲೆಯಲ್ಲಿ ಸೋಂಕಿನ ರುದ್ರನರ್ತನ ಮುಂದುವರೆದಿದೆ. ಕಿಲ್ಲರ್ ವೈರಸ್ ಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ವೇಳೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಾದ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ವೈದ್ಯರು ಮಾತ್ರ ಕರ್ತವ್ಯಕ್ಕೆ ಗೈರಾಗುವ ಮೂಲಕ ಕೆಲಸದಿಂದ ವಿಮುಖರಾಗುತ್ತಿದ್ದಾರೆ. ಹೆಮ್ಮಾರಿ ಕೊರೋನಾಗೆ ಹೆದರಿ ಕರ್ತವ್ಯಕ್ಕೆ ಗೈರಾಗುತ್ತಿರುವುದರಿಂದಾಗಿ, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ತುಂಬಾ ತೊಡಕಾಗಲಾರಂಭಿಸಿದೆ.


ಕೊರೋನಾ ಹೋರಾಟದಲ್ಲಿ ಜಿಲ್ಲಾಡಳಿತಕ್ಕೆ ವೈದ್ಯರಿಂದ ಸೂಕ್ತ ಸಹಕಾರ ಸಿಗುತ್ತಿಲ್ಲವೆಂದು ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು. ಮಾಧ್ಯಮಗಳ ಮುಂದೆ ಡಿಸಿ ಶರತ್ ತಮ್ಮ ಅಸಹಾಯಕತೆ ತೋಡಿಕೊಂಡಿದ್ದರು. ಜಿಲ್ಲೆಯಲ್ಲಿ ಸದ್ಯ ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್ ಗಳು ಕೋವಿಡ್ ಮೀಸಲಿಡುವಂತೆ ಆದೇಶ ನೀಡಲಾಗಿದೆ. ಈ ವೇಳೆಯಲ್ಲಿ ಕೆಲ ಸಿಬ್ಬಂದಿ ಗೈರು ಹಾಜರಿ ಎದ್ದು ಕಾಣುತ್ತಿದೆ. ಇದರಿಂದ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ತೊಂದರೆಯಾಗುತ್ತಿದೆ. ಕೂಡಲೇ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ. ಕರೆ ನೀಡಿದ್ದಾರೆ.


ಕೊಡಗಿನಲ್ಲಿ ಕಾರ್ಗಿಲ್ ವಿಜಯೋತ್ಸವ; ಹುತಾತ್ಮ ಯೋಧರಿಗೆ ಮಾಜಿ ಸೇನಾನಿಗಳಿಂದ ಗೌರವ ನಮನ


ಅಷ್ಟಕ್ಕೆ ನಿಲ್ಲದ ಜಿಲ್ಲಾಧಿಕಾರಿಗಳು, ಇದೀಗ ಕೊರೋನಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಕಳ್ಳಾಟ ನಡೆಸುತ್ತಿರುವವರ ವಿರುದ್ಧ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಎಲ್ಲಿಯೂ ಕೆಲಸ ಸಿಗದಂತೆ ಪೊಲೀಸ್ ಇಲಾಖೆಯಲ್ಲಿ ಮಾಹಿತಿ ದಾಖಲಿಸುವುದಾಗಿಯೂ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಆರೋಗ್ಯ ಇಲಾಖೆ ಸಿಬ್ಬಂದಿಯ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿ ಕೊನೆಯ ವಾರ್ನ್ ಮಾಡಿದ್ದಾರೆ. ಅನಗತ್ಯವಾಗಿ ಕೊರೊನಾ ವೈರಸ್ ಗೆ ಹೆದರಿ ಕರ್ತವ್ಯಕ್ಕೆ ಗೈರಾಗುವ ಖಾಸಗಿ ಹಾಗೂ ಸರ್ಕಾರಿ ವೈದ್ಯರು, ಸಿಬ್ಬಂದಿ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಶರತ್ ಬಿ. ಖಡಕ್ ಎಚ್ಚರಿಕೆ ನೀಡಿದ್ದಾರೆ.


ದೇಶದಲ್ಲಿಯೇ ಕಲಬುರ್ಗಿಯಲ್ಲಿ ಮೊದಲ ಬಲಿ ಪಡೆದ ಕಿಲ್ಲರ್ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದೆ. ಪ್ರತಿ ದಿನ ನೂರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಈವರೆಗೆ 3712 ಜನರಿಗೆ ಕೊರೋನಾ ದೃಢಪಟ್ಟಿದೆ. 58 ಜನರ ಪ್ರಾಣವನ್ನೂ ಕೊರೋನಾ ಕಿತ್ತುಕೊಂಡಿದೆ. ಸದ್ಯ ಜಿಲ್ಲೆಯಲ್ಲಿ 1588 ಸಕ್ರಿಯ ಪ್ರಕರಣಗಳಿವೆ.


ಬಹುತೇಕ ಐಸಿಯು ಕೇಂದ್ರಗಳ ಬೆಡ್ ಗಳು ಭರ್ತಿಯಾಗಿವೆ. ಖಾಸಗಿ ಆಸ್ಪತ್ರೆಗಳು ಒಂದೆಡೆ ಐಸಿಯು ಬೆಡ್ ನೀಡಲು ಹಿಂದೇಟು ಹಾಕುತ್ತಿವೆ. ಅಲ್ಲದೆ ಕೊರೋನಾ ವಾರ್ಡ್ ಗಳಲ್ಲಿ  ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ಹಿಂದೇಟು ಹಾಕುತ್ತಿರುವುದು ಜಿಲ್ಲಾಡಳಿತಕ್ಕೆ ಸಿಕ್ಕಾಪಟ್ಟೆ ತಲೆ ನೋವಾಗಿದೆ.


ಹೀಗಾಗಿ ಜಿಲ್ಲಾಧಿಕಾರಿ ಶರತ್, ಸೋಂಕಿತರ ಚಿಕಿತ್ಸೆಗೆ ತೊಂದರೆ ಆಗದಂತೆ ನೋಡಿಕೊಳ್ಳಲು, ಕರ್ತವ್ಯಕ್ಕೆ ಗೈರಾಗುವ ವೈದ್ಯ, ಸಿಬ್ಬಂದಿ ವಿರುದ್ದ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.

Published by:Latha CG
First published: