Siddaramaiah| ಕಾಂಗ್ರೆಸ್​ ಕಾರ್ಯಕರ್ತನ ಮೇಲೆ ಕಲಬುರಗಿ ಪೊಲೀಸ್ ಆಯುಕ್ತ ಹಲ್ಲೆ; ಸಿದ್ದರಾಮಯ್ಯ ಕಿಡಿ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತ.

ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತ.

  • Share this:
    ಬೆಂಗಳೂರು (ಸೆಪ್ಟೆಂಬರ್​ 02); ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅವರ ಅಳಿಯ, ಕಾಂಗ್ರೆಸ್‌ ಕಾರ್ಯಕರ್ತ ಆದಿಲ್ ಸುಲೇಮಾನ್ ಶೇಖ್ ಅವರನ್ನು ಕಲಬುರಗಿ ನಗರ ಪೊಲೀಸ್‌ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ಥಳಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಆರೋಪಿಸಿರುವ ಆದಿಲ್ ಸುಲೇಮಾನ್ ಶೇಖ್, "ನಮ್ಮ ಅತ್ತೆ ಖನೀಜ್ ಫಾತಿಮಾ ಅವರನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಬುಧವಾರ ತಡರಾತ್ರಿ ಕಾರು ತಡೆದ ಆಯುಕ್ತರು ಮನಬಂದಂತೆ ಥಳಿಸಿದ್ದಾರೆ ಎಂದು ದೂರಿದ್ದಾರೆ. ಮೊದಲಿಗೆ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ ಮುಂದೆ ನೋಡಿದಾಗ ಅವರೇ ಬಂದು ಥಳಿಸಿದರು" ಎಂದು ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್ ಆಯುಕ್ತ ಹಲ್ಲೆ ಮಾಡಿರುವ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



    ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, "ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ" ಎಂದಿದೆ.



    ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ಘಟನೆಯನ್ನು ಖಂಡಿಸಿದ್ದಾರೆ. ಆಯುಕ್ತರನ್ನು ಅಮಾನತು ಮಾಡಿ, ಸೂಕ್ತ ಕ್ರಮ ಕೈಗೊಂಡು ದಾಳಿಗೊಳಗಾದ ಕಾಂಗ್ರೆಸ್‌ ಕಾರ್ಯಕರ್ತನಿಗೆ ನ್ಯಾಯ ದೊರಕಿಸಿಕೊಡಬೇಕು" ಎಂದು ಆಗ್ರಹಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಾಸಕಿ ಖನೀಜ್‌ ಫಾತಿಮಾ, ಪಾಲಿಕೆ ಚುನಾವಣೆಯಲ್ಲಿ ಸೋಲುವ ಭಯದಿಂದಾಗಿ ಬಿಜೆಪಿಯವರು ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, “ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಅದು ಬಿಟ್ಟು ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ" ಎಂದಿದ್ದಾರೆ.

    ಇದನ್ನೂ ಓದಿ: ವರನಟ ಡಾ. ರಾಜ್ ಕುಮಾರ್ ಸೇರಿದಂತೆ ಬೆಂಗಳೂರಿನ 23 ಅನಧಿಕೃತ ಪುತ್ಥಳಿಗಳನ್ನು ತೆರವಿಗಾಗಿ ಗುರುತಿಸಿರುವ ಪಾಲಿಕೆ..!

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: