ಗೋವಿಂದ ಕಾರಜೋಳರನ್ನು ಹುಡಿಕಿಕೊಡಿ - ಪೋಸ್ಟರ್ ಹಿಡಿದು ಅಡ್ಡಾಡುತ್ತಿರುವ ಕನ್ನಡಪರ ಸಂಘಟನೆಗಳು
ಸಮ್ಮೇಳನ ನಡೆಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆ ಪೊಲೀಸ್ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
news18-kannada Updated:January 31, 2020, 9:48 PM IST

ಕನ್ನಡಪರ ಸಂಘಟನೆಗಳ ಸದಸ್ಯರು
- News18 Kannada
- Last Updated: January 31, 2020, 9:48 PM IST
ಕಲಬುರ್ಗಿ (ಜ.31) : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭಗೊಂಡಿದೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಜನವರಿ 10 ರಂದು ಸಭೆ ಮಾಡಿ ಹೋದವರು ಮತ್ತೆ ಕಲಬುರ್ಗಿಗೆ ಬಂದಿಲ್ಲ. ಸಮ್ಮೇಳನ ಮುಖ್ಯ ವೇದಿಕೆಯ ಭೂಮಿ ಪೂಜೆಗೂ ಗೈರು ಹಾಜರಾಗಿದ್ದಾರೆ. ಕಲಬುರ್ಗಿಯಲ್ಲಿ ಸಮ್ಮೇಳನದ ಸಂಭ್ರಮವನ್ನೇ ಕಾಣಲಾಗುತ್ತಿಲ್ಲ. ಇದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಸಮ್ಮೇಳನ ನಡೆಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆ ಪೊಲೀಸ್ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಲಬುರ್ಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಹಾಗೂ 7 ರಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಕ್ಕೆ ಇನ್ನು ಕೇವಲ ನಾಲ್ಕು ದಿನ ಮಾತ್ರ ಬಾಕಿ ಇದೆ. ಆದರೆ ಇದುವರೆಗೂ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಮತ್ತೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಗೋವಿಂದ ಕಾರಜೋಳರ ದರ್ಶನೂ ಆಗಿಲ್ಲ. ಜನವರಿ 10 ರಂದು ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಿ ಬೆಂಗಳೂರಿಗೆ ವಾಪಸ್
ಸಮ್ಮೇಳನ ನಡೆಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡುವಂತೆ ಪೊಲೀಸ್ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಲಬುರ್ಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರವರಿ 5, 6 ಹಾಗೂ 7 ರಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಕ್ಕೆ ಇನ್ನು ಕೇವಲ ನಾಲ್ಕು ದಿನ ಮಾತ್ರ ಬಾಕಿ ಇದೆ. ಆದರೆ ಇದುವರೆಗೂ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ.