Mandya Ravi Death: ಮಗಳು ಜಾನಕಿ ಧಾರಾವಾಹಿ ಖ್ಯಾತಿಯ ಮಂಡ್ಯ ರವಿ ಇನ್ನಿಲ್ಲ

ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ಮಂಡ್ಯ ರವಿ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಂಡ್ಯ ರವಿ ಅವರು ಟಿ.ಎನ್ ಸೀತಾರಾಮ್ ಅವರ ಹಲವು ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಮಂಡ್ಯ ರವಿ

ಮಂಡ್ಯ ರವಿ

  • Share this:
ಮಗಳು ಜಾನಕಿ (Magalu Janaki) ಧಾರಾವಾಹಿ (Serial) ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ (Mandya Ravi) ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು. ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ  (Serial) ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ (Small Screen) ಡಿಮ್ಯಾಂಡ್ ಉಳಿಸಿಕೊಂಡಿದ್ದರು. 

ಅನಾರೋಗ್ಯದಿಂದ ಕೊನೆಯುಸಿರೆಳೆದ ಮಂಡ್ಯ ರವಿ

ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ (BGS Hospital) ದಾಖಲಾಗಿದ್ದ ನಟ ಮಂಡ್ಯ ರವಿ ಇಂದು ಆಸ್ಪತ್ರೆಯಲ್ಲಿಯೇ (Hospital) ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮಂಡ್ಯದತ್ತ ಅವರ ಮೃತದೇಹವನ್ನು  (Dead Body) ಕೊಂಡೊಯ್ಯಲಾಗುತ್ತಿದೆ. ಅವರ ಕುಟುಂಬ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಟಿ.ಎನ್ ಸೀತಾರಾಮ್ ಅವರ ಹಲವು ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದರು.

ಇದನ್ನೂ ಓದಿ: Actress Amulya: ಮುದ್ದು ಅವಳಿ ಮಕ್ಕಳ ಜೊತೆ ಗೋಲ್ಡನ್​ ಕ್ವಿನ್ ಮೊದಲ​ ಹುಟ್ಟು ಹಬ್ಬ

ತಂದೆಯ ಪ್ರತಿಕ್ರಿಯೆ

ನಿರ್ದೇಶಕ ಸೀತರಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಜಾಂಡಿಸ್ ಎಂದು ಆಸ್ಪತ್ರೆ ದಾಖಲಾಗಿದ್ದ ಮಂಡ್ಯ ರವಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಪುತ್ರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅವರ ತಂದೆ ನ್ಯೂಸ್ 18 ಡಿಜಿಟಲ್​ಗೆ ಸ್ಪಷ್ಟನೆ ಕೊಟ್ಟಿದ್ದರು. ಈ ಬಗ್ಗೆ ರವಿ ಅವರ ತಂದೆ ಮುದ್ದೇಗೌಡ ಮಾತನಾಡಿ ಮಗನ ಸ್ಥಿತಿ ಗಂಭೀರವಾಗಿದೆ, ಬೇಗ ಗುಣಮುಖರಾಗಲಿ ಎಂದು ಹೇಳಿದ್ದರು.

ಆದರೆ ಈಗ ನಟ ಮೃತಪಟ್ಟಿರುವುದು ದೃಢಪಟ್ಟಿದೆ. ಜಾಂಡೀಸ್​ನಿಂದ ಬಳಲುತ್ತಿದ್ದ ಹಿರಿಯ ನಟ ಕಳೆದ 10 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮೂರು ದಿನಗಳಿಂದ ಅವರ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದ್ದು ಇಂದು ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Mandya Ravi: ನನ್ನ ಮಗ ಸತ್ತಿಲ್ಲ, ಆರೋಗ್ಯ ಸ್ಥಿತಿ ಗಂಭೀರ ಇದೆ ಅಷ್ಟೇ - ಮಂಡ್ಯ ರವಿ ತಂದೆ ಸ್ಪಷ್ಟನೆ

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ರವಿ ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.

ಪ್ರಸಿದ್ಧ ಧಾರವಾಹಿಗಳು

ನಟ ರವಿ ಅನೇಕ ಧಾರಾವಾಹಿಗಳಲ್ಲಿ ಮಿಂಚಿದ್ದಾರೆ. ಚಿತ್ರಲೇಖ, ಮಿಂಚು, ಮುಕ್ತ ಮುಕ್ತ, ವರಲಕ್ಷ್ಮೀ ಸ್ಟೋರ್ಸ್ ಮುಂತಾದ ಧಾರಾವಾಹಿಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನು ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಕ್ರೈಂ ಫೈಲ್ ಕಾರ್ಯಕ್ರಮವನ್ನು ರವಿಪ್ರಸಾದ್ ನಿರೂಪಣೆ ಮಾಡಿದ್ದರು.

ನಾಟಕದಿಂದ ನಟನೆ ಜರ್ನಿ ಶುರು

ರವಿ ಪೂರ್ಣ ಹೆಸರು ರವಿ ಪ್ರಸಾದ್ ಎಂ. ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಸುತ್ತಲೇ ಮಂಡ್ಯ ರವಿ ಆಗಿ ಫೇಮಸ್ ಆದವರು. ರವಿ ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುತ್ತಾ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡವರು. ಓದಿದ್ದು ಎಂಎ ಇಂಗ್ಲಿಷ್ ಮತ್ತು ಎಲ್‍ಎಲ್‍ಬಿ ಆದರೂ, ಆಯ್ಕೆ ಮಾಡಿಕೊಂಡ ವೃತ್ತಿ ಮಾತ್ರ ನಟನೆ. 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ, ಅಲ್ಲಿಂದ ಟಿ.ಎಸ್. ನಾಗಾಭರಣ ನಿರ್ದೇಶನದ ‘ಮಹಾಮಾಯಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು.
Published by:Divya D
First published: