Basavaraj Bommai: ಶೀಘ್ರದಲ್ಲೇ ಕನ್ನಡ ಕಡ್ಡಾಯ ಕಾನೂನು ಜಾರಿ; ನಮ್ಮ ಭಾಷೆ ರಕ್ಷಣೆಗೆ ನಾವು ಬದ್ಧ ಎಂದ ಸಿಎಂ ಬೊಮ್ಮಾಯಿ

ಕನ್ನಡವೇ ಕಡ್ಡಾಯ ಎಂಬ ಮಾತುಗಳನ್ನು ಸಾಕಷ್ಟು ಕೇಳಿಯಾಗಿತ್ತು. ಈಗ ನಾವು ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತಿದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

  • Share this:
ಬೆಂಗಳೂರು (ಸೆ. 14): ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕನ್ನಡ ಕಡ್ಡಾಯದ (Kannada Compulsory) ಬಗ್ಗೆ ಮಾತಾಡಿದ್ದಾರೆ. ರಾಜ್ಯ ಸರ್ಕಾರ ಸಹ ಕನ್ನಡಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ರು.  ಅಷ್ಟೇ ಅಲ್ಲದೆ ಕನ್ನಡವನ್ನು ಕಡ್ಡಾಯಗೊಳಿಸುವ ಕಾಯ್ದೆ (Act) ಜಾರಿಗೆ ಬರಲಿದ್ದು, ಈ ಸಂಬಂಧ ವಿಧೇಯಕವು ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಇದರಿಂದ ನಾಡು- ನುಡಿಗೆ ಕಾನೂನು ಬದ್ಧ ಸಂರಕ್ಷಣೆ ಸಿಗುವಂತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ

ಹಿಂದಿ ದಿವಸ್ ಹೆಸರಿನಲ್ಲಿ ಆ ಭಾಷೆಯನ್ನು ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಇದನ್ನು ಖಂಡಿಸಿ ಕನ್ನಡ ಪರ ನಿರ್ಣಯವನ್ನು ಸದನ ಅಂಗೀಕರಿಸುವಂತೆ ಜೆಡಿಎಸ್‍ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು. ಈ ಹಂತದಲ್ಲಿ ಸರ್ಕಾರದ ನಿಲುವು ಘೋಷಿಸಿದ ಸಿಎಂ ಬೊಮ್ಮಾಯಿ, ಕನ್ನಡ ಭಾಷೆ- ನೆಲ- ಜಲ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಪುನರುಚ್ಚರಿಸಿದರು.

ಕನ್ನಡ ರಕ್ಷಣೆಗೆ ಸರ್ಕಾರ ಬದ್ಧ 

ಕನ್ನಡ ರಕ್ಷಣೆಗೆ ಹಾಗೂ ಬೆಳೆಸುವುದಕ್ಕೆ ಸರ್ಕಾರ ಬದ್ಧವಾಗಿದೆ. ಇದುವರೆಗೆ ಕನ್ನಡ ಭಾಷೆಗಾಗಿ ಪ್ರಾಧಿಕಾರ ಇತ್ತು. ಕನ್ನಡವೇ ಕಡ್ಡಾಯ ಎಂಬ ಮಾತುಗಳನ್ನು ಸಾಕಷ್ಟು ಕೇಳಿಯಾಗಿತ್ತು. ಈಗ ನಾವು ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನು ತರುತ್ತಿದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ಇದನ್ನೂ ಓದಿ:  Fishing Port: ಬಹು‌ಕೋಟಿ ವೆಚ್ಚದ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಸ್ಥಳೀಯ ಮೀನುಗಾರರಿಂದಲೇ ವಿರೋಧ!

ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ವಿಧೇಯಕ

ಮುಖ್ಯಮಂತ್ರಿಗಳ ಈ ಘೋಷಣೆಯನ್ನು ಇಡೀ ಸದನ ಪಕ್ಷಬೇಧ ಮರೆತು ಮೇಜು ತಟ್ಟುವ ಮೂಲಕ ಸ್ವಾಗತಿಸಿತು. ಪ್ರಸಕ್ತ ಅಧಿವೇಶನದಲ್ಲಿ ಸರ್ಕಾರ ತರಲಿರುವ ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ವಿಧೇಯಕ-2022ರ ಕರಡು ಬಹುತೇಕ ಸಿದ್ಧವಾಗಿದೆ. ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ನೇತೃತ್ವದಲ್ಲಿ ಈ ಕಾಯ್ದೆಗೆ ಅಂತಿಮ ರೂಪ ನೀಡಲಾಗಿದೆ. ಈ ಕಾಯ್ದೆ ಬಂದ ಮೇಲೆ ರಾಜ್ಯದ ಎಲ್ಲ ಅಂಗಗಳಲ್ಲಿಯೂ ಕನ್ನಡವೇ ಸಾರ್ವಭೌಮವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ

ವಿಧಾನಸಭೆ ಕಲಾಪದಲ್ಲಿ ಗಂಗಾಕಲ್ಯಾಣ ಯೋಜನೆಯಲ್ಲಿ ಅಕ್ರಮ ಆಗಿದೆ ಎಂಬ ಆರೋಪ ಮಾಡಿದ ಕಾಂಗ್ರೆಸ್ ಶಾಸಕರು, ಸ್ಪಷ್ಟ ಉತ್ತರ ನೀಡಬೇಕೆಂದು ಕೈ -ದಳ ಶಾಸಕರು ಇಳಿದು ಧರಣಿ ಮಾಡಿದರು. ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಬೊಮ್ಮಾಯಿ ಅವ್ಯವಹಾರದ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದರು.

ಶಾಸಕ ಪ್ರಿಯಾಂಕ್ ಖರ್ಗೆ ಒತ್ತಾಯ

ಶಾಸಕ ಪ್ರಿಯಾಂಕ್ ಖರ್ಗೆ ಗಂಗಾಕಲ್ಯಾಣ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿ, 2019-21 ರಲ್ಲಿ ಬೋರ್ ವೆಲ್ ಕೊರೆಯಲಾಗಿದೆ. ಇದರಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ ಆರೋಪವಿದೆ. ಇದರ ಬಗ್ಗೆ ಸರ್ಕಾರ ಸ್ಪಷ್ಟ ವಿವರಣೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯವ್ಯಾಪಿ ಒಂದೇ ಗುತ್ತಿಗೆದಾರರರಿಗೆ ಬಾವಿ ಕೊರೆಯುವ ಯೋಜನೆಗೆ ಆಕ್ಷೇಪ ಹೊರಹಾಕಿದ  ಶಾಸಕ ಯತೀಂದ್ರ ಸಿದ್ದರಾಮಯ್ಯ, 2018 ರ ಫಲಾನುಭವಿಗಳಿಗೆ ಬಾವಿ ಕೊರೆಯಿಸಿಲ್ಲ, ದೊಡ್ಡ ಹಗರಣ ಆಗಿದೆ ಆಂತ ಅಸಮಾಧಾನ ಹೊರ ಹಾಕಿದ ಪ್ರತಿಪಕ್ಷ ಶಾಸಕರು.

ಇದನ್ನೂ ಓದಿ:  Whale shark day: ಬಾಯಿ ಇದೆ, ಹಲ್ಲು ಇದೆ, ಆದ್ರೆ ಈ ಮೀನಿಗೆ ಜಗಿಯಲು ಬರಲ್ವಂತೆ!

ಈ ವೇಳೆ ಸಿಎಂ ಬೊಮ್ಮಾಯಿ ಉತ್ತರ ನೀಡಿ, ಹಿಂದೆ ಬೋರ್ ವೆಲ್ ಗಳನ್ನ ಕೊರೆಯಲಾಗಿತ್ತು. ಆದರೆ ಸಮರ್ಪಕವಾಗಿ ಆಗ್ತಿರಲಿಲ್ಲ. ಆದರೆ ಈಗ ಗೊಂದಲ ಸರಿಪಡಿಸುವ ಕೆಲಸ ಮಾಡ್ತಿದ್ದೇವೆ. ಕೋರ್ಟ್ ನಲ್ಲಿರುವ ಪ್ರಕರಣಗಳ ಗಮನಹರಿಸ್ತೇವೆ, ಈ ವರ್ಷ ನಾವು ಬೋರ್ ವೆಲ್ ಕೊರೆಸುವುದು. ಅದನ್ನ ಕ್ಲಿಯರ್ ಮಾಡಲು ಆದೇಶ ನೀಡ್ತೇನೆ.
ಇದಕ್ಕಾಗಿ ಕೂಡಲೇ ಸಭೆ ಕರೆದು ಚರ್ಚೆ ಮಾಡ್ತೇವೆ ಎಂದು ಉತ್ತರಿಸಿದರು.
Published by:ಪಾವನ ಎಚ್ ಎಸ್
First published: