Kannada Compulsory: ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಯಕ್ರಮದಲ್ಲಿ ಕನ್ನಡ ಕಡ್ಡಾಯ; ಅಧಿಕೃತ ಆದೇಶ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ಎಲ್ಲ ಕಾರ್ಯಕ್ರಮಗಳ ವೇದಿಕೆಯ ಮೇಲಿನ ಫಲಕಗಳು ಮತ್ತು ಪರದೆಗಳ ಮೇಲೆ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸುತ್ತೋಲೆಯಲ್ಲಿ ಅಧಿಕೃವಾಗಿ ಆದೇಶ ಪ್ರಕಟ  ಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ

 • Share this:
  ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಇನ್ನು ಮುಂದೆ ಕನ್ನಡ ಕಡ್ಡಾಯವಾಗಿರಬೇಕು (Kannada Compulsory) ಎಂದು ಕರ್ನಾಟಕ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.  ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದ್ದು ಕರ್ನಾಟಕ ಸರ್ಕಾರದ (Karnataka Government) ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ಎಲ್ಲ ಕಾರ್ಯಕ್ರಮಗಳ ವೇದಿಕೆಯ ಮೇಲಿನ ಫಲಕಗಳು ಮತ್ತು ಪರದೆಗಳ ಮೇಲೆ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸುತ್ತೋಲೆಯಲ್ಲಿ ಅಧಿಕೃವಾಗಿ ಆದೇಶ ಪ್ರಕಟ  ಮಾಡಲಾಗಿದೆ.  ಸುತ್ತೋಲೆಯಲ್ಲಿ ಏನಿದೆ?
  ಕನ್ನಡವನ್ನು ಕರ್ನಾಟಕ ರಾಜ್ಯ ಭಾಷೆಯಾಗಿ ಬಳಸತಕ್ಕದ್ದು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ, 1953ರಲ್ಲಿ ನಿರ್ದಿಷ್ಟಪಡಿಸಲಾಗಿದೆ. ಕರ್ನಾಟಕದಲ್ಲಿ ಕನ್ನಡವನ್ನು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದೆ.

  ಇದನ್ನೂ ಓದಿ: Sirsi Marikamba Temple Buffalo: ಮಾರಿಕಾಂಬೆಯ ಪಟ್ಟದ ಕೋಣ! ಇದು ಬಾಹುಬಲಿಗಿಂತ ಅಜಾನುಬಾಹು!

  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ದಿನಾಂಕ 06//082022ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕನ್ನಡ ಭಾಷೆಯನ್ನು ಬಳಸಿದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ವೇದಿಕೆಯ ಮೇಲೆ ಬಳಸಲಾಗುವ ಪರದೆ ಮತ್ತು ಫಲಕಗಳಲ್ಲಿ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿರುತ್ತಾರೆ.

  ಇದನ್ನೂ ಓದಿ: Coconut Shell: ಕೈಗೆ ಚಿಪ್ಪು ಕೊಟ್ರೆ ಮ್ಯಾಜಿಕ್ ಮಾಡ್ತಾರೆ! ತೆಂಗಿನ ಚಿಪ್ಪು ಎಸೆಯೋ ಮುನ್ನ ಇಲ್ನೋಡಿ

  ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ನು  ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಸೂಚಿಸಲಾಗಿದೆ.
  Published by:guruganesh bhat
  First published: