• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • BJP Government: ಕೇಂದ್ರೀಯ ಮೀಸಲು ಪಡೆ ಪರೀಕ್ಷೆಯಲ್ಲಿಲ್ಲ ಕನ್ನಡಕ್ಕೆ ಅವಕಾಶ; ಸಿದ್ದರಾಮಯ್ಯ, ಹೆಚ್​​ಡಿಕೆ ಕಿಡಿ

BJP Government: ಕೇಂದ್ರೀಯ ಮೀಸಲು ಪಡೆ ಪರೀಕ್ಷೆಯಲ್ಲಿಲ್ಲ ಕನ್ನಡಕ್ಕೆ ಅವಕಾಶ; ಸಿದ್ದರಾಮಯ್ಯ, ಹೆಚ್​​ಡಿಕೆ ಕಿಡಿ

ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ

ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ

ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು.

  • Share this:

ಬೆಂಗಳೂರು: ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌ - CRPF) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ (Computer Exams) ಕನ್ನಡಕ್ಕೆ (Kannada) ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ (Former CM Siddaramaiah) ಆಕ್ರೋಶ ಹೊರ ಹಾಕಿದ್ದಾರೆ. 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.


ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ ಎಂದು ಹೇಳಿದ್ದಾರೆ.


ಇದು ಸ್ಪಷ್ಟ. ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.


ಮಾರಣಾಂತಿಕ ಪೆಟ್ಟು


ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು. ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ.


ಮುಲಾಜಿಲ್ಲದೆ ಸಿಆರ್ ಪಿಎಫ್ ನೇಮಕಾತಿಯ  ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.


ಸಿದ್ದರಾಮಯ್ಯ ಆಕ್ರೋಶ


ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.


ಕನ್ನಡಿಗರು ಉದ್ಯೋಗದಿಂದ ವಂಚಿತರು


ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು  ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.




ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.


ಇದನ್ನೂ ಓದಿ: BJP Politics: ಮಕ್ಕಳಿಗೆ ಟಿಕೆಟ್ ಕೇಳಿದ ಕಮಲ ನಾಯಕರ ಪಟ್ಟಿ ಇಲ್ಲಿದೆ


ಮೋದಿ ಮಧ್ಯ ಪ್ರವೇಶಕ್ಕೆ ಆಗ್ರಹ


ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು.

top videos
    First published: