ನಾನು, ಶ್ರೀರಾಮುಲು ಅಣ್ಣ-ತಮ್ಮಂದಿರಂತೆ ಇದ್ದೇವೆ, ನಮ್ಮ ನಡುವೆ ಮುನಿಸಿಲ್ಲ; ಸಚಿವ ಸುಧಾಕರ್ ಸ್ಪಷ್ಟನೆ

ಇಂತಹ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕಾರಣದ ಷಡ್ಯಂತ್ರವಿದೆ ಎಂದು ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ

ಸಚಿವರಾದ ಡಾ. ಸುಧಾಕರ್ ಮತ್ತು ಶ್ರೀರಾಮುಲು.

ಸಚಿವರಾದ ಡಾ. ಸುಧಾಕರ್ ಮತ್ತು ಶ್ರೀರಾಮುಲು.

  • Share this:
ಬೆಂಗಳೂರು (ಏ. 4): ರಾಜ್ಯದಲ್ಲಿ ಈಗಾಗಲೇ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ನಡುವೆ ಜನರಿಗೆ ಸ್ಪಂದಿಸಬೇಕಾದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ನಡುವೆ ಅಸಮಾಧಾನವಿದೆ ಎಂಬ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಆದರೆ, ಈ ಬಗ್ಗೆ ಸ್ವತಃ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದು, ನಾವಿಬ್ಬರೂ ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದ್ದೇವೆ ಎಂದಿದ್ದಾರೆ.

ನನ್ನ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಮಧ್ಯೆ ಯಾವ ಭಿನ್ನಾಭಿಪ್ರಾಯವೂ ಇಲ್ಲ. ಇಬ್ಬರೂ ಒಟ್ಟಾಗಿ ಕೊರೋನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅಣ್ಣ-ತಮ್ಮಂದಿರಂತೆ ಇದ್ದೇವೆ. ಇಬ್ಬರೂ ಒಂದಾಗಿ ರಾಜ್ಯದ ಜನರಿಗಾಗಿ ಶ್ರಮಿಸುತ್ತಿದ್ದೇವೆ ಎಂದು ಟ್ವೀಟ್ ಮೂಲಕ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕೊರೋನಾದಿಂದ ಸಾವಿನ ಆತಂಕ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮಗೆ ನಮ್ಮದೇ ಆದ ಜವಾಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ ಹಿಂದೆ ನೀಚ ರಾಜಕಾರಣದ ಷಡ್ಯಂತ್ರವಿದೆ ಎಂದು ಡಾ. ಸುಧಾಕರ್ ಅಸಮಾಧಾನ ಹೊರಹಾಕಿದ್ದಾರೆ.ಇದನ್ನೂ ಓದಿ: ದೀಪದ ಹತ್ತಿರ ಬರುವ ಕೊರೋನಾ ವೈರಸ್​ ಶಾಖದಿಂದ ಸಾಯುತ್ತದೆ; ಬಿಜೆಪಿ ಶಾಸಕ ರಾಮದಾಸ್ ವ್ಯಾಖ್ಯಾನ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಲ್ಲಿ ಡಾ. ಕೆ. ಸುಧಾಕರ್ ಕೂಡ ಒಬ್ಬರು. ಬಳಿಕ, ಉಪಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದ ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾಗಿದ್ದ ಎಲ್ಲ ವಲಸಿಗ ಶಾಸಕರಿಗೂ ಪ್ರಮುಖ ಹುದ್ದೆಗಳನ್ನು ನೀಡಲಾಗಿತ್ತು. ಇದರಿಂದ ಮೂಲ ಬಿಜೆಪಿಗರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ವಲಸಿಗರಾದ ಡಾ. ಸುಧಾಕರ್ ಬಗ್ಗೆಯೂ ಸಚಿವ ಶ್ರೀರಾಮುಲು ಅವರಿಗೆ ಅಸಮಾಧಾನವಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆ ಬಗ್ಗೆ ಇಂದು ಡಾ. ಸುಧಾಕರ್ ಸ್ಪಷ್ಟನೆ ನೀಡಿ, ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಕೊರೋನಾಗೆ ವೃದ್ಧ ಬಲಿ; ರಾಜ್ಯದಲ್ಲಿ 4ಕ್ಕೇರಿದ ಸಾವಿನ ಸಂಖ್ಯೆ
First published: