ಚನ್ನಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಯುವಕರು ಸಾವು

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಂಗಳವಾರಪೇಟೆ ಬಳಿ ಹಾದು ಹೋದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಪರಿಣಾಮ ಸ್ಥಳದಲ್ಲೆ ಇಬ್ಬರು ಮೃತಪಟ್ಟಿದ್ದಾರೆ.

 • Share this:
  ರಾಮನಗರ (ಮಾ.2): ಚನ್ನಪಟ್ಟಣಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಚಲಾಯಿಸುತ್ತಿದ್ದ ಬೈಕ್​ ನಜ್ಜುಗುಜ್ಜಾಗಿದೆ.

  ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮಂಗಳವಾರಪೇಟೆ ಬಳಿ ಹಾದು ಹೋದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಮುಖ್ಯರಸ್ತೆಗೆ ಆಗಮಿಸುತ್ತಿದ್ದ ಬುಲೆಟ್​ ಬೈಕ್​ಗೆ ಖಾಸಗಿ ಬಸ್​ ಡಿಕ್ಕಿ ಹೊಡೆದಿದೆ. ಪರಿಣಾಮ ಸಚಿನ್ (22), ಪ್ರತಾಪ್ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  ಸಚಿನ್​ ಹಾಗೂ ಪ್ರತಾಪ್​ ಪೆಟ್ರೋಲ್ ಹಾಕಿಸಿಕೊಂಡು ಬರುತ್ತಿದ್ದರು. ಮುಖ್ಯ ರಸ್ತೆಗೆ ಬೈಕ್​ ಪ್ರವೇಶಿಸುತ್ತಿದ್ದಂತೆ ವೇಗವಾಗಿ ಬರುತ್ತಿದ್ದ ಬಸ್​ ಗುದ್ದಿದೆ. ಮೃತರು ಚನ್ನಪಟ್ಟಣದ ಕೂಡ್ಲೂರು ಗ್ರಾಮದ ನಿವಾಸಿಗಳು. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಹೋಗುವ ಮಾರ್ಗಮಧ್ಯೆ ಈ ಅಪಘಾತ ಸಂಭವಿಸಿದೆ.

  ಇದನ್ನೂ ಓದಿ: ಚುನಾವಣಾ ಅಕ್ರಮ; ಸುಪ್ರೀಂನಲ್ಲಿ ಇಂದು ವಿಚಾರಣೆಗೊಳಗಾಗಲಿದೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅರ್ಜಿ

  ಮರಣೋತ್ತರ ಪರೀಕ್ಷೆಗೆ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  (ವರದಿ: ಎಟಿ ವೆಂಕಟೇಶ್​)
  First published: