ಹೂವಿನಹಡಗಲಿಯಲ್ಲಿ ಮದುವೆ ದಿಬ್ಬಣದ ಟ್ರಾಕ್ಟರ್ ಪಲ್ಟಿ; ಒಂದೇ ಕುಟುಂಬದ ನಾಲ್ವರು ಸಾವು
ಮದುವೆಗೆ ಹೊರಟಿದ್ದ ಟ್ರ್ಯಾಕ್ಟರ್ ಹೊಂಡಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳ್ಳಾರಿ (ಮಾ. 20): ಬಳ್ಳಾರಿಯ ಹೂವಿನಹಡಗಲಿಯಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ಕು ಜನರು ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಮದುವೆಗೆ ಹೊರಟಿದ್ದ ಟ್ರ್ಯಾಕ್ಟರ್ ಹೊಂಡಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. 40 ವರ್ಷದ ಗೀತಾ, 30 ವರ್ಷದ ಸುನೀತಾ, 35 ವರ್ಷದ ವೀರಣ್ಣ ಜಕ್ಕಣ್ಣನವರ್, 50 ವರ್ಷದ ಕಾಳಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಬಂಧಿಕರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಈ ಟ್ರ್ಯಾಕ್ಟರ್ನಲ್ಲಿ ಸುಮಾರು 20 ಜನರನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ಅವರಲ್ಲಿ ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.