ಬಳ್ಳಾರಿಯ ಕೊಟ್ಟೂರೇಶ್ವರ ಜಾತ್ರೆಗೆ ಬಂದಿದ್ದ ವ್ಯಕ್ತಿ ಕರೆಂಟ್​ ಶಾಕ್​ನಿಂದ ಸಾವು

ಕೊಟ್ಟೂರೇಶ್ವರ ಜಾತ್ರೆಗೆ ಆಗಮಿಸಿದ್ದ ದಾವಣಗೆರೆಯ ಕೊಟ್ರೇಶಪ್ಪ ರಥ ವೀಕ್ಷಣೆಗೆಂದು ಮನೆ ಮೇಲೆ ನಿಂತಿದ್ದರು. ಈ ವೇಳೆ ಅವರಿಗೆ ವಿದ್ಯುತ್ ತಂತಿ ತಗುಲಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುರು ಕೊಟ್ಟೂರೇಶ್ವರ ರಥೋತ್ಸವ

ಗುರು ಕೊಟ್ಟೂರೇಶ್ವರ ರಥೋತ್ಸವ

  • Share this:
ಬಳ್ಳಾರಿ (ಫೆ. 19): ರಾಜ್ಯದ ಪ್ರಸಿದ್ಧ ಜಾತ್ರೆಯಾದ ಬಳ್ಳಾರಿಯ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ವಿದ್ಯುತ್ ತಂತಿ ತಗುಲಿ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ನಡೆದ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಸಂಭ್ರಮದ ರಥೋತ್ಸವ ಸಾವಿನಿಂದ ಅಂತ್ಯಗೊಂಡಿದೆ.

ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಅದ್ದೂರಿಯಾಗಿ ನಡೆದಿದೆ. 5 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದ ಈ ರಥೋತ್ಸವಕ್ಕೆ ಬಂದಿದ್ದ ವ್ಯಕ್ತಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ದಾವಣಗೆರೆಯ ಅಣಜಿ ಸಮೀಪದ ಕೆರೆಯಾಗಿನಹಳ್ಳಿ ಗ್ರಾಮದ ಕೊಟ್ರೇಶಪ್ಪ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ; ಒನ್​ವೇಯಲ್ಲಿ ಹೋದರೆ ಡ್ರೈವಿಂಗ್ ಲೈಸೆನ್ಸ್​ ರದ್ದು!

ಮಂಗಳವಾರ ಸಂಜೆ ನಡೆದ ಕೊಟ್ಟೂರೇಶ್ವರ ಜಾತ್ರೆಗೆ ಆಗಮಿಸಿದ್ದ ಕೊಟ್ರೇಶಪ್ಪ ರಥ ವೀಕ್ಷಣೆಗೆಂದು ಮನೆ ಮೇಲೆ ನಿಂತಿದ್ದರು. ಈ ವೇಳೆ ಅವರಿಗೆ ವಿದ್ಯುತ್ ತಂತಿ ತಗುಲಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಸಂಜೆ ನಡೆದ ಕೊಟ್ಟೂರೇಶ್ವರ ಜಾತ್ರೆಯಲ್ಲಿ ದೇವರ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ, ಮೆರವಣಿಗೆ ಮಾಡಲಾಯಿತು. ದಲಿತ ಮಹಿಳೆ ಆರತಿ ಬೆಳಗಿದ ನಂತರ ಪಲ್ಲಕ್ಕಿಯನ್ನು ಎಳೆಯಲಾಯಿತು.
First published: