ವಿಜಯಪುರದಲ್ಲಿ ಬೆಂಕಿ ದುರಂತ; ಹೆದ್ದಾರಿಯಲ್ಲೇ ಹೊತ್ತಿ ಉರಿದ ತಮಿಳುನಾಡಿನ ಲಾರಿ

Fire Accident: ತಮಿಳುನಾಡು ಮೂಲದ ಲಾರಿ ತಮಿಳುನಾಡಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಬೆಂಕಿ ಪೊಟ್ಟಣಗಳನ್ನು ಸಾಗಿಸುತ್ತಿತ್ತು. ಈ ವೇಳೆ ವಿಜಯಪುರ ಬಳಿ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ದುರಂತ ಸಂಭವಿಸಿದೆ.

news18-kannada
Updated:February 22, 2020, 9:03 AM IST
ವಿಜಯಪುರದಲ್ಲಿ ಬೆಂಕಿ ದುರಂತ; ಹೆದ್ದಾರಿಯಲ್ಲೇ ಹೊತ್ತಿ ಉರಿದ ತಮಿಳುನಾಡಿನ ಲಾರಿ
ವಿಜಯಪುರದ ಬಳಿ ಹೊತ್ತಿ ಉರಿದ ಲಾರಿ
  • Share this:
ವಿಜಯಪುರ (ಫೆ. 22): ಬೆಂಕಿಪೊಟ್ಟಣ ತುಂಬಿದ್ದ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಕಾರಣ ಕ್ಷಣಮಾತ್ರದಲ್ಲಿ ಲಾರಿ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಲಾರಿಯಿಂದ ಹೊರಗೆ ಜಿಗಿದ ಪರಿಣಾಮ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯಪುರ ಬಳಿಯ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ- 13ರಲ್ಲಿ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ಮೂಲದ ಲಾರಿ ತಮಿಳುನಾಡಿನಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ಪ್ರಾಣ ಉಳಿಸಿಕೊಳ್ಳಲು ಲಾರಿ ಚಾಲಕ ಮತ್ತು ಕ್ಲೀನರ್ ಹೊರೆಗ ಜಿಗಿದಿದ್ದಾರೆ.

ಇದನ್ನೂ ಓದಿ: ಮೋದಿ, ಶಾ ವಿರುದ್ಧ ಮಾತಾಡುವವರಿಗೆ ಗೌರಿ ಲಂಕೇಶ್​ ಗತಿಯೇ ಆಗಲಿದೆ; ಅಂದೋಲ ಶ್ರೀ ವಿವಾದಾತ್ಮಕ ಹೇಳಿಕೆ

ಘಟನೆಯ ಮಾಹಿತಿ ತಿಳಿದು ವಿಜಯಪುರದ ಅಗ್ನಿಶಾಮಕದಳದ ಸಿಬ್ಬಂದಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಸಾವಿರಾರು ಬೆಂಕಿಪೊಟ್ಟಣಗಳಿಗೆ ಒಮ್ಮೆಲೆ ಬೆಂಕಿ ಹೊತ್ತಿಕೊಂಡ ಕಾರಣ ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಹರಡಿದೆ. ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ರಸ್ತೆ ಮೇಲೆಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿವೆ. ಇಂದು ಮುಂಜಾನೆಯಿಂದ ಲಾರಿ ಹೊತ್ತಿ ಉರಿಯುತ್ತಿದ್ದು, ಬೆಂಕಿ ಆರಿಸಲು ಕಾರ್ಯ ಭರದಿಂದ ಸಾಗುತ್ತಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
First published: February 22, 2020, 9:03 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading