news18-kannada Updated:March 2, 2020, 9:17 AM IST
ಸಂಸದ ಪ್ರಜ್ವಲ್ ರೇವಣ್ಣ
ಬೆಂಗಳೂರು (ಮಾ.2): 2019ರ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿದ್ದಾರೆನ್ನಲಾದ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಕುರಿತು ಹೈಕೋರ್ಟ್ ಅರ್ಜಿ ವಜಾ ಮಾಡಿದ್ದ ಆದೇಶ ಪ್ರಶ್ನಿಸಿ ಮಾಜಿ ಸಚಿವ ಎ. ಮಂಜು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.
ಕಳೆದ
ಲೋಕಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ
ಪ್ರಜ್ವಲ್ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಹಾಸನ ಬಿಜೆಪಿ ಅಭ್ಯರ್ಥಿ ಮತ್ತು ವಕೀಲ ದೇವರಾಜೇಗೌಡ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ, ತಾಂತ್ರಿಕ ಕಾರಣದಿಂದ ಪ್ರಕರಣವನ್ನು ವಜಾಗೊಳಿಸಿದ್ದರು. ಈಗ ಈ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಹೈಕೋರ್ಟ್ ಅರ್ಜಿ ವಜಾ ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮಂಜು ಮೇಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಗಾನವಿ ಮತ್ತು ಸೂರ್ಯಕಾಂತ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.
ಅಶೋಕ್ ಬನ್ನಿದಿನ್ನಿ ಮಂಜು ಪರ ವಾದ ಮಂಡನೆ ಮಾಡುತ್ತಿದ್ದಾರೆ. ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ: ಹೈಕೋರ್ಟ್ನಲ್ಲಿ ಪ್ರಕರಣ ವಜಾ
2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಹಾಸಸದಿಂದ ಸ್ಪರ್ಧಿಸಿದ್ದರು. ಅವರ ವಿರುದ್ಧ ಸ್ಪರ್ಧಿಸಿ ಎ.ಮಂಜು ಸೋತಿದ್ದರು. ಇದಾದ ನಂತರದಲ್ಲಿ ಪ್ರಜ್ವಲ್ ವಿರುದ್ಧ ಮಂಜು ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ.
First published:
March 2, 2020, 9:17 AM IST