ಮನೆ ಬಾಗಿಲಿಗೆ ಮದ್ಯ ಪೂರೈಸುವುದು ಅವಿವೇಕದ ನಿರ್ಧಾರ; ಸಿಎಂ ವಿರುದ್ಧ ಹೆಚ್​.ಡಿ. ಕುಮಾರಸ್ವಾಮಿ ಆಕ್ರೋಶ

ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಸರ್ಕಾರ ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

news18-kannada
Updated:August 8, 2020, 12:39 PM IST
ಮನೆ ಬಾಗಿಲಿಗೆ ಮದ್ಯ ಪೂರೈಸುವುದು ಅವಿವೇಕದ ನಿರ್ಧಾರ; ಸಿಎಂ ವಿರುದ್ಧ ಹೆಚ್​.ಡಿ. ಕುಮಾರಸ್ವಾಮಿ ಆಕ್ರೋಶ
ಮಾಜಿ ಸಿಎಂ ಕುಮಾರಸ್ವಾಮಿ
  • Share this:
ಬೆಂಗಳೂರು (ಆ. 8): ಲಾಕ್​ಡೌನ್​ನಿಂದಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಭಾರೀ ಹೊಡೆತ ಬಿದ್ದಿದೆ. ಈ ಕಾರಣದಿಂದ ಹಳ್ಳಿಗಳಲ್ಲಿ ಎಂಎಸ್​ಐಎಲ್ ಮದ್ಯದಂಗಡಿಗಳನ್ನು ತೆರೆಯಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, ಇಂತಹ ಅವಿವೇಕದ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಪನ್ಮೂಲ ಸಂಗ್ರಹಣೆಯಲ್ಲಿ ಅಬಕಾರಿ ಇಲಾಖೆ ಮುಗ್ಗರಿಸಿ ಬಿದ್ದಿದೆ. ಈಗ ಆನ್​ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ ಚಿಂತನೆಯನ್ನು ಮಾಡಿದೆ. ಇದನ್ನು ತಕ್ಷಣ ಕೈ ಬಿಡುವಂತೆ ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಹಳ್ಳಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯುವ ಬಗ್ಗೆ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.ಇದನ್ನೂ ಓದಿ: Chikmagalur Rain: ಚಿಕ್ಕಮಗಳೂರಲ್ಲಿ ಭಾರೀ ಮಳೆ; ಹೆಬ್ಬಾಳೆ ಸೇತುವೆ ಮುಳುಗಡೆ; ಆ. 11ರವರೆಗೆ ಚಾರ್ಮಾಡಿ ಘಾಟ್ ಬಂದ್

ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.'ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ' ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಅಥವಾ ಆನ್​ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸರಿಯಲ್ಲ ಎಂದು ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.ರಾಜ್ಯಸರ್ಕಾರ ಎಂಎಸ್​ಐಎಲ್ ಮೂಲಕ ಮದ್ಯ ಮಾರಾಟ ಮಾಡಲು ಅನುಮತಿ ನೀಡಲಿದೆ ಎನ್ನಲಾಗಿದೆ. ಹಾಗೇ, ಆನ್​ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published by: Sushma Chakre
First published: August 8, 2020, 12:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading