ಮಂಗಳೂರು ಸಿಎಎ ಘರ್ಷಣೆ-ಗೋಲಿಬಾರ್​ ಪ್ರಕರಣ; ಪೊಲೀಸರ ವಿರುದ್ಧ FIR ದಾಖಲಿಸುವಂತೆ ಆದೇಶಿಸಿದ ಹೈಕೋರ್ಟ್

ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆದಿದ್ದ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರೀ ಘರ್ಷಣೆ ಉಂಟಾಗಿತ್ತು. ಈ ವೇಳೆ ಹಿಂಸಾಚಾರವನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಗೋಲಿಬಾರ್​ ನಡೆಸಿದ್ದರು. ಈ ಗೋಲಿಬಾರ್​ನಲ್ಲಿ ಇಬ್ಬರು ಮುಸ್ಲಿಂ ಯುವಕರು ಬಲಿಯಾಗಿದ್ದರು. ಅಲ್ಲದೆ, ಪೊಲೀಸರ ಈ ನಡೆಗೆ ರಾಷ್ಟ್ರದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

 • Share this:
  ಬೆಂಗಳೂರು(ಫೆ.19): ಮಂಗಳೂರಿನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದ ಘರ್ಷಣೆ ಹಾಗೂ ಗೋಲಿಬಾರ್ ಸಂಬಂಧ ಮಂಗಳೂರು ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಹೈ ಕೋರ್ಟ್​ ಏಕ ಸದಸ್ಯ ಪೀಠ ಇಂದು ಮಹತ್ವದ ಆದೇಶ ನೀಡಿದೆ.

  ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧವೂ ಎಫ್​ಐಆರ್​ ದಾಖಲಿಸಬೇಕು ಎಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮಂಗಳೂರು ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ಆದೇಶ ಹೊರಡಿಸಿದೆ.

  ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಈ ಆದೇಶವನ್ನು ನೀಡಿದ್ದು, ಇದಕ್ಕೆ ಪೂರಕವಾಗಿ ಈ ಹಿಂದೆ ಇದೇ ರೀತಿಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಲಲಿತಾ ಕುಮಾರಿ ನೀಡಿರುವ ತೀರ್ಪನ್ನು ಉಲ್ಲೇಖಿಸಿದ್ದಾರೆ. ಇದರ ಆಧಾರದಲ್ಲಿ ಪ್ರಕರಣಕ್ಕೆ ಸಂಬಂಧಿಸದಂತೆ ಪೊಲೀಸರ ಮೇಲೂ ಎಫ್​ಐಆರ್​ ದಾಖಲಾಗಬೇಕು ಎಂದು ಅವರು ತಿಳಿಸಿದ್ದಾರೆ. ಅಲ್ಲದೇ, ಪೊಲೀಸರ ವಿರುದ್ಧ ದೂರು ನೀಡಿದ್ದರೂ ಎಫ್ ಐಆರ್ ಏಕೆ ದಾಖಲಿಸಿಲ್ಲ? ಎಂದು ಸರ್ಕಾರದ ಪರ ವಕೀಲರಿಗೆ ನ್ಯಾಯಮೂರ್ತಿ ಕಟುವಾಗಿ ಪ್ರಶ್ನಿಸಿದ್ದಾರೆ.

  ತಪಸ್ ಪಾಲ್ ಸಾವಿಗೆ ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕೀಯ ನೀತಿಯೇ ಕಾರಣ; ಮಮತಾ ಬ್ಯಾನರ್ಜಿ ಕಿಡಿ

  ಇದಕ್ಕೆ ಉತ್ತರಿಸಿದ ವಕೀಲರು, ಈ ಬಗೆಗಿನ ಎಲ್ಲಾ ಮಾಹಿತಿಯನ್ನು ಫೆಬ್ರವರಿ 24ರಂದು ವಿಭಾಗೀಯ ಪೀಠದ ಎದುರು ಹಾಜರುಪಡಿಸುತ್ತೇವೆ. ಅಲ್ಲಿಯವರೆಗೆ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ ಮೊದಲು ಪೊಲೀಸರ ವಿರುದ್ಧ ಎಫ್ಐ ಆರ್ ದಾಖಲಿಸಿ ನಂತರ ತನಿಖೆ ಕೈಗೊಳ್ಳಿ ಎಂದು ಆದೇಶಿಸಿದೆ.

  ಪ್ರಕರಣದ ಹಿನ್ನಲೆ‌:

  ಕಳೆದ 2019ರ ಡಿಸಬರ್ 19ರಂದು ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಸುಮಾರು 1500 ರಿಂದ 2000 ಮಂದಿ ಮುಸ್ಲಿಂ ಯುವಕರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ಕಲ್ಲು, ಬಾಟೆಲ್ ತೂರಾಟ ಮಾಡಿದ್ದರೆಂದು ಆರೋಪಿಸಿ ಪೊಲೀಸರು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದರು. ಮಂಗಳೂರು ನಾರ್ಥ್ ಠಾಣೆ ಪೊಲೀಸರು ಸೆಕ್ಷನ್ 143 ಸೇರಿ ಹಲವು ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದರು.

  ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆದಿದ್ದ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರೀ ಘರ್ಷಣೆ ಉಂಟಾಗಿತ್ತು. ಈ ವೇಳೆ ಹಿಂಸಾಚಾರವನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಗೋಲಿಬಾರ್​ ನಡೆಸಿದ್ದರು. ಈ ಗೋಲಿಬಾರ್​ನಲ್ಲಿ ಇಬ್ಬರು ಮುಸ್ಲಿಂ ಯುವಕರು ಬಲಿಯಾಗಿದ್ದರು. ಅಲ್ಲದೆ, ಪೊಲೀಸರ ಈ ನಡೆಗೆ ರಾಷ್ಟ್ರದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

  ಕೊಟ್ಟ ಮಾತು ಉಳಿಸಿಕೊಂಡ ಸಿದ್ದರಾಮಯ್ಯ: ಬಾದಾಮಿ ಅಭಿವೃದ್ದಿಗೆ 600 ಕೋಟಿ. ರೂ ಅನುದಾನ ತರುವಲ್ಲಿ ಯಶಸ್ವಿ

   
  First published: