ಸರ್ಕಾರದ ನಿರ್ಲಕ್ಷ್ಯಕ್ಕೆ ಖಂಡನೆ; ಜುಲೈ 10ರಿಂದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಪ್ರತಿಭಟನೆ

Karnataka Asha Workers Protest: ಕರ್ನಾಟಕದಲ್ಲಿ ಜುಲೈ10 ರಿಂದ ಆಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ. ಮಾಸಿಕ ಗೌರವ ಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಆಗ್ರಹಿಸಿ ಅವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.

ಈ ಮೊದಲು ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತೆಯರು

ಈ ಮೊದಲು ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತೆಯರು

  • Share this:
ಬೆಂಗಳೂರು (ಜು. 7): ಕೊರೋನಾ ವಾರಿಯರ್​ಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ತಮಗೆ ನೀಡುವ ವೇತನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಜುಲೈ 10ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಹೋರಾಡುತ್ತಿರುವ ನಮಗೆ ಚಪ್ಪಾಳೆ, ಹೂ ಮಳೆಗಳ ಗೌರವ ಸಾಕು, ಗೌರವಯುತ ಬದುಕು ನಡೆಸಲು ಗೌರವ ಧನ ಬೇಕು ಎಂದು ಆಗ್ರಹಿಸಿ 42 ಸಾವಿರ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಕೊರೋನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ, ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಮುಷ್ಕರ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಜುಲೈ10 ರಿಂದ ಆಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ. ಮಾಸಿಕ ಗೌರವ ಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರಕ್ಕೆ 10 ಮನವಿ ಪತ್ರ ನೀಡಿದರೂ ಸರ್ಕಾರ ಸ್ಪಂದಿಸಿಲ್ಲ. ಇದೀಗ ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಅಶಾ ಕಾರ್ಯಕರ್ತೆಯರ ಪ್ರತಿಭಟನೆಯ ಕಾವು ತಟ್ಟುತ್ತಿದೆ.

ಇದನ್ನೂ ಓದಿ: Bangalore Coronavirus: ಬೆಂಗಳೂರಿನ ಎಚ್​ಎಎಲ್​ ಪೊಲೀಸ್ ಠಾಣೆಯ 12 ಸಿಬ್ಬಂದಿಗೆ ಕೊರೋನಾ!

ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಅಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ. ಕೊರೋನಾ ತಡೆಯಲು ಅಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ. ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚುವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿದೆ. ಇದೀಗ ಇವರೆಲ್ಲರೂ ಮುಷ್ಕರ ನಡೆಸುತ್ತಿರುವುದಾಗಿ ಘೋಷಿಸಿರುವುದರಿಂದ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ.
Published by:Sushma Chakre
First published: