ಸಿದ್ದರಾಮಯ್ಯ ಏಕಾಂಗಿಯಲ್ಲ, ಆರೋಪ ಮಾಡೋದು ಬಿಟ್ಟು ಬಿಜೆಪಿಗೆ ಬೇರೆ ಕೆಲಸವಿಲ್ಲ; ದಿನೇಶ್ ಗುಂಡೂರಾವ್ ತಿರುಗೇಟು

ಸಿದ್ದರಾಮಯ್ಯ ಏಕಾಂಗಿ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಏಕಾಂಗಿಯಲ್ಲ. ಈಗಾಗಲೇ ಕಾಂಗ್ರೆಸ್​ನ ಕೆಲವು ನಾಯಕರು ಫೀಲ್ಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ನಾಳೆಯಿಂದ ಎಲ್ಲಾ ನಾಯಕರು ಪ್ರಚಾರ ಮಾಡುತ್ತಾರೆ ಎಂದಿದ್ದಾರೆ.

news18-kannada
Updated:November 22, 2019, 3:22 PM IST
ಸಿದ್ದರಾಮಯ್ಯ ಏಕಾಂಗಿಯಲ್ಲ, ಆರೋಪ ಮಾಡೋದು ಬಿಟ್ಟು ಬಿಜೆಪಿಗೆ ಬೇರೆ ಕೆಲಸವಿಲ್ಲ; ದಿನೇಶ್ ಗುಂಡೂರಾವ್ ತಿರುಗೇಟು
ದಿನೇಶ್​ ಗುಂಡೂರಾವ್​
  • Share this:
ಬೆಂಗಳೂರು (ನ. 22): ಕಾಂಗ್ರೆಸ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದರು. ಕಾಂಗ್ರೆಸ್ ಪಕ್ಷ ಯಾವತ್ತೂ ಯಾರನ್ನೂ ಒಬ್ಬಂಟಿ ಮಾಡುವುದಿಲ್ಲ ಎಂದು ಅದಕ್ಕೆ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು.  ಬಿಜೆಪಿ ನಾಯಕರ ಹೇಳಿಕೆಗೆ ಇಂದು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 'ಸಿದ್ದರಾಮಯ್ಯ ಏಕಾಂಗಿಯಲ್ಲ. ನಾಳೆಯಿಂದ ಎಲ್ಲ ನಾಯಕರೂ ಚುನಾವಣಾ ಕಣಕ್ಕಿಳಿದು ಪ್ರಚಾರ ಮಾಡಲಿದ್ದಾರೆ' ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಏಕಾಂಗಿ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ ಏಕಾಂಗಿಯಲ್ಲ. ಈಗಾಗಲೇ ಕಾಂಗ್ರೆಸ್​ನ ಕೆಲವು ನಾಯಕರು ಫೀಲ್ಡ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ನಾಳೆಯಿಂದ ಎಲ್ಲಾ ನಾಯಕರು ಪ್ರಚಾರ ಮಾಡುತ್ತಾರೆ. ಎಲ್ಲ ಕಡೆ ಪ್ರಚಾರ ಮಾಡಬೇಕಾಗಿರುವುದರಿಂದ ಒಬ್ಬೊಬ್ಬರಿಗೆ ಒಂದೊಂದು ಕ್ಷೇತ್ರವನ್ನು ಹಂಚಿದ್ದೇವೆ. ಕ್ಷೇತ್ರವಾರು ನಾಯಕರಿಗೆ ಪ್ರಚಾರವನ್ನು ಹಂಚಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಒಂದು ಫೋನ್ ಕರೆಯಿಂದ ಚನ್ನಪಟ್ಟಣದಲ್ಲಿ ಮುರಿದುಬಿತ್ತು ಮದುವೆ; ಅದೇ ಮುಹೂರ್ತದಲ್ಲಿ ತಾಳಿ ಕಟ್ಟಿದ ಪಕ್ಕದೂರಿನ ಹುಡುಗ

ಡಾ. ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್, ಕೆ.ಎಚ್​. ಮುನಿಯಪ್ಪ ಕೂಡ ಬರುತ್ತಾರೆ. ಅವರು ಪ್ರಚಾರದ ದಿನಾಂಕ ನೀಡಿದ್ದಾರೆ. ನಾವೆಲ್ಲರೂ ಒಟ್ಟಾಗಿಯೇ ಕೆಲಸ ಮಾಡುತ್ತೇವೆ. ಎಲ್ಲರೂ ಒಂದೇ ಕಡೆ ಕೆಲಸ ಮಾಡಲು ಆಗುವುದಿಲ್ಲ. ಹೀಗಾಗಿ, ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಂಡಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿ ಏಕಾಂಗಿಯಾಗಿದ್ದಾರೆ? ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡಬೇಕೆಂದು ಮಾಡುತ್ತಿದ್ದಾರೆ ಅಷ್ಟೇ. ಅವರಿಗೆ ಅದು ಬಿಟ್ಟು ಬೇರೇನೂ ಕೆಲಸ ಇಲ್ಲ. ನಾವು ಅಂತಹ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸಭೆ ಮುಂದೂಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ದಿನೇಶ್ ಗುಂಡೂರಾವ್, ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿದಿಲ್ಲವಾದ್ದರಿಂದ ವೇಣುಗೋಪಾಲ್ ಬೆಂಗಳೂರಿಗೆ ಬಂದಿಲ್ಲ. ಅವರು ನಾಳೆ ಬರಲಿದ್ದಾರೆ. ಬಂದ ಮೇಲೆ ನಾಯಕರ ಸಭೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

  
First published:November 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ