HOME » NEWS » State » KANNADA NEWS LIVE NEWS BREAKING NEWS MAGISTERIAL INVESTIGATION WILL STARTS ON MANGALORE CASE FROM TODAY GNR

ಮಂಗಳೂರು ಗೋಲಿಬಾರ್​​ ಪ್ರಕರಣ: ಇಂದು ಉಡುಪಿಯಲ್ಲಿ ಮ್ಯಾಜಿಸ್ಟಿರಿಯಲ್ ವಿಚಾರಣೆ

ಮಂಗಳೂರು ಗೋಲಿಬಾರ್​​ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ಧಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಮತ್ತು ಉಮರ್ ಎಂಬುವರು ಅರ್ಜಿ ಸಲ್ಲಿಸಿದರು. ಈ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್​​ ರಾಜ್ಯ ಸರ್ಕಾರಕ್ಕೆ ನೋಟಿಸ್​​ ಜಾರಿಗೊಳಿಸಿದೆ. ಪೊಲೀಸರ ಗೋಲಿಬಾರ್​​ ಕುರಿತಂತೆ ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ.

news18-kannada
Updated:February 19, 2020, 8:44 AM IST
ಮಂಗಳೂರು ಗೋಲಿಬಾರ್​​ ಪ್ರಕರಣ: ಇಂದು ಉಡುಪಿಯಲ್ಲಿ ಮ್ಯಾಜಿಸ್ಟಿರಿಯಲ್ ವಿಚಾರಣೆ
ಮಂಗಳೂರಲ್ಲಿ ನಡೆದ ಗೋಲಿಬಾರ್ ದೃಶ್ಯ
  • Share this:
ಬೆಂಗಳೂರು(ಫೆ.19): ಇಂದು ಮಂಗಳೂರು ಗೋಲಿಬಾರ್​​​ ಪ್ರಕರಣದ ಬಗ್ಗೆ ಮ್ಯಾಜಿಸ್ಟಿರಿಯಲ್ ವಿಚಾರಣೆ ನಡೆಯಲಿದೆ. ಕಳೆದ ಡಿಸೆಂಬರ್​​ 19ನೇ ತಾರೀಕಿನಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್​​ ಬಗ್ಗೆ ಯಾರ ಬಳಿಯಾದರೂ ವಿಡಿಯೋ ತುಣುಕು ಮತ್ತು ಸಮರ್ಪಕ ಸಾಕ್ಷ್ಯಾಧಾರಗಳಿದ್ದರೆ ಸಲ್ಲಿಸಬಹುದಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಮಂಗಳೂರು ಸಹಾಯಕ ಆಯುಕ್ತರ ಕೋರ್ಟ್ ಹಾಲ್​​ನಲ್ಲಿ ನಡೆಯಲಿರುವ ವಿಚಾರಣೆ ನಡೆಯಲಿದ್ದು, ಪ್ರಕರಣದ ಅಂತಿಮ ಹಂತ ಇದಾಗಲಿದೆ. 

ಮಂಗಳೂರು ಗೋಲಿಬಾರ್​​ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ಧಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಮತ್ತು ಉಮರ್ ಎಂಬುವರು ಅರ್ಜಿ ಸಲ್ಲಿಸಿದರು. ಈ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್​​ ರಾಜ್ಯ ಸರ್ಕಾರಕ್ಕೆ ನೋಟಿಸ್​​ ಜಾರಿಗೊಳಿಸಿದೆ. ಪೊಲೀಸರ ಗೋಲಿಬಾರ್​​ ಕುರಿತಂತೆ ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ.

ಕಳೆದ ಡಿಸೆಂಬರ್​​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದಂತೆಯೇ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ಕರ್ಫ್ಯೂ ಜಾರಿ ಮಾಡಲಾಗಿತ್ತು. ಈ ವೇಳೆ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಬೆನ್ನಲ್ಲೇ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಜಲೀಲ್ ಮತ್ತು ನೌಶಾದ್ ವಿರುದ್ಧವೇ ಎಫ್​ಐಆರ್ ದಾಖಲಿಸುವ ಮೂಲಕ ಪೊಲೀಸರು ವಿವಾದಕ್ಕೆ ಕಾರಣರಾಗಿದ್ದರು. ಡಿ. 19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಮಂಗಳೂರಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಪೊಲೀಸರನ್ನು ಕೊಲ್ಲು ಸಂಚು ರೂಪಿಸಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದಾಗ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಮೃತ ಅಬ್ದುಲ್ ಜಲೀಲ್ ಮತ್ತು ನೌಶಾದ್ ಸೇರಿದಂತೆ 29 ಜನರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸ್ ಗುಂಡಿನ ದಾಳಿಗೆ ಬಲಿಯಾದ ಜಲೀಲ್​ನನ್ನು 3ನೇ ಆರೋಪಿಯೆಂದು ಹಾಗೂ ನೌಶಾದ್​ನನ್ನು 8ನೇ ಆರೋಪಿಯೆಂದು ನಮೂದಿಸಲಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು, ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂಬ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೃತರ ವಿರುದ್ಧವೇ ಎಫ್​ಐಆರ್ ದಾಖಲಿಸಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಮಧ್ಯೆಯೇ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಹೈಕೋರ್ಟ್​​ ಮೆಟ್ಟಿಲೇರಿದರು.

ಇದನ್ನೂ ಓದಿ: ‘ಗಾಂಧಿ ಕಟ್ಟರ್​​ ಸನಾತನಿ ಹಿಂದೂ ಆಗಿದ್ದರು‘: ಆರ್​​ಎಸ್​ಎಸ್​​ ಮುಖ್ಯಸ್ಥ ಮೋಹನ್ ಭಾಗವತ್

ಈ ಬೆನ್ನಲ್ಲೇ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಜಲೀಲ್ ಮತ್ತು ನೌಶಾದ್ ವಿರುದ್ಧವೇ ಎಫ್​ಐಆರ್ ದಾಖಲಿಸುವ ಮೂಲಕ ಪೊಲೀಸರು ವಿವಾದಕ್ಕೆ ಕಾರಣರಾಗಿದ್ದರು. ಡಿ. 19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಮಂಗಳೂರಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಪೊಲೀಸರನ್ನು ಕೊಲ್ಲು ಸಂಚು ರೂಪಿಸಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದಾಗ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿತ್ತು.ಈ ಘಟನೆಗೆ ಸಂಬಂಧಿಸಿದಂತೆ ಮೃತ ಅಬ್ದುಲ್ ಜಲೀಲ್ ಮತ್ತು ನೌಶಾದ್ ಸೇರಿದಂತೆ 29 ಜನರ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸ್ ಗುಂಡಿನ ದಾಳಿಗೆ ಬಲಿಯಾದ ಜಲೀಲ್​ನನ್ನು 3ನೇ ಆರೋಪಿಯೆಂದು ಹಾಗೂ ನೌಶಾದ್​ನನ್ನು 8ನೇ ಆರೋಪಿಯೆಂದು ನಮೂದಿಸಲಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು, ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂಬ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೃತರ ವಿರುದ್ಧವೇ ಎಫ್​ಐಆರ್ ದಾಖಲಿಸಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಮಧ್ಯೆಯೇ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಹೈಕೋರ್ಟ್​​ ಮೆಟ್ಟಿಲೇರಿದರು.
First published: February 19, 2020, 7:05 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading