ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (Sara Aboobacker) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ (Health) ಬಳಲುತ್ತಿದ್ದ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ಸಾರಾ ಅಬೂಬಕ್ಕರ್ ಅವರಿಗೆಮ 87 ವರ್ಷ ವಯಸ್ಸು ಆಗಿತ್ತು. ಸಾರಾ ಅಬೂಬಕ್ಕರ್ ಮಹಿಳಾ ಸಬಲೀಕರಣದ (Women Empowerment) ಚಿಂತನೆ ಹೊಂದಿದ್ದರು. ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಜೂನ್ 30, 1936ರಂದು ಕಾಸರಗೋಡಿನ (Kaasargodu) ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ.
ಸಾರಾ ಅಬೂಬಕ್ಕರ್ ಕಾದಂಬರಿಗಳು
ಚಂದ್ರಗಿರಿಯ ತೀರದಲ್ಲಿ- 1984, ಸಹನಾ, - 1985, ವಜ್ರಗಳು, ಕದನವಿರಾಮ, - 1988, ಸುಳಿಯಲ್ಲಿ ಸಿಕ್ಕವರು 1994 ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ 1997, ಪಂಜರ, ಇಳಿಜಾರು, ಕಾಣಿಕೆ
ಕಥಾ ಸಂಕಲನಗಳು
ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು (1992), ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು) 2004, ಗಗನ ಸಖಿ 2007
ಬಾನುಲಿ ನಾಟಕಗಳು
ಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು.
ಲೇಖನ ಮತ್ತು ಅನುವಾದಗಳು
ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು).
ಪ್ರವಾಸ ಕಥನ
ಐಷಾರಾಮದ ಆಳದಲ್ಲಿ.
ಪ್ರಶಸ್ತಿ ಗೌರವಗಳು
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ,‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.
ಇದನ್ನೂ ಓದಿ: Namma Metro Tragedy: ಜಗತ್ತಿಗೆ ಜೊತೆಯಾಗಿ ಬಂದ ಮಕ್ಕಳನ್ನ ಬೇರ್ಪಡಿಸಿದ ಮೆಟ್ರೋ ಪಿಲ್ಲರ್
ಸಿದ್ದರಾಮಯ್ಯ ಸಂತಾಪ
ಮಾಜಿ ಸಿಎಂ, ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ತಾನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ,
ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ
ಹಿರಿಯ ಸಾಹಿತಿ ಸಾ ರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/NOvI2zoweH
— Siddaramaiah (@siddaramaiah) January 10, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ