MES Bhagwa Flag Row: ಬೆಳಗಾವಿ: ಕರ್ನಾಟಕ - ಮಹಾರಾಷ್ಟ್ರ ನಡುವಿನ ಗಡಿ (Karnataka-Maharashtra Border Issue) ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಜ್ಯಗಳ ನಡುವೆ ಉಂಟಾಗಿರೋ ದ್ವೇಷಮಯ ವಾತಾವರಣ ಕಡಿಮೆ ಮಾಡಲು ಕೇಂದ್ರ ಸರ್ಕಾರದ (Central Government) ಮುಂದಾಗಿದೆ. ಇದೇ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah) ನೇತೃತ್ವದಲ್ಲಿ ಮಹತ್ವದ ಸಭೆ ಸಹ ನಡೆಯಲಿದೆ. ಈ ನಡುವೆ ಬೆಳಗಾವಿಯಲ್ಲಿ ಮತ್ತೊಂದು ಧ್ವಜ ವಿವಾದ (Flag Row) ಭುಗಿಲೇಳುವ ಎಲ್ಲಾ ಲಕ್ಷಣ ಕಂಡು ಬಂದಿದೆ. ಈಗಾಗಲೇ ಬೆಳಗಾವಿ ಜಿಲ್ಲಾಡಳಿತಕ್ಕೆ ಪತ್ರದ ಎಚ್ಚರಿಕೆ ನೀಡಿರುವ ಹೋರಾಟಗಾರ ಭೀಮಪ್ಪ ಗಡಾದ್ ನಿಪ್ಪಾಣಿ ನಗರಸಭೆ (Nippani) ಮೇಲಿರೋ ಧ್ವಜ ತೆರವು ಮಾಡಬೇಕು. ಇಲ್ಲವೇ ನಾನೇ ಕನ್ನಡ ಪರ ಹೋರಾಟಗಾರರ ಜೊತೆಗೆ ಹೋಗಿ ಧ್ವಜ ತೆರವು ಮಾಡುತ್ತೇವೆ ಮುಂದಾಗೋ ಅನಾಹುತಕ್ಕೆ ಸರ್ಕಾರವೇ ಹೊಣೆ ಎನ್ನುವ ಹೇಳಿಕೆ ನೀಡಿದ್ದಾರೆ
ಕಾನೂನು ಬಾಹಿರವಾಗಿ ಹಾರಾಡುತ್ತಿರುವ ಎಂಇಎಸ್ ಭಗವಾ ಧ್ವಜ (MES Bhagwa Flag) ತೆರವುಗೊಳಿಸಬೇಕು. ಬೆಳಗಾವಿ ಜಿಲ್ಲಾಧಿಕಾರಿ, ಎಸ್ಪಿಗೆ ಮನವಿ ಆರ್ ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ್ ಪತ್ರ ಮೂಲಕ ಮನವಿ ಮಾಡಿದ್ದಾರೆ.
31 ವರ್ಷಗಳಿಂದ ಧ್ವಜ ಹಾರಾಟ
ನಿಪ್ಪಾಣಿ ನಗರಸಭೆ ಮೇಲೆ 31 ವರ್ಷಗಳಿಂದ ನಾಡದ್ರೋಹಿ ಎಂಇಎಸ್ ಧ್ವಜ ಹಾರಾಡುತ್ತಿದೆ. ಕಚೇರಿಗಳ ಮೇಲೆ ರಾಷ್ಟ್ರೀಯ ಬಾವುಟ ಹಾಗೂ ಸರ್ಕಾರದಿಂದ ಅನುಮೋದಿತ ಬಾವುಟ ಮಾತ್ರ ಹಾರಿಸಬೇಕು.
ಈ ಬಗ್ಗೆ 1964ರ ಕರ್ನಾಟಕ ಪೌರಸಭೆಗಳ ಅಧಿನಿಯಮ ಸೆಕ್ಷನ್ 372ಎ ದಲ್ಲಿ ವಿವರಿಸಲಾಗಿದೆ. ಈ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ 3 ತಿಂಗಳ ಜೈಲು ಶಿಕ್ಷೆ ಇದೆ. ಪ್ರತಿಯೊಂದು ದಿನಕ್ಕೆ 500 ರೂ. ದಂಡ ವಿಧಿಸುವ ಬಗ್ಗೆ ಉಲ್ಲೇಖವಿದೆ.
ಧ್ವಜ ತೆರವುಗೊಳಿಸಲು ಆಗ್ರಹ
ಆದರೇ ನಿಪ್ಪಾಣಿ ನಗರಸಭೆ ಕಟ್ಟಡ ಮೇಲೆ ಇದ್ಯಾವುದನ್ನು ಲೆಕ್ಕಿಸಿದೇ ಎಂಇಎಸ್ ನ ಭಗವಾ ಧ್ವಜ ಹಾರಿಸಲಾಗುತ್ತಿದೆ. ಇದನ್ನೂ ಕೂಡಲೇ ತೆರವುಗೊಳಿಸಬೇಕು ಎಂದು ಗಡಾದ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Karnataka Election: ಬಿಜೆಪಿಗೆ ಗುಜರಾತ್, ಕಾಂಗ್ರೆಸ್ಗೆ ಹಿಮಾಚಲ ಮಾಡೆಲ್; ಕರ್ನಾಟಕ ಕದನ ಕಣದಲ್ಲಿ ಹತ್ತಾರು ಲೆಕ್ಕಾಚಾರ!
ಬೆಳಗಾವಿಯಲ್ಲಿ ಮಾತನಾಡಿದ ಆರ್ಟಿ ಐ ಕಾರ್ಯಕರ್ತ ಭೀಮಪ್ಪ ಗಡಾದ್, ಕಳೆದ ವರ್ಷ ಡಿಸೆಂಬರ್ 22ರಂದು ಸಿಎಂ, ಪೌರಾಡಳಿತ ಸಚಿವರಿಗೆ ಪತ್ರ ಬರೆದಿದ್ದೆ. ದೂರು ನೀಡಿ ಒಂದು ವರ್ಷವಾದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.
ಜಿಲ್ಲಾಡಳಿತ, ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ
ಈ ಸರ್ಕಾರ ಕನ್ನಡಪರ ಇದೆಯೋ ಇಲ್ವೋ ಎಂಬ ಅನುಮಾನ ಕಾಡುತ್ತಿದೆ. ನಿಪ್ಪಾಣಿ ನಗರಸಭೆ ಕಟ್ಟಡ ಮೇಲಿನ ಭಗವಾ ಧ್ವಜ ಕೂಡಲೇ ತೆರವುಗೊಳಿಸಿ, ಇಲ್ಲವೇ ಬೆಳಗಾವಿ ಅಧಿವೇಶನ ವೇಳೆ ನಾವೇ ಭಗವಾ ಧ್ವಜ ಕಿತ್ತು ಕನ್ನಡ ಬಾವುಟ ಹಾರಿಸುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಜಿಲ್ಲಾಡಳಿತ, ರಾಜ್ಯ ಸರ್ಕಾರವೇ ಹೊಣೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Siddaramaiah: ಬಿಜೆಪಿ ಕೇಳ್ತಿರೋ ‘ಆ’ ಒಂದು ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡೋದು ಯಾವಾಗ?
ಈಗಾಗಲೇ ಕರ್ನಾಟಕ- ಮಹಾರಾಷ್ಟ್ರ ನಡುವೆ ಗಡಿ ವಿವಾದ ತಾರಕಕ್ಕೇ ಏರಿದ್ದು, ಎರಡು ರಾಜ್ಯಗಳಲ್ಲಿ ಪ್ರತಿಭಟನೆ, ದಾಳಿಗಳು ನಡೆದಿದೆ. ಈ ಧ್ವಜ ವಿವಾದನ್ನು ಬೆಳಗಾವಿ ಜಿಲ್ಲಾಡಳಿತ ಯಾವ ರೀತಿ ಇತ್ಯರ್ಥ ಪಡಿಸಲಿದೆ ಎಂಬುದು ಕಾದು ನೋಡಬೇಕು.
ದೆಹಲಿಯಲ್ಲಿ ಹೈ ವೋಲ್ಟೇಜ್ ಮೀಟಿಂಗ್
ಯಾವುದೇ ಕಾರಣಕ್ಕೂ ಕರ್ನಾಟಕದ ನಿಲುವಿನಲ್ಲಿ ಬದಲಾವಣೆ ಇಲ್ಲ. ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದೆ. ಮಹಾರಾಷ್ಟ್ರ ಸರ್ಕಾರ ನಮ್ಮ ತಂಟೆಗೆ ಬರದಂತೆ ಹೇಳಿ ಎಂದು ಆಗ್ರಹಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ.
ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಂಇಎಸ್ ಮಹಾಮೇಳಕ್ಕೂ ಅವಕಾಶ ಕೊಡದಂತೆ ಹಾಗೂ ಅಂದಿನ ಸಮ್ಮೇಳನಕ್ಕೆ ಮಹಾರಾಷ್ಟ್ರ ನಾಯಕರು ಬರದಂತೆ ಸೂಚಿಸುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿಕೊಳ್ಳಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ