ಬ್ಯಾಂಕಿಂಗ್ ಪರೀಕ್ಷೆ; ಕನ್ನಡಕ್ಕೆ ಕಿಮ್ಮತ್ತು ನೀಡದ ಕೇಂದ್ರ ಸರ್ಕಾರ; ಹಿಂದಿ-ಇಂಗ್ಲೀಷ್​​ಗೆ ಮಾತ್ರ ಅವಕಾಶ

ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ  ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿವಿಧ ಕನ್ನಡ ಸಂಘಟನೆಗಳು ಬೀದಿಗಿಳಿದಿದ್ದವು. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಹಾಗೂ ಸಂಸದ ತೇಜಸ್ವಿ ಸೂರ್ಯ ಸಂಸತ್ತಿನಲ್ಲೂ ಈ ಬಗ್ಗೆ ಧ್ವನಿ ಎತ್ತಿದ್ದರು.

Ganesh Nachikethu | news18
Updated:September 13, 2019, 9:32 AM IST
ಬ್ಯಾಂಕಿಂಗ್ ಪರೀಕ್ಷೆ; ಕನ್ನಡಕ್ಕೆ ಕಿಮ್ಮತ್ತು ನೀಡದ ಕೇಂದ್ರ ಸರ್ಕಾರ; ಹಿಂದಿ-ಇಂಗ್ಲೀಷ್​​ಗೆ ಮಾತ್ರ ಅವಕಾಶ
ಸಾಂದರ್ಭಿಕ ಚಿತ್ರ
  • News18
  • Last Updated: September 13, 2019, 9:32 AM IST
  • Share this:
ಬೆಂಗಳೂರು(ಸೆ.13): ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಬೇಕೆಂದ ಕನ್ನಡಿಗರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಈ ಗುರುವಾರ ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಐಬಿಪಿಎಸ್​​ ಸಂಸ್ಥೆ, ಅಭ್ಯರ್ಥಿಗಳಿಗೆ ಹಿಂದಿ ಮತ್ತು ಇಂಗ್ಲೀಷ್​ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ. ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ತಿಳಿದಿರಬೇಕು ಎಂದು ಅಧಿಸೂಚನೆಯಲ್ಲಿ ಹೇಳಿದ್ದರೂ, ಅದನ್ನೀಗ ಖಚಿತಪಡಿಸುವುದಕ್ಕೆ ಯಾವುದೇ ಮಾನದಂಡಗಳನ್ನು ಸೂಚಿಸಿಲ್ಲ ಎಂಬುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್‌) ಗುರುವಾರ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಖಾಲಿ ಇರುವ 953 ಹುದ್ದೆಗಳಿಗಾಗಿ ಆನ್‌ಲೈನ್‌ನಲ್ಲಿ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಪರಿಕ್ಷೇಯನ್ನು ಅಭ್ಯರ್ಥಿಗಳು ಕನ್ನಡದಲ್ಲದೇ, ಇಂಗ್ಲಿಷ್‌- ಹಿಂದಿ ಭಾಷೆಗಳಲ್ಲಿ ಮಾತ್ರ ಬರೆಯಬಹುದಾಗಿದೆ.

ಕರ್ನಾಟಕದಲ್ಲಿನ ಬ್ಯಾಂಕುಗಳಲ್ಲಿ ಕನ್ನಡಿಗರದಲ್ಲೇ ಅನ್ಯ ಭಾಷಿಕರೇ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡದ ಕನ್ನಡಿಗರು ಬ್ಯಾಂಕಿಗ್​​ ಕೆಲಸಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಕನ್ನಡದಲ್ಲೂ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ನೀಡಬೇಕೆಂದು ಕನ್ನಡಪರ  ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು.

ಇದನ್ನೂ ಓದಿ: ಕನ್ನಡಿಗರ ಹೋರಾಟಕ್ಕೆ ಮಣಿದ ಉತ್ತರ ಭಾರತೀಯ ಜೈನರು; ಗಣೇಶ್ ಬಾಗ್ ಕಟೌಟ್​ನಲ್ಲಿ ರಾರಾಜಿಸುತ್ತಿದೆ ಕನ್ನಡ

ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ  ಬರೆಯಲು ಅವಕಾಶ ಕಲ್ಪಿಸಬೇಕು ಎಂದು ವಿವಿಧ ಕನ್ನಡ ಸಂಘಟನೆಗಳು ಬೀದಿಗಿಳಿದಿದ್ದವು. ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಹಾಗೂ ಸಂಸದ ತೇಜಸ್ವಿ ಸೂರ್ಯ ಸಂಸತ್ತಿನಲ್ಲೂ ಈ ಬಗ್ಗೆ ಧ್ವನಿ ಎತ್ತಿದ್ದರು. ರಾಜ್ಯ ಸಂಸದರ ನಿಯೋಗವು ಸಚಿವೆ ನಿರ್ಮಲಾ ಅವರನ್ನು ಭೇಟಿ ಮಾಡಿ ಈ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿತ್ತು.

ಕನ್ನಡಿಗರ ಮನವಿಗೆ ಸ್ಪಂದಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್​​ ಅವರು, ಈ ಮೊದಲು ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಅದೇ ಕೇಂದ್ರ ಸರ್ಕಾರ ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡದೆ ವಂಚಿಸಿದೆ. ಹಿಂದಿ-ಇಂಗ್ಲೀಷ್​​ನಲ್ಲಿ ಮಾತ್ರ ಅವಕಾಶ ಮಾಡಿಕೊಡುವುದರ ಮೂಲಕ ಅನ್ಯ ಭಾಷೆ ಹೇರಿಕೆಗೆ ಮುಂದಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ--------------
First published:September 13, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading