ಚಿಕ್ಕೋಡಿ (ಫೆ.11) : ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಬೇಕೆಂದು ಹೇಳುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಜಾರಿಗೆ ಒತ್ತಾಯಿಸಿ ಫೆ. 13 ರಂದು ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ 1999 ರಿಂದಲೂ ವರದಿ ಜಾರಿಗೆ ಹೋರಾಟ ಮಾಡುತ್ತಲೇ ಬಂದಿದೆ. ಅದೆ ವಿಚಾರವಾಗಿ ಕೆಲ ಸಂಘಗಳು ಹೋರಾಟ ಮಾಡಲು ಮುಂದಾಗಿವೆ. ಸರೋಜಿನಿ ಮಹಿಷಿ ವರದಿ ಜಾರಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ, ಫೆಬ್ರುವರಿ 13 ರಂದು ನಡೆಯುವ ಕರ್ನಾಟಕ ಬಂದಗೆ ಕರವೆ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ.
ಬಂದ್ ದಿಂದ ಕರ್ನಾಟಕ ರಕ್ಷಣಾ ವೇದಿಕೆ ದೂರ ಉಳಿಯಲಿದ್ದು, ಹೋರಾಟಕ್ಕೆ ಅನೇಕ ಮಾರ್ಗಗಳಿವೆ. ಎಲ್ಲಾ ವಿಚಾರಕ್ಕೂ ಬಂದ್ ಪರಿಹಾರ ಅಲ್ಲ. ಸರ್ಕಾರದ ಗಮನ ಸೆಳೆದು ಒತ್ತಡ ಹಾಕಲು ಅನೆಕ ಮಾರ್ಗಗಳು ಇವೆ. ಮಾತಿಗೂ ಮುಂಚೆ ಬಂದ್ ಕರೆ ಕೊಡುವುದು ಸಲ್ಲ. ಇದೆ ವಿಚಾರವಾಗಿ ನಾವು ಸಹ ಕರವೆ ವತ್ತಿಯಿಂದ ಮಾರ್ಚ್ನಲ್ಲಿ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌದದ ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು,
ಇದಕ್ಕೆ ಕರ್ನಾಟಕದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಕಾರ್ಯಕರ್ತರು ಬರುತ್ತಾರೆ ಎಂದರು.
ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಕೊಡಬೇಕೆಂದು ಹೇಳುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು
ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಕನ್ನಡ ಚಳವಳಿಯ ನಾಗೇಶ್ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಜಯ ಕರ್ನಾಟಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಲಾರಿ ಮಾಲೀಕರ ಸಂಘ, ಸಿಐಟಿಯು ಮೊದಲಾದ ಸಂಘಟನೆಗಳೂ ಫೆ. 13ರ ಬಂದ್ಗೆ ಬೆಂಬಲ ಸೂಚಿಸಿವೆ.
ಏನಿದು ಸರೋಜಿನಿ ಮಹಿಷಿ ವರದಿ?
1983ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ ಸರ್ಕಾರವು ಕರ್ನಾಟಕದಲ್ಲಿ ಕನ್ನಡಿಗರಿಗೆ ಎಷ್ಟು ಪ್ರಾಶಸ್ತ್ಯ ಸಿಗಬೇಕೆಂದು ತಿಳಿಸಲು ಮಾಜಿ ಕೇಂದ್ರ ಸಚಿವೆ ಸರೋಜಿನಿ ಮಹಿಷಿ ನೇತೃತ್ವದ ಸಮಿತಿ ರಚಿಸಿತ್ತು. ಗೋಪಾಲಕೃಷ್ಣ ಅಡಿಗ ಮೊದಲಾದ 4 ಮಂದಿ ಇದ್ದ ಈ ಸಮಿತಿ 1986ರಲ್ಲಿ ಅಂತಿಮ ವರದಿ ಸಲ್ಲಿಸಿತು. ಒಟ್ಟು 58 ಶಿಫಾರಸುಗಳನ್ನು ಮಾಡಿತು. ಇದರಲ್ಲಿ ರಾಜ್ಯ ಸರ್ಕಾರ 40 ಶಿಫಾರಸುಗಳನ್ನು ಒಪ್ಪಿಕೊಂಡಿದೆ. ಉಳಿದ ಹಲವು ಪ್ರಮುಖ ಶಿಫಾರಸುಗಳು ಇನ್ನೂ ಗಗನ ಕುಸುಮವಾಗಿಯೇ ಉಳಿದಿವೆ.
ಇದನ್ನೂ ಓದಿ :
ಫೆ. 13ಕ್ಕೆ ಕರ್ನಾಟಕ ಬಂದ್: 500ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ
ರಾಜ್ಯದ ಸರ್ಕಾರಿ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ ಕೊಡಬೇಕು. ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ನಿರ್ದಿಷ್ಟಪಡಿಸಿ ಈ ವರದಿ ಶಿಫಾರಸುಗಳನ್ನು ಮಾಡಿದೆ. ಸರೋಜಿನಿ ಮಹಿಷಿ ವರದಿಯನ್ನು ಸಂಪೂರ್ಣವಾಗಿ ಜಾರಿ ಮಾಡಬೇಕೆಂಬುದು ದಶಕಗಳಿಂದ ಕನ್ನಡ ಸಂಘಟನೆಗಳು ಹೋರಾಟ ಮಾಡಿಕೊಂಡು ಬಂದಿವೆ.ಇನ್ನು, ಯಡಿಯೂರಪ್ಪ ಸರ್ಕಾರ ರಾಜ್ಯದಲ್ಲಿ ಕನ್ನಡಿಗರಿಗೆ ಶೇ. 75ರಷ್ಟು ಉದ್ಯೋಗ ಮೀಸಲಾತಿ ಕೊಡುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ