ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ (Rohit Chakratirtha) ಅವರ ಹಳೆಯ ಫೇಸ್ ಬುಕ್ ಪೋಸ್ಟ್ (Face book) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ರೋಹಿತ್ ಚಕ್ರವರ್ತಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ (Karave Shivaramegowda) ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯ್ತು. ಮಲ್ಲೇಶ್ವರದ ಕುವೆಂಪು ಕಂಚಿನ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ತಮಗಿಷ್ಟ ಬಂದಂತೆ ವಿಷಯ ತುಂಬಲಾಗಿದೆ. ರಾಷ್ಟ್ರ ಕವಿ ಕುವೆಂಪು ರವರು ರಚಿಸಿರುವ ನಾಡಗೀತೆ ವ್ಯಂಗ್ಯಮಾಡಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹನ ಮಾಡಲಾಯ್ತು. ಪೊಲೀಸರು ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಲಾಯ್ತು.
ರೋಹಿತ್ ಚಕ್ರತೀರ್ಥ ಒಬ್ಬ ದೇಶದ್ರೋಹಿ
ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಶಿವರಾಮೇಗೌಡರು, ರೋಹಿತ್ ಚಕ್ರತೀರ್ಥ ಒಬ್ಬ ನಾಡ ದ್ರೋಹಿ ಮಾತ್ರ ಅಲ್ಲ ದೇಶ ದ್ರೋಹಿ ಕೂಡ. ಇಂದು ನಾಡಗೀತೆಗೆ ಅವಮಾನ ಮಾಡಿದವನು ನಾಳೆ ರಾಷ್ಟ್ರ ಗೀತೆ ಅವಮಾನ ಮಾಡಲ್ಲಾ ಅಂತ ಯಾವ ಗ್ಯಾರಂಟಿ ಎಂದು ಕಿಡಿಕಾರಿದರು.
ಇದನ್ನೂ ಓದಿ: School Text Book: ಟಿಪ್ಪು ಸುಲ್ತಾನ್ ವೈಭವೀಕರಿಸಿರೋ ಅಂಶಗಳನ್ನ ತೆಗೆದುಹಾಕಬಹುದು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಶಿಫಾರಸು
ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಿ!
ನಮ್ಮ ಧ್ವಜವನ್ನು ಒಳ ಉಡುಪಿಗೆ ಹೋಲಿಕೆ ಮಾಡುತ್ತಾನೆ. ಅಂಥವನನ್ನು ತಂದು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡುತ್ತೆ ಸರ್ಕಾರ. ಇಂಥವನ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು. ಇಲ್ಲದಿದ್ದರೆ ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು
ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಮಾಡಿ ನಾಡಗೀತೆಗೆ ಅಪಮಾನ ಆರೋಪದಡಿ ರೋಹಿತ್ ಚಕ್ರತೀರ್ಥ (Rohit Chakratirtha) ಮತ್ತು ಲಕ್ಷ್ಮಣ ಅಕಾಶೆ ಕಾರ್ಕಳ ವಿರುದ್ದ ದೂರು ನೀಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ (Bengaluru Police Commissioner) ಪ್ರತಾಪ್ ರೆಡ್ಡಿ ಅವರಿಗೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ದೂರು ನೀಡಿದ್ದಾರೆ.
ನಾಡು ನುಡಿಯ ಹೆಮ್ಮೆ ಕುವೆಂಪುರ (Kuvempu) ಬಗ್ಗೆ ಅವಹೇಳನ ರೀತಿಯಲ್ಲಿ ಬರೆದು ಸಾಮಾಜಿಕ ಜಾಲಾತಾಣದಲ್ಲಿ ಹಾಕಲಾಗಿದೆ ಎಂದು ದೂರಲಾಗಿದೆ. ಲಕ್ಷ್ಮಣ ಎಂಬುವರು ಕುವೆಂಪುರ ಬಗ್ಗೆ ಕೆಟ್ಟ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಇಬ್ಬರ ವಿರುದ್ದ ಸಮಾಜ ಸ್ವಾಸ್ಥ ಕೆಡುವ ಪ್ರಚೋದನೆ ಎಸಗಿದ್ದಾರೆ ಎಂದು ಆರೋಪಿಸಿ ಕಮಿಷನರ್ ಗೆ ದೂರು ನೀಡಲಾಗಿದೆ.
ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು
ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಜಾ ಮಾಡಬೇಕು ಹಾಗೂ ಪಠ್ಯವನ್ನು ಬದಲಿಸಬೇಕು ಎಂದು ಬೇಡಿಕೆಯನ್ನು ಕರವೇ ಇರಿಸಿದೆ. ಮೇ 31ರ ಪ್ರತಿಭಟನೆಗೆ ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆ ಬದಲಿಸದೆ ಇದ್ದರೆ ಮುಂದಿನ ದಿನದಲ್ಲಿ ಹೋರಾಟದ ತೀವ್ರತೆ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. ಪಠ್ಯ ಪರಿಷ್ಕರಣೆಗೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮೇ 31ರವರೆಗೆ ಗಡುವು ನೀಡಿದೆ. ಇನ್ನೂ ಈ ಪ್ರತಿಭಟನೆಗೆ ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರ ಹೋರಾಟಕ್ಕೆ ಕರವೇ ಸಾಥ್ ನೀಡಲಿದ್ದಾರೆ.
ಇದನ್ನೂ ಓದಿ: Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು
ವಿದ್ಯಾರ್ಥಿ ಸಂಘಟನೆಗಳಿಂದಲೂ ಪ್ರತಿಭಟನೆ
ಇತ್ತ ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿಧ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಿವೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ.
SFI, NSUI, AISF, AISA, KVS, DSF, AIRSO, DVP, VBV, VJD ಹಾಗೂ ಬೆಂ ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಭಾಗಿಯಾಗಲಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳ ಜೊತೆಗೆ ಕರವೇ ನಾರಯಣಗೌಡ ಬಣದಿಂದಲೂ ಪ್ರತಿಭಟನೆ ನಡೆಸಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ