ಬೆಂಗಳೂರು(ಡಿಸೆಂಬರ್.03): ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್ ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ, ಯತ್ನಾಳ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯತ್ನಾಳ ವಿರುದ್ದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ಕಿಡಿಕಾರಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯನ್ನು ಕಳ್ಳರ ರಕ್ಷಣಾ ವೇದಿಕೆ ಎಂದು ಅವರು ಹೇಳಿದ್ದಾರೆ. ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ.
ಯತ್ನಾಳ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ಕುರಿತು ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು?
"ಕರವೇಯಲ್ಲಿ ಸಾಬರು ಇದ್ದಾರೆ" ಎಂದು ಹೇಳಿದ್ದಾರೆ ಯತ್ನಾಳ. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡ ಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.
ಕರ್ನಾಟಕ ರಕ್ಷಣಾ ವೇದಿಕೆ "ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು" ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳರಂಥವರ ಕುತಂತ್ರ. ಅಂಥ ಹೀನ ಕೆಲಸ ನಾವು ಮಾಡುವುದಿಲ್ಲ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್ ಟಿ ಬಾಕಿ ತರಲು ಒಕ್ಕೂಟ ಸರ್ಕಾರದ...
Posted by ನಾರಾಯಣಗೌಡ್ರು ಟಿಎ - Narayana Gowdru T.A. on Thursday, 3 December 2020
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್ ಟಿ ಬಾಕಿ ತರಲು ಒಕ್ಕೂಟ ಸರ್ಕಾರದ...
Posted by ನಾರಾಯಣಗೌಡ್ರು ಟಿಎ - Narayana Gowdru T.A. on Thursday, 3 December 2020
ಇದನ್ನೂ ಓದಿ : ಕರವೇ ಅಲ್ಲ, ಅದು ಕಳ್ಳರ ರಕ್ಷಣಾ ವೇದಿಕೆ- ಡಿ. 5ರ ಬಳಿಕ ವಾಟಾಳ್ ತೆರೆಮರೆಗೆ ಸರಿಯಲಿದ್ದಾರೆ: ಯತ್ನಾಳ
ಹತ್ತು ಮಂದಿ ಪುಂಡ ಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ