HOME » NEWS » State » KARNATAK CM ADDITIONAL CHIEF SECRETARY TRANSFERRED MAK

ಸಿಎಂ ಹೆಚ್ಚುವರಿ ಮುಖ್ಯ ಕಾಯದರ್ಶಿ ಎತ್ತಂಗಡಿ; ಇಲಾಖೆ ನೀಡದೆ ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ

ಈವರೆಗೆ ಮುಖ್ಯಮಂತ್ರಿ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್‌ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಇದೀಗ ಆ ಸ್ಥಾನಕ್ಕೆ ಡಾ|ಇ.ವಿ. ರಮಣ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಇದೇ ರಮಣ ರೆಡ್ಡಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

news18-kannada
Updated:August 31, 2020, 5:49 PM IST
ಸಿಎಂ ಹೆಚ್ಚುವರಿ ಮುಖ್ಯ ಕಾಯದರ್ಶಿ ಎತ್ತಂಗಡಿ; ಇಲಾಖೆ ನೀಡದೆ ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು (ಆಗಸ್ಟ್ 31); ರಾಜ್ಯ ಸರ್ಕಾರ ಇಂದು ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾಯದರ್ಶಿ ಸೇರಿದಂತೆ ಪ್ರಮುಖ ಇಲಾಖೆಗಳನ್ನು ನಿಭಾಯಿಸುತ್ತಿರುವ ಕೆಲವು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯದ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಲು ಮುಂದಾಗಿದೆ.

ಈವರೆಗೆ ಮುಖ್ಯಮಂತ್ರಿ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್‌ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಇದೀಗ ಆ ಸ್ಥಾನಕ್ಕೆ ಡಾ|ಇ.ವಿ. ರಮಣ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಇದೇ ರಮಣ ರೆಡ್ಡಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು ಎಂಬುದು ಉಲ್ಲೇಖಾರ್ಹ.

Transfer letter
ರಾಜ್ಯ ಸರ್ಕಾರದ ವರ್ಗಾವಣಾ ಆದೇಶ.


ರಮಣ ರೆಡ್ಡಿ ಇದೀಗ ಮತ್ತೊಮ್ಮೆ ಅದೇ ಸ್ಥಾನಕ್ಕೆ ಮರಳಿದ್ದಾರೆ. ವರ್ಗಾವಣೆಯಾಗುವ ಮುನ್ನ ರಮಣ ರೆಡ್ಡಿ ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ವರ್ಗಾವಣೆಗೊಳಿಸಿ ಆದೇಶಿಸಲಾಗಿರುವ ಐಎಎಸ್‌ ಅಧಿಕಾರಿ ರವಿಕುಮಾರ್‌ ಅವರಿಗೆ ಈವರೆಗೆ ಯಾವುದೇ ಖಾತೆಯನ್ನು ನೀಡಲಾಗಿಲ್ಲ. ರವಿಕುಮಾರ್‌ 1984ರ ಬ್ಯಾಚಿನ ಐಎಎಸ್‌ ಅಧಿಕಾರಿಯಾದರೆ, ಡಾ|ಇ.ವಿ. ರಮಣ ರೆಡ್ಡಿ 1988ರ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಇದನ್ನೂ ಓದಿ : ಡ್ರಗ್ಸ್‌ ಸೇವನೆ ಮಾಡುವವರ 10-15 ಹೆಸರುಗಳನ್ನು ಸಾಕ್ಷಿ ಸಮೇತ ಪೊಲೀಸರಿಗೆ ನೀಡಿದ್ದೇನೆ; ಇಂದ್ರಜಿತ್ ಲಂಕೇಶ್

ಇದಲ್ಲದೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದ 1990ರ ಬ್ಯಾಚಿನ ಐಎಎಸ್ ಅಧಿಕಾರಿಯಾದ ಜಿ. ಕುಮಾರ್‌ ನಾಯ್ಕ್‌ ಅವರನ್ನು ಉನ್ನತ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವವರೆಗೆ ಅವರೇ ಈ ಇಲಾಖೆಯನ್ನು ಹೆಚ್ಚುವರಿಯಾಗಿ ನಿಭಾಯಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Published by: MAshok Kumar
First published: August 31, 2020, 5:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories