Karnataka 1st PUC 2020 Result: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Karnataka First PUC Result 2020: ಪಿಯುಸಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮೇ 5): ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು SuVidya ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಸುವಿದ್ಯಾ ವೆಬ್​ ಪೋರ್ಟಲ್​ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು. ಸುವಿದ್ಯಾ ವೆಬ್​ಸೈಟ್​​ನಲ್ಲಿ  ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಬಹುದು.

ಪ್ರಥಮ ಪಿಯುಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ...

ಲಾಕ್​ಡೌನ್​ನಿಂದಾಗಿ ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಗಳು ಸೇರಿದಂತೆ ಎಲ್ಲ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಹೈಸ್ಕೂಲ್​ವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ತೇರ್ಗಡೆಗೊಳಿಸಲಾಗಿದೆ. ಇದೆಲ್ಲದರ ನಡುವೆ ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಟಕವಾಗಿದೆ.

ಪ್ರಥಮ ಪಿಯುಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ... 
First published: