ಯಾದಗಿರಿ: ಜೀವ ಜಲ ಇಬ್ಬರು ಮಹಿಳೆಯರ (Women ) ಜೀವ ಪಡೆದಿದೆ. ಕಲುಷಿತ ನೀರು (Drinking Water Contamination ) ಸೇವಿಸಿ ವಾಂತಿ ಬೇಧಿ ಪ್ರಕರಣ ಉಲ್ಬಣಗೊಂಡು ಯಾದಗಿರಿ ಜಿಲ್ಲೆಯ (Yadagiri) ಅನಪುರ ಜನರು ಬೆಚ್ಚಿ ಬಿದ್ದಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು (Health Department Officials) ಗ್ರಾಮದಲ್ಲಿ ಠಿಕಾಣಿ ಹೂಡಿದೆ. ಈಗಾಗಲೇ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ಒಳಗಾಗಿದ್ದ ಇಬ್ಬರು ಮಹಿಳೆಯರು ಕೊನೆಯುಸಿರೆಳೆದಿದ್ದಾರೆ. ಶುದ್ಧ ನೀರು (Pure Drinking Water) ಪೂರೈಕೆ ಮಾಡಬೇಕಾದ ಅಧಿಕಾರಿಗಳು ಕಲುಷಿತ ನೀರು ಪೂರೈಕೆ ಮಾಡಿದರಾ ಎಂಬ ಶಂಕೆ ವ್ಯಕ್ತವಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಹಲವು ಜನರು ವಾಂತಿ ಬೇಧಿಯಿಂದ ಹಾಸಿಗೆ ಹಿಡಿದಿದ್ದಾರೆ. ಗ್ರಾಮದಲ್ಲಿರುವ ವಾರ್ಡ್ ನಂಬರ್ 1 ಮತ್ತು ವಾರ್ಡ್ ನಂಬರ್ 2ರಲ್ಲಿ ನೀರು ಪೂರೈಕೆ ಮಾಡುವ ಪೈಪ್ ನಲ್ಲಿ ಕಲುಷಿತ ನೀರು ಸೇರ್ಪಡೆಯಾಗಿದೆ. ಪರಿಣಾಮ ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣ ಉಲ್ಬಣಗೊಂಡಿದೆ.
ಇದನ್ನೂ ಓದಿ: Crime News: ಅನೈತಿಕ ಸಂಬಂಧ ಪ್ರಶ್ನಿಸಿದ್ದೇ ತಪ್ಪಾಯ್ತಾ? ಪ್ರಿಯಕರನೊಂದಿಗೆ ಸೇರಿ ಪತಿಯ ಉಸಿರುಗಟ್ಟಿಸಿ ಕೊಲೆಗೈದ ಪತ್ನಿ
ಅನಾರೋಗ್ಯಕ್ಕೆ ಒಳಗಾಗಿದ್ದ ತೆಲಂಗಾಣದ ನಾರಾಯಣಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿತ್ರಮ್ಮ ಎಂಬವರು ಮೃತಪಟ್ಟಿದ್ದಾರೆ. ಇದೇ ರೀತಿ ತೆಲಂಗಾಣದ ಮೈಬೂಬ್ ನಗರದ ಖಾಸಗಿ ಆಸ್ಪತ್ರೆಯಲ್ಲಿ 70 ವರ್ಷದ ವೃದ್ದೆ ಸಾಯಮ್ಮ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 22 ಗ್ರಾಮಸ್ಥರು, ನಾರಾಯಣಪೇಟೆಯಲ್ಲಿ ನಾಲ್ವರು ಗ್ರಾಮಸ್ಥರು, ಮೈಬೂಬನಗರದ ಆಸ್ಪತ್ರೆಯಲ್ಲಿ 4 ವರ್ಷದ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಗ್ರಾಮದಲ್ಲಿದ್ದ ಎರಡು ನೀರಿನ ಘಟಕಗಳನ್ನು ಬಂದ್ ಮಾಡಿದ್ದಾರೆ.
ಇನ್ನು, ಅನಪುರ ಗ್ರಾಮದಲ್ಲಿ ಹೆಚ್ಚು ಮಂದಿ ಅನಾರೋಗ್ಯಕ್ಕ ಒಳಗಾಗುತ್ತಿದ್ದಂತೆ ಡಿಹೆಚ್ಓ ಡಾ.ಗುರುರಾಜ ಹಿರೇಗೌಡ, ಟಿಹೆಚ್ಓ ಡಾ.ಹಣಮಂತರೆಡ್ಡಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಗತ್ಯ ಚಿಕಿತ್ಸೆ ನೀಡಲು ಸೂಚಿಸಲಾಗಿದೆ.
ಮೇಲ್ನೋಟಕ್ಕೆ ಕಲುಷಿತ ನೀರು ಸೇವಿಸಿ ವಾಂತಿ ಬೇಧಿ ಸಮಸ್ಯೆ ಕಾಣಿಸಿಕೊಂಡಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇದೇ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ಒಳಗಾಗಿದ್ದ ಸಾವಿತ್ರಮ್ಮ, ಸಾಯಮ್ಮ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ನೀರಿನ ಸ್ಯಾಂಪಲ್ ವರದಿ ನಂತರ ಗೊತ್ತಾಗಲಿದೆ ಎಂದು ಡಿಎಚ್ ಓ ಡಾ.ಗುರುರಾಜ ಹಿರೇಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Tumakuru: ಗಂಡನ ಕೊಲೆಗೆ ಪತ್ನಿಯಿಂದಲೇ ಸುಪಾರಿ; ಹುಟ್ಟುಹಬ್ಬದಂದೇ ಕೊಲೆಗೈದು ಕೆರೆಗೆ ಎಸೆದ್ರು!
ಫೆಬ್ರವರಿ 13ನೇ ತಾರೀಖಿನಿಂದಲೇ ಗ್ರಾಮದಲ್ಲಿ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಆದರೆ ಇದುವರೆಗೂ ಗ್ರಾಮಸ್ಥರು ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಗ್ರಾಮದ ಸುಮಾರು 34 ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂದು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. 34 ಮಂದಿಯಲ್ಲಿ 22 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹಲವರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ. ನೀರಿನಿಂದಲೇ ಸಮಸ್ಯೆ ಆಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಅನಾರೋಗ್ಯ ಕಂಡು ಬರಲು ಕಾರಣ ಏನು ಎಂಬ ಬಗ್ಗೆ ಶಂಕೆಯ ಮೇರೆಗೆ ನೀರಿನ ಪರಿಶೀಲನೆ ನಡೆಸಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸದ್ಯ ವೈದ್ಯಾಧಿಕಾರಿಗಳು ಗ್ರಾಮದಲ್ಲಿ ಬಿಡು ಬಿಟ್ಟು, ಗ್ರಾಮದ ಜನರಿಗೆ ನೀರು ಕಾಯಿಸಿ ಆರಿಸಿದ ಬಳಿಕ ಕುಡಿಯುವಂತೆ ಜಾಗೃತಿ ಮೂಡಿಸಿದ್ದಾರೆ. ಘಟನೆ ನಂತರ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ನೀರು ಸೋರಿಕೆ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದುರ್ಘಟನೆ ನಡೆಯುವ ಮುನ್ನ ಎಚ್ಚರಿಕೆ ವಹಿಸದೆ ನಿರ್ಲಕ್ಷ್ಯ ತೋರಿದಕ್ಕೆ ಇಬ್ಬರು ಗ್ರಾಮಸ್ಥರು ಬಲಿಯಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ