ಬೆಂಗಳೂರು(ಜು.20): ಈ ಬಾರಿ ಕೊರೋನಾ ಆತಂಕದಿಂದ ದ್ವಿತೀಯ ಪಿಯು(2nd PUC) ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿರಲಿಲ್ಲ. ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಹಾಗೂ ಆಂತರಿಕ ಅಂಕಗಳ ಮೌಲ್ಯ ಮಾಪನ ನಡೆಸಿ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ. ಅದರಂತೆ ಇಂದು ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ Know My Register Number ಮೂಲಕ ರಿಜಿಸ್ಟರ್ ನಂಬರ್ನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ.
ಇಂದು ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳಿಗೆ ಒಪ್ಪಿಗೆ ಇಲ್ಲವಾದರೆ ಆಗಸ್ಟ್ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಆಗ ಅವರು ಎಕ್ಸಾಂ ಬರೆಯಬಹುದಾಗಿದೆ. ಪರೀಕ್ಷೆಯ ಫಲಿತಾಂಶವನ್ನೂ ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಮತ್ತೆ ಹಳೇ ಅಂಕ ಪಡೆಯಲು ಅವಕಾಶ ಇಲ್ಲ ಎಂದು ಪಿಯು ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಇಂದು 5 ಲಕ್ಷದ 90 ಸಾವಿರದ 153 ಹೊಸ ವಿದ್ಯಾರ್ಥಿಗಳು ಮತ್ತು 76 ಸಾವಿರದ 344 ರಿಪೀಟರ್ಸ್ ಸೇರಿದಂತೆ ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.
ಈ ವರ್ಷ ದ್ವಿತೀಯ ಪಿಯುಸಿಗೆ ಪರೀಕ್ಷೆ ನಡೆಸದೆ ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶ ನೀಡುವುದಾಗಿ ಈ ಹಿಂದೆ ಸರ್ಕಾರ ಘೋಷಿಸಿತ್ತು. ಆದರೆ ಬಳಿಕ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡುವುದಾಗಿ ಹೇಳಿತ್ತು. ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳ ಎಸ್ಎಸ್ಎಲ್ಸಿ, ಪ್ರಥಮ ಪಿಯುಸಿ ಅಂಕಗಳನ್ನು ಮಾನದಂಡವನ್ನಾಗಿ ಪರಿಗಣಿಸಿ, ವೃತ್ತಿಪರ ಕೋರ್ಸ್ಗೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಮಾತ್ರ ಪರಿಗಣಿಸುವುದಾಗಿ ಹೇಳಿದೆ.
ಇದನ್ನೂ ಓದಿ:Corona Fear: ಕೋವಿಡ್ ಹರಡುವ ಆತಂಕ; ಪ್ರವಾಸಿಗರಿಗೆ ಮುಕ್ತವಾಗದ ದುಬಾರೆ ಸಾಕಾನೆ ಶಿಬಿರ
ಈ ಬಾರಿ ಯಾವುದೇ ರ್ಯಾಂಕ್ ಇರುವುದಿಲ್ಲ. ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಕೊಡಲಾಗುತ್ತದೆ.
ಫಲಿತಾಂಶ ನೋಡುವುದು ಹೇಗೆ? (How to Check PU Result)
ಪ್ರತಿ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶವನ್ನು ನೋಡುತ್ತಿದ್ದರು. ಆದರೆ, ಈ ಬಾರಿ ಪರೀಕ್ಷೆ ಬರೆಯದೇ ಯಾವ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ನೋಡುವುದು ಎಂಬ ಗೊಂದಲ ಇದೆ. ಇದೇ ಕಾರಣಕ್ಕೆ ಪಿಯು ಮಂಡಳಿ ಈ ಬಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ರಿಜಿಸ್ಟರ್ ನಂಬರ್ ಸೃಷ್ಟಿಸಿದೆ. ಇದನ್ನು ಕೂಡ ಮಂಡಳಿಯ ವೆಬ್ಸೈಟ್ ಮೂಲಕವೇ ಪಡೆಯಬೇಕಾಗಿದೆ. ಈಗಾಗಲೇ ಈ ರಿಜಿಸ್ಟರ್ ನಂಬರ್ ಪಡೆಯಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ನ್ನು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್ ಮಾಡಿ ನಂತರ ರಿಸಲ್ಟ್ ಪಡೆಯಬೇಕು.
ಮಂಡಳಿಯ ವೆಬ್ಸೈಟ್
http://pue.kar.nic.in/ ತೆರೆದ ಕೂಡಲೇ ನಿಮಗೆ Know my Register Number ಎಂಬ ಲಿಂಕ್ ಸಿಗುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ರಿಜಿಸ್ಟರ್ ನಂಬರ್ ಸಿಗಲಿದೆ. ಈ ಲಿಂಕ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದು.
ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಪಿಯು ಫಲಿತಾಂಶ ಪಡೆಯಲು ಇಲ್ಲಿ ಕ್ಲಿಕ್ ಮಾಡಿ:
https://dpue-exam.karnataka.gov.in/iipu2021_registrationnumber/regnumber
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ