• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಈ ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

Karnataka 2nd PUC Exam: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಈ ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.  ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ , 5093 ಪ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆ.

  • Share this:

    ಬೆಂಗಳೂರು(ಆ.18): ಕೊರೋನಾ ಆತಂಕದ ನಡುವೆಯೇ ನಾಳೆಯಿಂದ ಅಂದರೆ  ಆಗಸ್ಟ್ 19ರಿಂದ ದ್ವಿತೀಯ ಪರೀಕ್ಷೆ ಪ್ರಾರಂಭವಾಗಲಿದೆ. ಹೀಗಾಗಿ ಪಿಯು ಬೋರ್ಡ್​ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೊರೋನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. 


    ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 3 ರವರೆಗೆ ಸೆಕೆಂಡ್​ ಪಿಯು ಪರೀಕ್ಷೆ ಜರುಗಲಿದೆ.  ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.  ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ , 5093 ಪ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆ ಎಂದು ಹೇಳಿದರು.


    ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತೆ.  ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತೆ ಎಂದು ತಿಳಿಸಿದರು.


    ಇದನ್ನೂ ಓದಿ:Karnataka: ಸಿಡಿಲು ಮತ್ತು ಚಂಡಮಾರುತದ ಬಗ್ಗೆ ಜನರಿಗೆ ಅಲರ್ಟ್​ ನೀಡುವ ವ್ಯವಸ್ಥೆ; ರಾಜ್ಯದಲ್ಲಿ ಶೀಘ್ರದಲ್ಲೇ ಜಾರಿ


    ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ RT-PCR ಟೆಸ್ಟ್​​ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್​ ತರಬೇಕಿದೆ. 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ನಿರ್ದೇಶಕಿ ಸ್ನೇಹಲ್ ಹೇಳಿದ್ದಾರೆ.


    ಒಂದು ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ಡೆಸ್ಕ್​​ನಲ್ಲಿ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಇನ್ನು, ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.


    ಇದನ್ನೂ ಓದಿ:Tuberculosis: ಕ್ಷಯ ರೋಗ ಕೋವಿಡ್​ಗಿಂತ ಮಾರಕ; ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ..!


    ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ  ಪರೀಕ್ಷೆ ಬರೆಯಲು ಪಿಯು ಬೋರ್ಡ್​ ಎಲ್ಲಾ  ವ್ಯವಸ್ಥೆಯನ್ನು ಮಾಡಿದೆ. ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಇದುವರೆಗೆ ಪರೀಕ್ಷೆ ಬರೆಯುವ ಯಾವ ವಿದ್ಯಾರ್ಥಿಯೂ ಕೊರೋನಾ ಸೋಂಕಿನ ಕುರಿತು ಮಾಹಿತಿ ನೀಡಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸ್ಪಷ್ಟ ಪಡಿಸಿದರು.


    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

    Published by:Latha CG
    First published: