Karnataka 2nd PUC Result 2020 LIVE: ಬೆಂಗಳೂರು(ಜುಲೈ 14): ಜುಲೈ 18ರ ಸುಮಾರಿಗೆ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್ಗೆ SMS ಮೂಲಕ ರಿಸಲ್ಟ್ ತಲುಪಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳುದ್ದರು. ಈಗ 10.45ಕ್ಕೆ ರಿಸಲ್ಟ್ ಲಭ್ಯವಾಗಿದೆ.
ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ: Karnataka 2nd PUC Result 2020
ಇಂಗ್ಲಿಷ್ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ: www.news18.com
ಶಿಕ್ಷಣ ಇಲಾಖೆ ಕಾರ್ಯದರ್ಶಿ ಮತ್ತು ನಿರ್ದೇಶಕರ ಜೊತೆ ಸಭೆಯ ನಂತರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರ್ಧಾರ ಮಾಡಲಾಗಿತ್ತು. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ಸಂಖ್ಯೆಯ ಮೂಲಕ ವೆಬ್ ಸೈಟಿನಲ್ಲಿ ರಿಸಲ್ಟ್ ಪಡೆಯಬಹುದಾಗಿದೆ