ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್​: ಐವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಎಸಿಬಿ

ಬೆಂಗಳೂರಿನಲ್ಲಿ ಎರಡು ಕಡೆ ದಾಳಿ ನಡೆಸಿದ್ದು, ಬಸವೇಶ್ವರನಗರ ಮತ್ತು ಸಹಕಾರನಗರದಲ್ಲಿರುವ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ.

zahir | news18
Updated:December 28, 2018, 10:04 AM IST
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್​: ಐವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ಎಸಿಬಿ
ಸಾಂದರ್ಭಿಕ ಚಿತ್ರ
zahir | news18
Updated: December 28, 2018, 10:04 AM IST
ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ತಂಡ ದಾಳಿ ನಡೆಸಿದೆ. ರಾಜ್ಯದ 17 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ ಮಾಡಲಾಗಿದೆ. ಬೆಂಗಳೂರು, ಚಿಂತಾಮಣಿ, ಹುಣಸೂರು, ಉಡುಪಿ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಕಾರವಾರ, ಮಂಗಳೂರು ಸೇರಿದಂತೆ ಒಟ್ಟು 17 ಕಡೆ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದ‌ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಐವರು ಸರ್ಕಾರಿ ಆಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಎರಡು ಕಡೆ ದಾಳಿ ನಡೆಸಿದ್ದು, ಬಸವೇಶ್ವರನಗರ ಮತ್ತು ಸಹಕಾರನಗರದಲ್ಲಿರುವ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ. ಕೋ-ಆಪರೇಟಿವ್ ಬ್ಯೂರೋದ ಅಡಿಷನಲ್ ರಿಜಿಸ್ಟರ್ ಶಶಿಧರ್, ಬಿಬಿಎಂಪಿಯ ಪ್ಲಾನಿಂಗ್ ಅಡಿಷನಲ್ ಡೈರೆಕ್ಟರ್ ಬಿಸೆಟಪ್ಪ, ಮೂಡಾದ (ಮೈಸೂರು ಅರ್ಬನ್ ಡೆವಲಪ್​​ಮೆಂಟ್ ಅಥಾರಿಟಿ​​) ಜೂನಿಯರ್ ಇಂಜಿನಿಯರ್ ಕೆ.ಮಣಿ, ಗವರ್ನಮೆಂಟ್​​ ಕಾಲೇಜ್​​ ಆಫ್ ಟೀಚರ್​​ ಫೌಂಡೇಷನ್​ ರೀಡರ್ ಮಂಜುನಾಥಯ್ಯ, ದಾವಣಗೆರೆ ಅಗ್ರಿಕಲ್ಚರ್​ನ ಡೆಪ್ಯುಟಿ ಡೈರೆಕ್ಟರ್ ಹಂಸವೇಣಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

First published:December 28, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ