ಶಿರಾ, ಆರ್​ಆರ್​ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಕೆ.ಎಸ್. ಈಶ್ವರಪ್ಪ ವಿಶ್ವಾಸ

Karnataka Assembly Bypolls: ಯಾವುದೇ ಚುನಾವಣೆಗಳು ನಡೆದರೂ ಅದರಲ್ಲಿ ಬಿಜೆಪಿಯೇ ಗೆಲ್ಲುವುದು. ಶಿರಾ ಮತ್ತು ಆರ್​ಆರ್​ ನಗರದಲ್ಲೂ ನಮ್ಮ ಗೆಲುವು ಖಚಿತ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

news18-kannada
Updated:October 1, 2020, 12:36 PM IST
ಶಿರಾ, ಆರ್​ಆರ್​ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಕೆ.ಎಸ್. ಈಶ್ವರಪ್ಪ ವಿಶ್ವಾಸ
ಕೆಎಸ್ ಈಶ್ವರಪ್ಪ
  • Share this:
ಶಿವಮೊಗ್ಗ (ಅ. 1): ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆ ಘೋಷಣೆಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಈ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆಲುವು ನಿಶ್ಚಿತ. ಚುನಾವಣೆಯೆಂದರೆ ಅದು ಬಿಜೆಪಿಯ ಗೆಲುವು ಎಂದೇ ಅರ್ಥ. ಬೇಕಿದ್ದರೆ ಬರೆದಿಟ್ಟುಕೊಳ್ಳಿ, ಶಿರಾ ಮತ್ತು ಆರ್​ಆರ್​ ನಗರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡು ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. ಬಿಜೆಪಿಯದ್ದೇ ಗೆಲುವು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಇತ್ತೀಚೆಗೆ ನಡೆದ 15 ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನ ಗೆದ್ದಿತ್ತು. ಹಾಗಾಗಿ, ಯಾವುದೇ ಚುನಾವಣೆಗಳು ನಡೆದರೂ ಅದರಲ್ಲಿ ಬಿಜೆಪಿಯೇ ಗೆಲ್ಲುವುದು. ಶಿರಾ ಮತ್ತು ಆರ್​ಆರ್​ ನಗರದಲ್ಲೂ ನಮ್ಮ ಗೆಲುವು ಖಚಿತ ಎಂದು ಹೇಳಿದ್ದಾರೆ.

ಒಂದು ಕಡೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಡಿದಾಡುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ನಮ್ಮದೂ ಒಂದು ಪಕ್ಷ ಇದೆ ಎನ್ನುತ್ತಿದ್ದಾರೆ. ಈಗಾಗಲೇ ಕುಮಾರಸ್ವಾಮಿ ಸರ್ಕಾರ ಹಾಗೂ ಸಿಎಂ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರೆಲ್ಲ ಈಗ ಎಲ್ಲಿದ್ದಾರೆ? ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಬಿಜೆಪಿಯೇ ಗೆದ್ದಿದೆ. ಕಾಂಗ್ರೆಸ್​ನವರಿಗೇ ಈ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ಭರವಸೆಯಿಲ್ಲ ಎಂದು ಈಶ್ವರಪ್ಪ ಜೆಡಿಎಸ್​ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: Karnataka Weather: ಉತ್ತರ ಕರ್ನಾಟಕದಲ್ಲಿ ನಿಲ್ಲದ ವರುಣನ ಆರ್ಭಟ; ಅ. 3ರವರೆಗೆ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯ ಹಾಗೂ ದೇಶದ ಜನರಿಗೆ ಬಿಜೆಪಿ ಸರ್ಕಾರದ ಆಡಳಿತದ ಶೈಲಿ, ನಮ್ಮ ಸಾಧನೆಗಳು ಏನೆಂಬುದು ಗೊತ್ತಿದೆ‌. ಬೂತ್ ಮಟ್ಟದಲ್ಲಿ ಬಿಜೆಪಿ ಸದೃಢವಾಗಿದ್ದು, ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಈ ವಿಷಯದಲ್ಲಿ ಯಾವ ಅನುಮಾನವೂ ಬೇಡ ಎಂದು ಈಶ್ವರಪ್ಪ ಹೇಳಿದ್ದಾರೆ.

ಮುಂದಿನ ನವೆಂಬರ್‌ 3ರಂದು ಶಿರಾ ಹಾಗೂ ಆರ್‌. ಆರ್‌ ನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್‌ 9ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಬಳಿಕ 17ನೇ ತಾರೀಕಿನಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಇದಾದ ನಂತರ ನವೆಂಬರ್ 10ರಂದು ಎರಡು ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳಲಿದೆ.
Published by: Sushma Chakre
First published: October 1, 2020, 11:00 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading