news18-kannada Updated:October 28, 2020, 2:06 PM IST
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಬೆಂಗಳೂರು (ಅ. 28): ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಘೋಷಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೊನೆಗೂ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ. ಶುಕ್ರವಾರ (ಅ. 30) ಶಿರಾದಲ್ಲಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಅ. 31ರಂದು ಆರ್ಆರ್ ನಗರದಲ್ಲಿ ಸಿಎಂ ಪ್ರಚಾರ ನಡೆಸಲಿದ್ದಾರೆ.
ಅ. 30ರಂದು ಶಿರಾ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಸಿಎಂ ಮತಯಾಚನೆ ಮಾಡಲಿದ್ದಾರೆ. ಶಿರಾದ ಮದಲೂರು, ಶಿರಾ ಟೌನ್ನಲ್ಲಿ ಪ್ರಚಾರ ಮಾಡಲಿದ್ದಾರೆ. ಅ. 31ರಂದು ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಬಿಎಸ್ ಯಡಿಯೂರಪ್ಪ ಪ್ರಚಾರ ಕೈಗೊಳ್ಳಲಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಎರಡು ಕ್ಷೇತ್ರಗಳಲ್ಲೂ ಒಂದೊಂದು ದಿನ ಪ್ರಚಾರ ಕೈಗೊಳ್ಳಲಿದ್ದಾರೆ.
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೂಡ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ. ಆರ್.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಆರ್ಆರ್ ನಗರ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕಿಳಿಯಲಿದ್ದಾರೆ. ಆರ್ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಲಿದ್ದಾರೆ.
ಶಿರಾ ಕ್ಷೇತ್ರದಿಂದ ಸತ್ಯನಾರಾಯಣ ಅವರ ಹೆಂಡತಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ಕಣಕ್ಕಿಳಿಸಲಿದೆ. ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ಸ್ಪರ್ಧಿಸಲಿದ್ದಾರೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಶುಕ್ರವಾರ ಮತ್ತು ಶನಿವಾರ ಸಿಎಂ ಯಡಿಯೂರಪ್ಪ ಪ್ರಚಾರ ಮಾಡಲಿದ್ದಾರೆ.
Published by:
Sushma Chakre
First published:
October 28, 2020, 2:06 PM IST