Karnataka Assembly Election 2023: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರು ಪಕ್ಷಗಳು ರಣಕಹಳೆ ಮೊಳಗಿಸಿವೆ. ಅಭ್ಯರ್ಥಿಗಳಂತೂ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುರುಕಾಗುತ್ತಿದ್ದಾರೆ. ವಿರೋಧ ಪಕ್ಷಗಳ ವಿರುದ್ಧ ದಾಳಿ-ವಾಗ್ದಾಳಿ, ಅಭ್ಯರ್ಥಿಗಳ ವಿರುದ್ಧ ಕೆಸರೆರಚಾಟ, ಪ್ರಚಾರ ಭರ್ಜರಿಯಾಗಿ ನಡೆಸುತ್ತಿದ್ದಾರೆ.
ಮೇ 10 ರಂದು ನಡೆಯಲಿರುವ ಚುನಾವಣೆಗಾಗಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಭರದಿಂದ ಮತಪ್ರಚಾರ ನಡೆಸುತ್ತಿದ್ದು ಜನಸಾಮಾನ್ಯರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ತಮ್ಮ ಪಕ್ಷವೇ ಗೆಲ್ಲಬೇಕೆಂಬ ಛಲದಲ್ಲಿ ಅನೇಕ ಗಿಮಿಕ್‌ಗಳನ್ನು ನಡೆಸುವ ಅಭ್ಯರ್ಥಿಗಳು ಶ್ರೀ ಸಾಮಾನ್ಯರ ಮನೆ ಮನೆಗೆ ತೆರಳಿ ಪರಿಪರಿಯಾಗಿ ವಿನಂತಿಸಿಕೊಳ್ಳುತ್ತಿದ್ದಾರೆ.
ಮತದಾರ ಕೂಡ ಇದೀಗ ಪಕ್ಷಗಳನ್ನು ನೋಡದೇ ಅಭ್ಯರ್ಥಿ ಕ್ಷೇತ್ರಕ್ಕೆ ಮಾಡಿರುವ ಹಲವಾರು ಕಾರ್ಯಗಳು, ಸಮಾಜ ಸೇವೆಗಳನ್ನು ನೋಡಿಯೇ ವೋಟು ಹಾಕುವುದಾಗಿ ನಿರ್ಧರಿಸಿರುವಂತೆ ಕಂಡುಬರುತ್ತಿದೆ.
ಇದನ್ನೂ ಓದಿ: Rizwan Arshad: ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ರಾಜಕೀಯ ಜೀವನ ಹೀಗಿದೆ
ಮಾನಪ್ಪ ವಜ್ಜಲ್ ಆರಂಭಿಕ ಜೀವನ ವಿವರ:
ಮಾನಪ್ಪ ವಜ್ಜಲ್ ಅವರು 15 ಆಗಸ್ಟ್ 1963 ರಂದು ಲಿಂಗಸಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ದ್ಯಾವಪ್ಪ ಮತ್ತು ಮುದಕಮ್ಮ ದಂಪತಿಗೆ ಜನಿಸಿದರು.
ಅವರು ಕೇವಲ 5 ನೇ ತರಗತಿಯವರಿಗೆ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. ಮೊದಲು ಅವರು ಜನತಾ_ದಳ_(ಜಾತ್ಯತೀತ) ಪಕ್ಷದಲ್ಲಿದರು. ಇದೀಗ ಭಾರತೀಯ ಜನತಾ ಪಕ್ಷದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ರಾಜಕೀಯ ಜೀವನ:
ವಜ್ಜಲ್ ಅವರು 2008 ಮತ್ತು 2013 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಪ್ರತಿನಿಧಿಯಾಗಿ ಗೆದ್ದಿದ್ದಾರೆ. ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ. 2023 ರಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸಲು ಮಾಜಿ ಶಾಸಕ ಮಾನಪ್ಪ ವಜ್ಜಲ್ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.
ಅಷ್ಟೇ ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುತ್ತಾ 2023ರ ವಿಧಾನಸಭಾ ಚುನಾವಣೆಗಾಗಿ ಸಕಲ ಸಿದ್ಧತೆಗಳು ನಡೆಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಗಳ ಕಾರ್ಯಕರ್ತರನ್ನು ಬಿಜೆಪಿಯತ್ತ ಸೆಳೆಯುತ್ತಾ ಬಿಜೆಪಿ ಲಿಂಗಸಗೂರು ವಿಧಾನಸಭಾ ಕ್ಷೇತ್ರದಲ್ಲಿ ಗಟ್ಟಿಗೊಳಿಸುವ ಕಾಯಕದಲ್ಲಿ ತೊಡಗಿದ್ದಾರೆ.
ಲಿಂಗಸಗೂರು ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಕಾಂಗ್ರೆಸ್ ನ ಹಾಲಿ ಶಾಸಕ ಡಿ.ಎಸ್. ಹೂಲಗೇರಿ ಅಧಿಕಾರದಲ್ಲಿ ಇದ್ದಾರೆ. ಜೆಡಿಎಸ್ ಅಭ್ಯರ್ಥಿ ಎಂದು ಗುರುತಿಸಿಕೊಂಡ ಸಿದ್ದು ಬಂಡಿ ಸಹ ಚುನಾವಣೆಗಾಗಿ ತಯಾರಿ ನಡೆಸಿದ್ದಾರೆ. ಇದರ ಮಧ್ಯೆ ಕಳೆದ ಚುನಾವಣೆಯಲ್ಲಿ ಸೋತ ಮಾಜಿ ಶಾಸಕ ಮಾನಪ್ಪ ವಜ್ಜಲ್ 2023ರ ವಿಧಾನಸಭಾ ಚುನಾವಣೆಯಲ್ಲಿ ಲಿಂಗಸಗೂರಿನಲ್ಲಿ ಕಮಲ ಅರಳಿಸಲು ಬೇಕಾದ ಎಲ್ಲಾ ತಯಾರಿ ನಡೆಸುತ್ತಿದ್ದಾರೆ.
ಇದನ್ನೂ ಓದಿ: PT Parameshwar Naik: ಹೂವಿನ ಹಡಗಲಿ ಕಾಂಗ್ರೆಸ್ ಅಭ್ಯರ್ಥಿ ಪಿಟಿ ಪರಮೇಶ್ವರ್ ನಾಯ್ಕ್ ಅವರ ರಾಜಕೀಯ ಹಾದಿ
ಮಾನಪ್ಪ ವಜ್ಜಲ್ ಆಸ್ತಿ ವಿವರ:
ಮಾನಪ್ಪ ವಜ್ಜಲ್ ಅವರು 1 ಕೋಟಿಯಷ್ಟು ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಮಾನಪ್ಪ ವಜ್ಜಲ್ ಪುತ್ರನ ಮೇಲಿರುವ ಆರೋಪ:
ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಾಗಿದೆ. ಆಂಜನೇಯ ವಜ್ಜಲ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಉದ್ಯಮಿ ದೀಪಕ್ ರೈ ಅವರ ಪುತ್ರ ವಿಕ್ರಮ್ ರೈ ಅವರುದೂರು ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ, ಪಂಚ್ ಮಾಡುವ ಆಯುಧದಿಂದ ವಿಕ್ರಮ್ ರೈ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಆಂಜನೇಯ ಹಾಗೂ ಗ್ಯಾಂಗ್ ಮೂರು ಕಾರುಗಳಿಂದ ಪಂಚ್ ಆಯುಧ ಹೊರತೆಗೆದು ಭೀಕರ ಹಲ್ಲೆ ನಡೆಸಿದ್ದಾರೆ. 10 ರಿಂದ 15 ಹುಡುಗರನ್ನ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.
ಲಿಂಗಸಗೂರು ಶಾಸಕರಿಂದ ಕಮಿಷನ್ ರಾಜಕಾರಣ: ಮಾನಪ್ಪ ವಜ್ಜಲ್:
ಸ್ಥಳೀಯ ಶಾಸಕ ಡಿ.ಎಸ್. ಹೂಲಗೇರಿ ಅವರು ಪರ್ಸೆಂಟೇಜ್ ಬೆನ್ನಿಗೆ ಬಿದ್ದು ಕ್ಷೇತ್ರದ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಆರೋಪಿಸಿದ್ದಾರೆ.
ಒಟ್ಟಿನಲ್ಲಿ ಕ್ಷೇತ್ರದಲ್ಲಿ ಇದೀಗ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದ್ದು ಎರಡೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಈ ಬಾರಿ ತಾವು ಗೆಲ್ಲಲೇಬೇಕೆಂದು ಕೈಲಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಕಳೆದ ಬಾರಿ ಸೋತಿರುವ ಮಾನಪ್ಪ ಅವರಿಗೆ ಈ ಬಾರಿಯಾದರೂ ಗೆಲುವಿನ ಲಕ್ಷ್ಮಿ ಒಲಿಯಲಿದೆಯೇ ಎಂಬುದನ್ನು ನೋಡಲು ಚುನಾವಣಾ ಫಲಿತಾಂಶದವರೆಗೂ ಕಾಯಲೇಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ