ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Election) ಇಂದು ಮುಹೂರ್ತ ನಿಗದಿಯಾಗಿದ್ದು. ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ಸುದ್ದಿಗೋಷ್ಠಿ ಮೂಲಕ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13 ರಂದು ಫಲಿತಾಂಶ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಇನ್ನು ಚುನಾವಣಾ ದಿನಾಂಕ (Election Date) ಘೋಷಣೆಗೂ ಮೊದಲೇ ಕಾಂಗ್ರೆಸ್ (Congress) 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ (BJP And JDS) ಸಹ ಅಬ್ಬರದ ಪ್ರಚಾರ ನಡೆಸುತ್ತಿವೆ. ಹೀಗಿರುವಾಗ ಈ ಸುದ್ದಿಗೋಷ್ಠಿಯ ಕ್ಷಣ ಕ್ಷಣದ ಮಾಹಿತಿ ನಿಮ್ಮ ನ್ಯೂಸ್ 18 ಕನ್ನಡದಲ್ಲಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ