ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly ELection) ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ (Chamundeshwari Constituency) ಕದನ ತಾರಕ್ಕಕ್ಕೇರಿದೆ. ತಮ್ಮ ವಿರುದ್ಧ ಕೇಳಿ ಬಂದ ಆರೋಪದ ತಿರಸ್ಕರಿಸಿರುವ ಕಾಂಗ್ರೆಸ್ (Congress) ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ, ಉಪ್ಪು ಮುಟ್ಟಿ ಪ್ರಮಾಣ ಮಾಡಿದ್ದಾರೆ. ಆದರೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ (JDS) ಅಭ್ಯರ್ಥಿ ಜಿಟಿ ದೇವೇಗೌಡ (GT Devegowda), ಈ ಬಾರಿಯ ಚುನಾವಣೆ ಚಾಮುಂಡೇಶ್ವರಿ ಆಶೀರ್ವಾದಿಂದ ಗೆಲ್ಲುತ್ತೇನೆ. ಪ್ರಚಾರದ ವೇಳೆ ನನಗೆ ಎಲ್ಲಾ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೊಟ್ಟಿದ್ದರು ಎಂದು ಹೇಳಿದ್ದಾರೆ.
ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಅನ್ನೋದು ಗೊತ್ತಿಲ್ಲ
ಸಿದ್ದೇಗೌಡ ಜೊತೆಗೆ ಜಿಟಿಡಿ ಹೊಂದಾಣಿಕೆ ಮಾಡಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದರು. ಇದಕ್ಕೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ಅವರು ಕೂಡ ಬೇಸರ ವ್ಯಕ್ತಪಡಿಸಿದ್ದರು. ಆದರೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿ ಸಿಡಿಮಿಡಿಗೊಂಡ ಜಿಟಿ ದೇವೇಗೌಡ ಅವರು, ಜನರು ಭಾರೀ ಉತ್ಸಾಹದಿಂದ ಪ್ರೀತಿಯಿಂದ ಜಿಟಿ ದೇವೇಗೌಡರನ್ನು ಗೆಲ್ಲಿಸುವ ಮನಸ್ಸು ಮಾಡಿದ್ದರು.
ಸಿದ್ದರಾಮಯ್ಯನವರಿಗೆ ಇಷ್ಟು ವರ್ಷ ಇಲ್ಲಿ ರಾಜಕೀಯ ಮಾಡಿದ್ದಾರೆ. ಆದರೆ ನನ್ನ ವಿರುದ್ಧ ಯಾರನ್ನು ಕಣಕ್ಕಿಳಿಸಬೇಕು ಅನ್ನೋದು ಅವರಿಗೆ ಗೊತ್ತಿಲ್ಲ. ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಸೋತವನನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ನಿಲ್ಲಿಸಿದ್ದಾರೆ ಎಂದರು.
ಇದನ್ನೂ ಓದಿ: HD Kumaraswamy: ಮತದಾನ ಮುಕ್ತಾಯವಾಗುತ್ತಿದ್ದಂತೆ ವಿದೇಶಕ್ಕೆ ಹಾರಿದ ಮಾಜಿ ಸಿಎಂ ಎಚ್ಡಿಕೆ
ಅಲ್ಲದೆ, ಈ ಸಿದ್ದೇಗೌಡನನ್ನು ನಾನು ಯಾಕೆ ಬುಕ್ ಮಾಡಲಿ? ಹೋಟೆಲ್ ಬುಕ್ ಮಾಡಬೇಕಷ್ಟೇ! ನಾನು ಸಿದ್ದೇಗೌಡನ ಜೊತೆ ಸೇರುವುದು ಬಿಡಿ, ಅವನನ್ನು ನನ್ನ ಮನೆ ಬಾಗಿಲಿಗೆ ಕೂಡ ನಾನು ಸೇರಿಸೋದಿಲ್ಲ. ನಾನು ಗೆಲ್ಲಲಿ ಸೋಲಲಿ ನನ್ನ ಜಾಯಿಮಾನದಲ್ಲಿ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಲ್ಲ. ಈ ಸಿದ್ದೇಗೌಡನ ಬಗ್ಗೆ ಇದೇ ಸಿದ್ದರಾಮಯ್ಯ ಅವರಿಗೆ ನಾನು ಹೇಳಿದ್ದೆ, ನಾನು ಹೇಳಿದ್ದೆಲ್ಲಾ ಅವರು ಮರೆತು ಹೋಗಿದ್ದಾರೆ. ನನಗೆ ಹೋದ ಚುನಾವಣೆಯೇ ಕಷ್ಟ ಆಗಲಿಲ್ಲ, ಇನ್ನು ಈಗ ಕಷ್ಟ ಆಗುತ್ತಾ ಎಂದು ಪ್ರಶ್ನಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ