ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ (New Govt) ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ (Election) ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು (JDS Activists), ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬರಲಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ. ಇದರ ನಡುವೆ ಟ್ವೀಟ್ ಮಾಡಿರುವ ಎಚ್ಡಿ ಕುಮಾರಸ್ವಾಮಿ ಅವರು, ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಎಚ್.ಡಿ.ದೇವೇಗೌಡರು, ಎಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. 1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 13, 2023
ಅಲ್ಲದೆ, ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಧನ್ಯವಾದ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 2615 ಅಭ್ಯರ್ಥಿಗಳು
ರಾಜ್ಯದ 37,777 ಸ್ಥಳದಲ್ಲಿ ಸ್ಥಾಪನೆಯಾಗಿದ್ದ 58,545 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಚುನಾವಣಾ ಅಖಾಡದಲ್ಲಿ 2615 ಅಭ್ಯರ್ಥಿಗಳು ರಾಜಕೀಯ ಭವಿಷ್ಯದ ಪರೀಕ್ಷೆ ಎದುರಿಸಿದ್ದಾರೆ. ಅಭ್ಯರ್ಥಿಗಳಲ್ಲಿ 2430 ಮಂದಿ ಪುರುಷರು, 184 ಮಂದಿ ಮಹಿಳಾ ಅಭ್ಯರ್ಥಿಗಳು ಹಾಗೂ ಓರ್ವ ತೃತೀಯ ಲಿಂಗಿ ಅಭ್ಯರ್ಥಿಗಳಿದ್ದಾರೆ.
ಇನ್ನು ಪಕ್ಷವಾರು ನೋಡುವುದಾದರೆ ಬಿಜೆಪಿಯಿಂದ 224, ಕಾಂಗ್ರೆಸ್ನಿಂದ 223, ಜೆಡಿಎಸ್ನಿಂದ 209 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಉಳಿದಂತೆ 918 ಮಂದಿ ಪಕ್ಷೇತರ ಅಭ್ಯರ್ಥಿಗಳಿದ್ದಾರೆ. ಇನ್ನು ಎಎಪಿಯಿಂದ 209, ಸಿಪಿಐಎಂನಿಂದ 4, ಬಿಎಸ್ಪಿಯಿಂದ 133 ಹಾಗೂ ಎನ್ಸಿಪಿಯಿಂದ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮತದಾನದ ಪ್ರಮಾಣ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆಯ ಮತದಾನವಾಗಿದ್ದು, ಶೇಕಡಾ 73.19 ರಷ್ಟು ಮತದಾನದೊಂದಿಗೆ ಸಾರ್ವಕಾಲಿಕ ದಾಖಲೆಯನ್ನು ನಿರ್ಮಾಣ ಮಾಡಿದೆ. ವಿಶೇಷ ಎಂದರೆ ಶೇಕಡಾ 85.56 ಮತದಾನದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, ಬೆಂಗಳೂರು ದಕ್ಷಿಣದಲ್ಲಿ ಅತಿ ಕಡಿಮೆ ಅಂದರೆ ಶೇಕಡಾ 52.33 ರಷ್ಟು ಮತದಾನ ನಡೆದಿದೆ. ಇನ್ನು ರಾಜ್ಯದಲ್ಲಿರುವ 5.30 ಕೋಟಿ ಮತದಾರರಲ್ಲಿ 3.88 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ