• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Election: ರಾಜ್ಯದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್​ಗೆ ಮೋದಿ ಶುಭ ಹಾರೈಕೆ! ಬಿಜೆಪಿ ಸೋಲಿನ ಬಗ್ಗೆ ಪಿಎಂ ಏನಂದ್ರು?

Karnataka Election: ರಾಜ್ಯದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್​ಗೆ ಮೋದಿ ಶುಭ ಹಾರೈಕೆ! ಬಿಜೆಪಿ ಸೋಲಿನ ಬಗ್ಗೆ ಪಿಎಂ ಏನಂದ್ರು?

ನರೇಂದ್ರ ಮೋದಿ

ನರೇಂದ್ರ ಮೋದಿ

Karnataka Election Results 2023: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಜಯ ಸಾಧಿಸಿ ಸ್ವತಂತ್ರ ಪಕ್ಷವಾಗಿ ಹೊರ ಹೊಮ್ಮಿದ ಕಾಂಗ್ರೆಸ್​ ಪಕ್ಷಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಕರ್ನಾಟಕ ಚುನಾವಣಾ ಫಲಿತಾಂಶ (Karnataka Election Result) ಪ್ರಕಟವಾಗಿದ್ದು, ಕಾಂಗ್ರೆಸ್ (Congress)​ ನಿರೀಕ್ಷೆಗೂ ಮೀರಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆಡಳಿತರೂಢ ಬಿಜೆಪಿ (BJP) ಕಳೆದ ವರ್ಷಗಳಿಸಿದ್ದ ಸ್ಥಾನಗಳಲ್ಲಿ 40ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡು ಹೀನಾಯ ಸೋಲು ಕಂಡಿದೆ. 223 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್​ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 65ಕ್ಕೆ ಕುಸಿದಿದೆ. ಇನ್ನೂ ಕಿಂಗ್​ ಮೇಕರ್​ ಆಗಬಹುದು ಎಂದು ಭಾವಿಸಲಾಗಿದ್ದ ಜೆಡಿಎಸ್​ ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಕಾಂಗ್ರೆಸ್​ಗೆ ಶುಭಕೋರಿದ್ದಾರೆ.


ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ಎಂದು ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ನರೇಂದ್ರ ಮೋದಿ ಅವರು ಟ್ವೀಟ್​ ಮಾಡಿದ್ದಾರೆ.


ಬಿಜೆಪಿ ಕಾರ್ಯಕರ್ತರಿಗೆ ಪ್ರಶಂಸೆ


ಮತ್ತೊಂದು ಟ್ವೀಟ್​ನಲ್ಲಿ ಬಿಜೆಪಿ ಸದಸ್ಯರಿಗೂ ಧನ್ಯವಾದ ತಿಳಿಸಿದ್ದಾರೆ. " ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ " ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: 2023 Karnataka Election Result: ಕಾಂಗ್ರೆಸ್ ಗೆಲುವಿಗೆ, ಬಿಜೆಪಿ ಸೋಲಿಗೆ ಕಾರಣಗಳೇನು?

 

ಆಲ್​ ದ ಬೆಸ್ಟ್ ಹೇಳಿದ ಶೋಭ ಕರಂದ್ಲಾಜೆ


ಚುನಾವಣೆ ಎಂದ ಮೇಲೆ ಸೋಲು, ಗೆಲುವು ಸಹಜವಾಗಿದೆ. ಈ ಬಾರಿ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.




ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ ಎಂದ ಬೊಮ್ಮಾಯಿ


ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಜನಾದೇಶವನ್ನು ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ರಾಷ್ಟ್ರೀಯ ಪಕ್ಷವಾಗಿ ನಮಗೆ ಎಲ್ಲಿ ಹಿನ್ನಡೆಯಾಗಿದೆ ಎಂಬುದರ ಕುರಿತು ವಿಶ್ಲೇಷಣೆ ಮಾಡಲಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತೆಲಂಗಾಣದಲ್ಲೂ ಪುನಾರಾವರ್ತನೆಯಾಗಲಿದೆ

top videos


    ಕರ್ನಾಟಕ ಚುನಾವಣಾ ಫಲಿತಾಂಶ ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ. ಈ ಗೆಲುವು ಕೇವಲ ಕರ್ನಾಟಕಕ್ಕೆ ಸೀಮಿತವಾಗುವುದಿಲ್ಲ, ನಾಳೆ ಈ ಗೆಲುವು ತೆಲಂಗಾಣದಲ್ಲೂ ಪ್ರತಿಫಲಿಸಲಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಜಯ ಸಾಧಿಸುತ್ತೇವೆ ಎಂದು ಎಂದು ತೆಲಂಗಾಣ ಕಾಂಗ್ರೆಸ್​ ಮುಖ್ಯಸ್ಥ ರೇವಂತ್​ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    First published: