ದಾವಣಗೆರೆ: ಚುನಾವಣಾ ಚದುರಂಗದಾಟದ ಮಹಾ ತೀರ್ಪು ಹೊರಬಿದ್ದಿದ್ದೆ. ದಾವಣಗೆರೆಯ (Davanagere) ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ (Congress) ಸ್ಪರ್ಧಿಸಿರುವ ಡಿಜಿ ಶಾಂತನಗೌಡ (Shanthanagowda) ಅವರ ಗೆಲುವು ಪಡೆದುಕೊಂಡಿದ್ದಾರೆ. ಈ ನಡುವೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ (Renukacharya) ಅವರಿಗೆ ಬಿಗ್ಶಾಕ್ ಎದುರಾಗಿದೆ. ಸೋಲಿನ ಹಿನ್ನಲೆಯಲ್ಲಿ ಹೊನ್ನಾಳಿಯ ಮನೆಗೆ ಆಗಮಿಸಿದ್ದ ಅಭಿಮಾನಿಗಳ (Fans) ಎದುರು ಶಾಸಕ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ. ಕ್ಷೇತ್ರದ ಜನರಿಗೆ ಸಾಕಷ್ಟು ಕೆಲಸ ಮಾಡಿ ಕೊಟ್ಟರು ಗೆಲ್ಲಲಿಲ್ಲ ಎಂದು ಸಾಕಷ್ಟು ಬೆಂಬಲಿಗರ ಮುಂದೆ ತಮ್ಮ ನೋವು ತಡೆಯಲಾಗದೆ ಕಣ್ಣೀರು (Tears) ಹಾಕಿದ್ದಾರೆ.
ಇಂದು ನಡೆದ ಮತ ಎಣಿಕೆಯಲ್ಲಿ ಒಂದು ಸುತ್ತಿನಲ್ಲೂ ರೇಣುಕಾಚಾರ್ಯ ಅವರು ಮುನ್ನಡೆ ಸಾಧಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದೆ. ಆದರೂ ಈ ರೀತಿ ಸೋಲು ಆಯ್ತು ಎಂದು ಸೋಲಿನ ಆಘಾತದಿಂದ ತಮ್ಮ ಕ್ಷೇತ್ರದ ಅಭಿಮಾನಿಗಳ ಎದುರು ಮಾತನಾಡಲು ಆಗದೆ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದಾರೆ.
ತಾಲೂಕಿನ ಎಲ್ಲಾ ನಾಯಕರು ನನ್ನ ಪರ ಕೆಲಸ ಮಾಡಿದ್ದರು. ನನಗೆ ಮತ ಕೊಟ್ಟವರಿಗೂ, ಕೊಡದವರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಸೋಲಿನ ಬಳಿಕವೂ ನೀವು ನನ್ನ ಮನೆಗೆ ಬಂದಿದ್ದೀರಿ.
ಕೋವಿಡ್ನಲ್ಲಿ ಕೆಲಸ ಮಾಡಿದ್ದೆ, ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿದ್ದೆ. ಆದರೆ ಈಗ ಸೋತ ಬಳಿಕ ನಾನು ಯಾರ ಬಗ್ಗೆಯೂ ಆರೋಪ ಮಾಡಲ್ಲ, ನನ್ನ ಸೋಲಿಗೆ ನಾನೇ ಕಾರಣ ಅಂತ ಭಾವಿಸುತ್ತೇನೆ. ಮತದಾರರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಅನ್ಸುತ್ತೆ. ನಾನು ಗೆದ್ದರೂ ಧ್ವೇಷ ರಾಜಕಾರಣ ಮಾಡಿರಲಿಲ್ಲ ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ