ಮೈಸೂರು: ಕಾಂಗ್ರೆಸ್ (Congress) ಗೆದ್ದಾಗಿದೆ, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇದೀಗ ಕಾಂಗ್ರೆಸ್‌ನಲ್ಲಿ ಸಿಎಂ (Next CM) ಆಗುವುದು ಯಾರು ಎಂಬ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಮೇಲೆ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಇಬ್ಬರೂ ಕಣ್ಣಿಟ್ಟಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ (high command) ಯಾರಿಗೆ ಅಸ್ತು ಎನ್ನಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ (Dr. Yathindra Siddaramaiah) ಮಾತನಾಡಿದ್ದಾರೆ. ನನ್ನ ತಂದೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಆಗಬೇಕು ಅಂತ ಅಭಿಪ್ರಾಯಪಟ್ಟಿದ್ದಾರೆ.
ನನ್ನ ತಂದೆಯವರು ಸಿಎಂ ಆಗಿದ್ದಾರೆ
ನನ್ನ ತಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು ಅಂತ ಸಿದ್ದರಾಮಯ್ಯ ಅವರು ಮತ್ತೆ ನಮ್ಮ ತಂದೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಬೇಕು ಅಂತ ಹೇಳಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
2615 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆದಿತ್ತು. 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ಮುಕ್ತಾಯವಾಗಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಇತರೇ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 2615 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ ಒಟ್ಟು 2615 ಅಭ್ಯರ್ಥಿಗಳಿದ್ದು, ಈ ಪೈಕಿ 2430 ಪುರುಷ ಅಭ್ಯರ್ಥಿಗಳು, 184 ಮಹಿಳಾ ಅಭ್ಯರ್ಥಿಗಳು ಹಾಗೂ ಒಬ್ಬರು ತೃತೀಯ ಲಿಂಗಿ ಅಭ್ಯರ್ಥಿ ಕಣದಲ್ಲಿದ್ದಾರೆ.
ಕಾಂಗ್ರೆಸ್ ಪಕ್ಷ ನಮ್ಮ ಲೆಕ್ಕಾಚಾರದಂತೆ ಮುನ್ನಡೆ ಸಾಧಿಸಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಬಿಜೆಪಿಗೆ 65 ರಿಂದ 70 ಬರುತ್ತದೆ ಎಂದು ಅಂದಾಜು ಮಾಡಿದ್ದೆವು, ಈಗ ಅದೇ ರೀತಿಯ ಟ್ರೆಂಡ್ ಇದೆ ಎಂದರು. ಜೆಡಿಎಸ್ 25 ರಿಂದ 26 ಬರಬಹುದು ಎಂದು ಎಂದುಕೊಂಡಿದ್ದೆವು, ಅದೇ ರೀತಿಯಾಗಿದೆ ಅಂತ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: Siddaramaiah: ನಾನು ಹೇಳಿದ್ದೇ ನಿಜವಾಯ್ತು ಎಂದ ಸಿದ್ದರಾಮಯ್ಯ! ಫಲಿತಾಂಶದ ಬಗ್ಗೆ ಸಿದ್ದು ಮಾತು
ಈ ಅಭ್ಯರ್ಥಿಗಳ ಮೇಲೆ ಎಲ್ಲರ ಚಿತ್ತ
ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ, ಜಿ. ಸೋಮಶೇಖರ ರೆಡ್ಡಿ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ವಿ. ಸುನೀಲ್ ಕುಮಾರ್, ಸಿ.ಟಿ. ರವಿ, ಡಾ. ಕೆ.ಸುಧಾಕರ್, ವರ್ತೂರು ಪ್ರಕಾಶ್, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಆರ್. ಅಶೋಕ್, ಸಿ.ಪಿ. ಯೋಗೇಶ್ವರ್, ಪ್ರೀತಂ ಗೌಡ, ವಿ. ಸೋಮಣ್ಣ ಸೇರಿದಂತೆ ಪ್ರಮುಖರು ಈ ಬಾರಿ ಕುತೂಹಲ ಕೆರಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ