• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Who is Next CM: ಸಿಎಂ ಸ್ಥಾನಕ್ಕೆ ಸಿದ್ದು-ಡಿಕೆಶಿ ಬಿಗಿಪಟ್ಟು! ಹೈಕಮಾಂಡ್ ಅಂಗಳಕ್ಕೆ ತಲುಪಿದ ಕಾಂಗ್ರೆಸ್ ಹೈಡ್ರಾಮಾ

Who is Next CM: ಸಿಎಂ ಸ್ಥಾನಕ್ಕೆ ಸಿದ್ದು-ಡಿಕೆಶಿ ಬಿಗಿಪಟ್ಟು! ಹೈಕಮಾಂಡ್ ಅಂಗಳಕ್ಕೆ ತಲುಪಿದ ಕಾಂಗ್ರೆಸ್ ಹೈಡ್ರಾಮಾ

ಕಾಂಗ್ರೆಸ್​ ಶಾಸಕಾಂಗ ಸಭೆ

ಕಾಂಗ್ರೆಸ್​ ಶಾಸಕಾಂಗ ಸಭೆ

ಹೋಟೆಲ್ ಒಂದು ಭಾಗದಲ್ಲಿ ಡಿಕೆ ಶಿವಕುಮಾರ್ ಫೋಟೋ ಹಿಡಿದುಕೊಂಡಿದ್ದ ಬೆಂಬಲಿಗರು ಡಿಕೆ ಡಿಕೆ ಅಂತ ಘೋಷಣೆ ಕೂಗುತ್ತಿದ್ದರು. ಮತ್ತೊಂದು ಕಡೆ ಸಿದ್ದು ಸಿದ್ದು ಅಂತ ಘೋಷಣೆ ಕೂಗುತ್ತಿದ್ದದ್ದು ಕಂಡು ಬಂತು. ಅಭಿಮಾನಿಗಳನ್ನು ತಡೆಯಲು ಹರಸಾಹಸಪಟ್ಟ ಪೊಲೀಸರು ಹೈರಾಣಾಗಿದ್ದರು. 

 • News18 Kannada
 • 2-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ (Chief Minister) ಯಾರು!? ಸದ್ಯ ದೇಶದಾದ್ಯಂತ ಅತೀ ಹೆಚ್ಚು ಮಂದಿ ಚರ್ಚೆ ಮಾಡುತ್ತಿರುವ ವಿಚಾರ ಎಂದರೆ ತಪ್ಪಾಗುವುದಿಲ್ಲ. ಈ ನಡುವೆ ಹಲವು ನಾಯಕರು (Leaders), ರಾಜಕೀಯ ವಿಶ್ಲೇಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಕೆಲವರು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಮಾಡಿದರೆ, ಮತ್ತೆ ಕೆಲವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಹೇಳುತ್ತಿದ್ದಾರೆ. ಈ ನಡುವೆ ಇಂದು ಕಾಂಗ್ರೆಸ್​ ಶಾಸಕಾಂಗ ಸಭೆಯನ್ನು (CLP Meeting) ಬೆಂಗಳೂರಿನ ಶಾಂಗ್ರೀಲಾ ಹೋಟೆಲ್​​ನಲ್ಲಿ ನಡೆಸಲಾಯ್ತು. ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು ಕೇಂದ್ರ ವೀಕ್ಷಕರು ಸಂಗ್ರಹಿಸಿದ್ದಾರೆ. ಈ ವೇಳೆ ಮೂವರು ಪಕ್ಷೇತರರು ಸಭೆಯಲ್ಲಿ ಉಪಸ್ಥಿತಿ ಇದ್ದರು.


ಶಾಸಕರ ಅಭಿಪ್ರಾಯವನ್ನ ಸಂಗ್ರಹ ಮಾಡಿರುವ ವೀಕ್ಷಕರು, ಒಂದು ಸಾಲಿನ ನಿರ್ಣಯ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಂತೆ ಹೈಮಾಕಂಡ್​ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು ಹೋಗಿದ್ದು, ಮುಂದಿನ ದಿನಗಳಲ್ಲಿ ಎದುರಾಗುವ ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕೂಡ ಇಬ್ಬರು ನಾಯಕರ ನಡುವೆ ಅಧಿಕಾರ ಹಂಚಿಕೆ ಮಾಡುವ ಬಗ್ಗೆ ಚಿಂತನೆ ನಡೆಸಿದೆಯಂತೆ. ಆದರೆ ಮೊದಲು ಯಾರು ಸಿಎಂ ಆಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ.
ಇನ್ನು ಇದಕ್ಕೂ ಮುನ್ನ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸುರ್ಜೇವಾಲ ಪ್ರತ್ಯೇಕ ಸಭೆ ನಡೆಸಿದ್ದರು. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಶಾಸಕರ ನಡುವೆ ಒಗ್ಗಟ್ಟಿನ ಮಂತ್ರ ಪಠಿಸುವ ಹಿನ್ನೆಲೆಯಲ್ಲಿ ಸಭೆ ನಡೆಸಿ ಎಐಸಿಸಿ ವೀಕ್ಷಕರು ನಾಯಕರಿಗೆ ಸೂಚನೆ ನೀಡಿತ್ತು ಎನ್ನಲಾಗಿದೆ. ಈ ವೇಳೆ ಕೆಸಿ ವೇಣುಗೋಪಾಲ್ ಸೇರಿದಂತೆ ಮೂವರು ವೀಕ್ಷಕರು ಉಪಸ್ಥಿತಿ ಇದ್ದರು.


ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು


ರಾಜ್ಯದ ಆರೂವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ.


ಕಾಂಕಾಂಗ್ರೆಸ್​ ಶಾಸಕಾಂಗ ಸಭೆಯ ನಿರ್ಣಯ


ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ ವಾಲ್ಮೀಕಿಗಳು, ಶ್ರೀ ನಾರಾಯಣ ಗುರುಗಳು, ಸಂತ ಸೇವಾಲಾಲರು, ಶಿಶುನಾಳ ಶರೀಫರು, ಕೆಂಪೇಗೌಡರು, ಬಾಬಾಸಾಹೇಬ್ ಅಂಬೇಡ್ಕರ್ ಅವರಿಂದ ಕುವೆಂಪುರವರವರೆಗೂ ಇತರೆ ಎಲ್ಲಾ ಮಹನೀಯರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ, ಸಮಾಜ ಸುಧಾರಣೆ, ಪಾರದರ್ಶಕ ಹಾಗೂ ದಕ್ಷ ಆಡಳಿತವನ್ನು ನಡೆಸಿಕೊಂಡು ಬರಲಾಗಿದೆ. 2023ರ ಮೇ 13 ರಂದು ಪ್ರಕಟವಾಗಿರುವ ಐತಿಹಾಸಿಕ ಫಲಿತಾಂಶದಲ್ಲಿ ರಾಜ್ಯದ ಒಳಗೆ ಹಾಗೂ ಹೊರಗೆ ದ್ವೇಷ ಹಾಗೂ ವಿಭಜನೆ ರಾಜಕೀಯದಿಂದಾಗಿ ಅಪಾಯದಲ್ಲಿ ಸಿಲುಕಿರುವ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗೆ ಮತ್ತೊಮ್ಮೆ ಕರ್ನಾಟಕ ಮತ್ತೊಮ್ಮೆ ಶಕ್ತಿ ತುಂಬಿದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.


ಕಾಂಗ್ರೆಸ್ ಶಾಸಕಾಂಗ ಪಕ್ಷವು ಒಕ್ಕೊರಲಿನಿಂದ ಪಕ್ಷಕ್ಕೆ ಆಧಾರ ಸ್ತಂಭವಾಗಿ ಮಾರ್ಗದರ್ಶನ ನೀಡುತ್ತಿರುವ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ತಿಳಿಸಿತು.


ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಅವರತವಾಗಿ ಪ್ರಚಾರ ಮಾಡುತ್ತಾ, ಸೂಕ್ತ ತಂತ್ರಗಾರಿಕೆ ಹಾಗೂ ಮಾರ್ಗದರ್ಶನಗಳನ್ನು ನೀಡಿಕೊಂಡು ಬಂದಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು ತಿಳಿಸಿತು.


ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿದೆ. ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಹಾಗೂ ಭವ್ಯ ಪರಂಪರೆಯನ್ನು ರಕ್ಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮರು ಸ್ಥಾಪಿಸಲು ಹಾಗೂ ಭಾರತದಲ್ಲಿ ಕರ್ನಾಟಕ ರಾಜ್ಯ ಶಾಂತಿ, ಪ್ರಗತಿ ಹಾಗೂ ಸೌಹಾರ್ದತೆ ವಿಚಾರಗಳಲ್ಲಿ ಅಗ್ರ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ.


ಸಿದ್ದರಾಮಯ್ಯ ಮತ್ತು ಡಿಕೆಶಿ ಪರ ಅಭಿಮಾನಿಗಳ ಘೋಷಣೆ


ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಬ್ಯುಸಿಯಾಗಿದ್ದರೆ ಇತ್ತ ಶಾಂಗ್ರೀಲಾ ಹೋಟೆಲ್​ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪರ ಘೋಷಣೆ ಕೂಗುತ್ತಿದ್ದರು. ಹೋಟೆಲ್ ಒಂದು ಭಾಗದಲ್ಲಿ ಡಿಕೆ ಶಿವಕುಮಾರ್ ಫೋಟೋ ಹಿಡಿದುಕೊಂಡಿದ್ದ ಬೆಂಬಲಿಗರು ಡಿಕೆ ಡಿಕೆ ಅಂತ ಘೋಷಣೆ ಕೂಗುತ್ತಿದ್ದರು. ಮತ್ತೊಂದು ಕಡೆ ಸಿದ್ದು ಸಿದ್ದು ಅಂತ ಘೋಷಣೆ ಕೂಗುತ್ತಿದ್ದದ್ದು ಕಂಡು ಬಂತು. ಅಭಿಮಾನಿಗಳನ್ನು ತಡೆಯಲು ಹರಸಾಹಸಪಟ್ಟ ಪೊಲೀಸರು ಹೈರಾಣಾಗಿದ್ದರು.

top videos
  First published: