ರಾಮನಗರದಲ್ಲಿ ಬೀದಿಗಿಳಿದಿದ್ದ ರೈತರು - ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ಹಿಂಪಡೆಯುವಂತೆ ಆಕ್ರೋಶ

ಇದಾದ ಬಳಿಕ ರಾಮನಗರದವರೆಗೆ ಬೈಕ್‌ ರ‍್ಯಾಲಿ ನಡೆಸಿ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಲಾಯ್ತು. ಕನ್ನಡ ಜನಮನ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ರಾಜ್ಯ ರೈತ ಸಂಘದ ಮುಖಂಡರಿಗೆ ಬೆಂಬಲ ನೀಡಿದರು. ಸುಮಾರು 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಲಾಯಿತು

news18-kannada
Updated:September 28, 2020, 10:49 PM IST
ರಾಮನಗರದಲ್ಲಿ ಬೀದಿಗಿಳಿದಿದ್ದ ರೈತರು - ಎಪಿಎಂಸಿ, ಭೂ ಸುಧಾರಣೆ ಕಾಯ್ದೆ ಹಿಂಪಡೆಯುವಂತೆ ಆಕ್ರೋಶ
ರಾಮನಗರದಲ್ಲಿ ಪ್ರತಿಭಟನೆ
  • Share this:
ರಾಮನಗರ(ಸೆ.28): ಭೂ ಸುಧಾರಣೆ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಅಂತೆಯೇ ರಾಜ್ಯಾದ್ಯಂತ ಅನ್ನದಾತರು ಬೀದಿಗಿಳಿದು ಪ್ರತಿಭಟಿಸಿದ್ದರು. ಹಾಗೆಯೇ ರಾಮನಗರ ಜಿಲ್ಲೆಯಲ್ಲೂ ಸಹ ರೈತರ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಯ್ತು. ಜಿಲ್ಲೆಯ ನಾಲ್ಕು ತಾಲೂಕುಗಳಾದ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು, ಹೋಟೆಲ್​​ಗಳು ಬಂದ್ ಮಾಡಲಾಗಿತ್ತು. ಜತೆಗೆ ಕೆಎಸ್​ಆರ್​​ಟಿಸಿ, ಖಾಸಗಿ ಬಸ್, ಆಟೋ ಸಂಚಾರವೂ ಸ್ಥಗಿತವಾಗಿತ್ತು. ಮೊದಲಿಗೆ ಚನ್ನಪಟ್ಟಣದ ಗಾಂಧಿ ವೃತ್ತದಲ್ಲಿ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಗೆ ಇಳಿದು ಮಾನವ ಸರಪಳಿ ನಿರ್ಮಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದಾದ ಬಳಿಕ ರಾಮನಗರದವರೆಗೆ ಬೈಕ್‌ ರ‍್ಯಾಲಿ ನಡೆಸಿ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಲಾಯ್ತು. ಕನ್ನಡ ಜನಮನ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ರಾಜ್ಯ ರೈತ ಸಂಘದ ಮುಖಂಡರಿಗೆ ಬೆಂಬಲ ನೀಡಿದರು. ಸುಮಾರು 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲೇ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರೈತ ಸಂಘದ ಮುಖಂಡ ರಾಮಣ್ಣ ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ಕೂಡಲೇ ರೈತರ ವಿರೋಧಿ ಕಾಯ್ದೆಗಳನ್ನ ಹಿಂಪಡೆಯಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಹೆಸರಿಲ್ಲದಂತೆ ಮಾಡುತ್ತೇವೆ ಎಂದರು.

ಇನ್ನು, ರೈತ ಮಹಿಳೆ ಅನಸೂಯಮ್ಮ ಮಾತನಾಡಿ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಮಹಿಳೆಯರು ದಂಗೆ ಏಳಲಿದ್ದಾರೆ. ಕೂಡಲೇ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ವಾಪಸ್ಸು ಪಡೆಯಲಿ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸರ್ಕಾರದ ರೈತ ವಿರೋಧಿ ನೀತಿ ನೋಡ್ತಿದ್ರೆ, ಬ್ರಿಟಿಷರ ಆಡಳಿತ ನೆನಪಾಗ್ತಿದೆ; ನಟ ಚೇತನ್

ಇಡೀ ಪ್ರತಿಭಟನೆಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮೋದಿಯವರು ರೈತರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ನೀಡಿ ಚುನಾವಣೆ ಗೆದ್ದರು. ಗೆದ್ದ ಮೇಲೆ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಎಚ್ಚೆತ್ತು ಈ ಕಾಯ್ದೆಗಳನ್ನು ಹಿಂಪಡೆಯಲಿ. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ರೈತರು ವಾರ್ನಿಂಗ್​​​ ಕೊಟ್ಟರು.
Published by: Ganesh Nachikethu
First published: September 28, 2020, 7:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading