HOME » NEWS » State » KARNATAKA BANDH GOOD RESPONSE TO KARNATAKA BANDH IN HUBLI LG

ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ; ರಸ್ತೆಗಿಳಿದ ರೈತರು, ಕಾರ್ಮಿಕರು, ಕನ್ನಡಪರ ಹೋರಾಟಗಾರರು

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ‌ಗಳನ್ನು ಕೂಗಿದರು. ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿದರು. ನಗರದ ವಿವಿಧೆಡೆ ಮೆರವಣಿಗೆ ನಡೆಸಿದ ರೈತರು ರಸ್ತೆಗಿಳಿದ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಡೆದರು. 

news18-kannada
Updated:September 28, 2020, 12:41 PM IST
ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ; ರಸ್ತೆಗಿಳಿದ ರೈತರು, ಕಾರ್ಮಿಕರು, ಕನ್ನಡಪರ ಹೋರಾಟಗಾರರು
ಪ್ರತಿಭಟನೆ
  • Share this:
ಹುಬ್ಬಳ್ಳಿ(ಸೆ.28): ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ವಾಹನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ. ಬಂದ್‌ಗೆ 50ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿವೆ. ರೈತರು, ಕಾರ್ಮಿಕರು, ಕನ್ನಡ ಪರ ಸಂಘಟನೆಗಳು ಬಂದ್‌‌ನಲ್ಲಿ ಭಾಗವಹಿಸಿವೆ. ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ದುರ್ಗದಬೈಲ್, ಜನತಾ ಬಜಾರ್, ಹೊಸೂರು, ಗಬ್ಬೂರು, ಗೋಕುಲ ರಸ್ತೆ ಬಸ್ ಡಿಪೋ ಬಳಿ ಪ್ರತಿಭಟನೆ ಮಾಡಿದ್ದಾರೆ. ಬಂದ್‌ನಲ್ಲಿ ಭಾಗವಹಿಸಿದ ಮಹದಾಯಿ ಹೋರಾಟಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಂದ್‌ ಬೆಂಬಲಿಸಿದ ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ವಾಣಿಜ್ಯ ನಗರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಯಿತು. ಪೊಲೀಸರು ಟೈರ್ ಗಳಿಗೆ ಬೆಂಕಿ‌ ಹಚ್ಚಲು ಅವಕಾಶ ನೀಡಲಿಲ್ಲ. ಹೀಗಾಗಿ ಬಟ್ಟೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಬೆಂಕಿ‌ ನಂದಿಸಿದರು ಟೈರ್‌‌ಗೆ ಬೆಂಕಿ‌ ಹಚ್ಚಿಲ್ಲ, ನಮ್ಮ‌ಪ್ರತಿಭಟನೆಗೆ ತಡೆಯಾಕೆ ? ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಟ್ಟೆಗಳನ್ನು ಒಟ್ಟುಗೂಡಿಸಿ ಮತ್ತೆ ಬೆಂಕಿ ಹಚ್ಚಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ‌ಗಳನ್ನು ಕೂಗಿದರು. ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿದರು. ನಗರದ ವಿವಿಧೆಡೆ ಮೆರವಣಿಗೆ ನಡೆಸಿದ ರೈತರು ರಸ್ತೆಗಿಳಿದ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಡೆದರು.  ಬಸ್ ಚಾಲಕರನ್ನು ತರಾಟೆಗೆ ತೆಗೆದುಕೊಂಡರು. ಬಸ್ ಸಂಚಾರ ನಿಲ್ಲಿಸುವಂತೆ ಬಸ್ ಮುಂದೆ ಮಲಗಿದರು.‌ ಈ ವೇಳೆ ರೈತನನ್ನು ಎತ್ತಿ ಪಕ್ಕಕ್ಕೆ ಕರೆದೊಯ್ದ ಪೊಲೀಸ್ರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಹೋರಾಟ ತೀವ್ರಗೊಳಿಸಿದ ರೈತರು, ಬಸ್‌ ನಿಲ್ದಾಣಕ್ಕೆ ತೆರಳಿ ಬಸ್‌ಗಳನ್ನು ತಡೆದು ನಿಲ್ಲಿಸಿದರು. ನಗರದ ಹೊಸೂರು ಸರ್ಕಲ್‌ನಲ್ಲಿ ಚಾಲಕರು ಮತ್ತು ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡರು. ವ್ಯಾಪಾರಿಗಳ ಬಳಿ ತೆರಳಿದ ಪ್ರತಿಭಟನಾಕಾರರು ಬಂದ್‌ಗೆ ಬೆಂಬಲಿಸುವಂತೆ ಕೈಮುಗಿದು ಮನವಿ ಮಾಡಿದರು.

Karnataka Bandh: ಹಾಸನದಲ್ಲಿ ರೈತರ ಪ್ರತಿಭಟನೆಗೆ ಕರವೇ ಬೆಂಬಲ; ಬೆಂಗಳೂರು- ಮಂಗಳೂರು ಹೈವೇ ಬಂದ್

ರೈತರು ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿ ಹುಬ್ಬಳ್ಳಿಯ ಗಬ್ಬೂರು ವೃತ್ತದ ಬಳಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಗಬ್ಬೂರು ಟೋಲ್‌‌ ಬಳಿ ಹೆದ್ದಾರಿ ತಡೆದು ಹೋರಾಟ ನಡೆಸಿದ್ರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು‌. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ್ರು. ಪೊಲೀಸ್ ವ್ಯಾನ್‌ನಲ್ಲಿ ಹೋರಾಟಗಾರರನ್ನು ಬಂಧಿಸಿ ಕರೆದೊಯ್ದರು‌.
ರಾಜ್ಯ ಸರ್ಕಾರ ಫೋನ್ ಟ್ಯಾಪಿಂಗ್ ಮಾಡಿಸುತ್ತಿದ್ದು, ರೈತ ಹೋರಾಟದ ರೂಪುರೇಷೆಗಳನ್ನು ಪೊಲೀಸರು ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು, ಮಾಜಿ ಶಾಸಕ ಎನ್‌.ಎಚ್. ಕೋನರೆಡ್ಡಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರೈತರ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದೆ ಎಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ಕಾನೂನುಗಳನ್ನು ಹಿಂಪಡೆಯಲೇಬೇಕು. ಬಿಜೆಪಿ ಸರ್ಕಾರಗಳ ವಿರುದ್ಧ ಜನಾಭಿಪ್ರಾಯ ರೂಪಗೊಳ್ಳುತ್ತಿದೆ. ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರುವುದು ಸರಿಯಲ್ಲಾ. ಸದನಗಳಲ್ಲಿ ಚರ್ಚಿಸಿ ಕಾನೂನು ಮಾಡಬೇಕು ಎಂದವರು ಒತ್ತಾಯಿಸಿದ್ದಾರೆ.
Published by: Latha CG
First published: September 28, 2020, 12:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading