ಕರ್ನಾಟಕ ಬಂದ್​​ಗೆ ಕಲಬುರ್ಗಿಯಲ್ಲಿ ಉತ್ತಮ ಪ್ರತಿಕ್ರಿಯೆ; ರೈತ ಮುಖಂಡರಿಂದ ರಸ್ತೆ ತಡೆ

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಮಾರುತಿ ಮಾನ್ಪಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರಾಳ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು ರೈತರ ಮರಣ ಶಾಸನ ಬರೆಯಲು ಮುಂದಾಗಿವೆ ಎಂದು ಆರೋಪಿಸಿದರು.

news18-kannada
Updated:September 28, 2020, 10:22 AM IST
ಕರ್ನಾಟಕ ಬಂದ್​​ಗೆ ಕಲಬುರ್ಗಿಯಲ್ಲಿ ಉತ್ತಮ ಪ್ರತಿಕ್ರಿಯೆ; ರೈತ ಮುಖಂಡರಿಂದ ರಸ್ತೆ ತಡೆ
ರಸ್ತೆ ತಡೆದ ರೈತ ಮುಖಂಡರು
  • Share this:
ಕಲಬುರ್ಗಿ(ಸೆ.28): ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ಕರಾಳ ಸುಗ್ರೀವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕಲಬುರ್ಗಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಆಟೋ ಮತ್ತು ಇತರೆ ವಾಹನ ಸಂಚಾರ ವಿರಳವಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿವೆ. ಎಪಿಎಂಸಿಯಲ್ಲಿ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಬಂದ್ ಆಗಿರೋದರಿಂದಾಗಿ ಪ್ರಾಂಗಣ ಬಿಕೋ ಎನ್ನುತ್ತಿದೆ. ಸೂಪರ್ ಮಾರುಕಟ್ಟೆಯಲ್ಲಿಯೂ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಲ್ಪಟ್ಟಿವೆ. ಕೇಂದ್ರ ಬಸ್ ನಿಲ್ದಾಣದ ಎದುರು ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ರೈತ ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಎಸ್.ಯು.ಸಿ.ಐ., ಸಿಪಿಐ, ಸಿಪಿಐಎಂ, ಕೆಲ ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳೂ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಬಂದ್ ಬೆಂಬಲಿಸಿವೆ.

Karnataka Bandh: ಬೆಳ್ಳಂಬೆಳಗ್ಗೆ ಬೆಂಗಳೂರು ಏರ್​​ಪೋರ್ಟ್​​​ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಮಾರುತಿ ಮಾನ್ಪಡೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರಾಳ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು ರೈತರ ಮರಣ ಶಾಸನ ಬರೆಯಲು ಮುಂದಾಗಿವೆ ಎಂದು ಆರೋಪಿಸಿದರು.

ಎಪಿಎಂಸಿ ಕಾಯ್ದೆ ಕಾರ್ಪೋರೇಟ್ ಸಂಸ್ಥೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ್ದು, ರೈತ ಸಮುದಾಯಕ್ಕೆ ತೀವ್ರ ಅನ್ಯಾಯವಾಗಲಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದಾಗಿ ಉಳ್ಳವನೇ ಭೂ ಒಡೆಯ ಅನ್ನೋ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು.

ಶ್ರೀಮಂತರಿಗೆ ಅನುಕೂಲ ಮಾಡಿಕೊಡಲೆಂದು ಎರಡೂ ಸರ್ಕಾರಗಳು ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿವೆ. ಕೂಡಲೇ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ವಾಪಸ್ ಪಡೆಯವರೆಗೂ ಹೋರಾಟ ಮುಂದುವರೆಸೋದಾಗಿ ಮಾನ್ಪಡೆ ಎಚ್ಚರಿಸಿದ್ದಾರೆ.
Published by: Latha CG
First published: September 28, 2020, 10:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading