ಇಂದು ಕರ್ನಾಟಕ ಬಂದ್, ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಘೋಷಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಕಾರ್ಮಿಕ ಇಲಾಖೆಯಿಂದ ಒಂದು ಕಾಯ್ದೆಯನ್ನು ಸಿದ್ಧಪಡಿಸಲಾಗುತ್ತಿದೆ. ಆದರೂ ಕೂಡ ಕೆಲವು ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ ಎಂದು ಅಸಮಾಧಾನ ಹೊರಹಾಕಿದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್.

ಶಿಕ್ಷಣ ಸಚಿವ ಸುರೇಶ್ ಕುಮಾರ್.

 • Share this:
  ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಹಲವು ಸಂಘಟನೆಗಳು ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಈಗಾಗಲೇ ನಾನು ಬಂದ್​ಗೆ ಕರೆ ನೀಡಿರುವ ಸಂಘಟನೆಗಳ ಮುಖಂಡರೊಂದಿಗೆ ಖುದ್ದು ಮಾತನಾಡಿದ್ದು, ಅವರ ಪರವಾಗಿ ನಿಲುವನ್ನು ವ್ಯಕ್ತಪಡಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

  ಕರ್ನಾಟಕ ಬಂದ್ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಈಗಾಗಲೇ ರಾಜ್ಯ ಸರ್ಕಾರ ಸಚಿವ ಸಂಪುಟ ಕನ್ನಡಿಗರಿಗೆ ಉದ್ಯೋಗ ಮೀಸಲು ಇಡುವ ಸಲುವಾಗಿ ಕನ್ನಡಿಗ ಅಂದರೆ ಯಾರು ಎಂಬುದನ್ನು ಸ್ಪಷ್ಟಪಡಿಸಿದೆ. ಕನ್ನಡಿಗ ಅಂದರೆ ಎಷ್ಟು ವರ್ಷದಿಂದ ಇಲ್ಲಿ ನೆಲೆಸಿರಬೇಕು, ಕನ್ನಡ ಭಾಷೆ ಮಾತನಾಡುವುದರಿಂದ ಹಿಡಿದು ಓದುವುದು ಬರೆಯುವ ವಿಚಾರವಾಗಿ ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಇನ್ನು ಒಂದು ಹೆಜ್ಜೆ ಮುಂದೆ ಇಟ್ಟು ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಕಾರ್ಮಿಕ ಇಲಾಖೆಯಿಂದ ಒಂದು ಕಾಯ್ದೆಯನ್ನು ಸಿದ್ಧಪಡಿಸಲಾಗುತ್ತಿದೆ. ಆದರೂ ಕೂಡ ಕೆಲವು ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ ಎಂದು ಅಸಮಾಧಾನ ಹೊರಹಾಕಿದರು.

  ಶಿಕ್ಷಣ ಇಲಾಖೆಯಿಂದ ನಾಳೆ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆಯನ್ನು ರಾಜ್ಯ ಸರ್ಕಾರದಿಂದ ಘೋಷಿಸಿಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿವೆ. ಜಿಲ್ಲಾಡಳಿತಗಳು ಜಿಲ್ಲೆಯ ಪರಿಸ್ಥಿತಿ ನೋಡಿಕೊಂಡು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಸುರೇಶ್ ಕುಮಾರ್ ಅವರು, ಸರೋಜಿನಿ ಮಹಿಷಿ ಆಯೋಗದ ವರದಿ ಜಾರಿಗೆ ಹೋರಾಟ ಮಾಡುತ್ತಿರುವವರ ಬೇಡಿಕೆ ಈಡೇರಿಕೆಗೆ ನಾವು ಈಗಾಗಲೇ ಹೆಜ್ಜೆ ಇಟ್ಟಿದ್ದೇವೆ ಎಂದು ಭರವಸೆ ನೀಡಿದರು.

  ಇದನ್ನು ಓದಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್; ಇಷ್ಟಕ್ಕೂ ವರದಿಯಲ್ಲಿನ ಶಿಫಾರಸ್ಸುಗಳೇನು? ಕನ್ನಡಿಗರಿಗೇನು ಲಾಭ?
  First published: