Karnataka Bandh: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹ; ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ

ಇಂದು ರಾಜ್ಯ ರಾಜಧಾನಿಯಲ್ಲಿ ಜನ ಜೀವನ ಸಾಮಾನ್ಯವಾಗಿತ್ತು. ಬಂದ್ ಬಿಸಿ ಅಷ್ಟಾಗಿ ಎಲ್ಲೂ ತಟ್ಟಿರಲಿಲ್ಲ. ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದೇ ಇದ್ದವು. ಹೋಟೆಲ್​ಗಳು, ಚಿತ್ರಮಂದಿರಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಜನ ನಿಬಿಡ ಪ್ರದೇಶವಾದ ಕೆ.ಆರ್. ಮಾರುಕಟ್ಟೆ ವಹಿವಾಟು ಆಬಾದಿತ. ಇನ್ನೂ ನಗರದಲ್ಲಿ ಆಟೋಗಳ ಅಬ್ಬರವೂ ಇಂದು ಜೋರಾಗಿಯೇ ಇದೆ. ಹೀಗಾಗಿ ಜನ ಸಾಮಾನ್ಯರಿಗೆ ಬಂದ್ ಬಿಸಿ ತಟ್ಟಿಲ್ಲ ಎಂದೇ ಹೇಳಲಾಗುತ್ತಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು (ಫೆಬ್ರವರಿ 13); ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದ ಕೆಲಸಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಎಂಬ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಅಗ್ರಹಿಸಿ ಸುಮಾರು 500ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

  ರಾಜ್ಯದ ಬಹುತೇಕ ಕನ್ನಡ ಪರ ಸಂಘಟನೆಗಳು ಈ ಬಂದ್​ಗೆ ಬೆಂಬಲ ನೀಡಿದ್ದರೂ ಸಹ ನಾರಾಯಣ ಗೌಡ ಹಾಗೂ ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಬಣ ಹಾಗೂ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಈ ಬಂದ್​ಗೆ ಬೆಂಬಲ ಸೂಚಿಸಿಲ್ಲ. ಇನ್ನೂ ಸರ್ಕಾರಿ/ಖಾಸಗಿ ಸಾರಿಗೆ ಸಂಸ್ಥೆಗಳು ಬಂದ್​ಗೆ ನೈತಿಕ ಬೆಂಬಲವನ್ನಷ್ಟೇ ನೀಡಿವೆ.

  ಹೀಗಾಗಿ ಇಂದು ರಾಜ್ಯ ರಾಜಧಾನಿಯಲ್ಲಿ ಜನ ಜೀವನ ಸಾಮಾನ್ಯವಾಗಿತ್ತು. ಬಂದ್ ಬಿಸಿ ಅಷ್ಟಾಗಿ ಎಲ್ಲೂ ತಟ್ಟಿರಲಿಲ್ಲ. ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದೇ ಇದ್ದವು. ಹೋಟೆಲ್​ಗಳು, ಚಿತ್ರಮಂದಿರಗಳು ಎಂದಿನಂತೆ ಕೆಲಸ ನಿರ್ವಹಿಸುತ್ತಿವೆ. ಜನ ನಿಬಿಡ ಪ್ರದೇಶವಾದ ಕೆ.ಆರ್. ಮಾರುಕಟ್ಟೆ ವಹಿವಾಟು ಆಬಾದಿತ. ಇನ್ನೂ ನಗರದಲ್ಲಿ ಆಟೋಗಳ ಅಬ್ಬರವೂ ಇಂದು ಜೋರಾಗಿಯೇ ಇದೆ. ಹೀಗಾಗಿ ಜನ ಸಾಮಾನ್ಯರಿಗೆ ಬಂದ್ ಬಿಸಿ ತಟ್ಟಿಲ್ಲ ಎಂದೇ ಹೇಳಲಾಗುತ್ತಿದೆ.

  ಆದರೆ, ಖಾಸಗಿ ಶಾಲಾ ಬಸ್ ಚಾಲಕರ ಸಂಘ ಈ ಬಂದ್​ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯ ಮಕ್ಕಳನ್ನು ಅವರ ಪೋಷಕರೇ ಇಂದು ಶಾಲೆಗೆ ಕರೆತಂದಿದ್ದಾರೆ. ಆದರೆ, ಯಾವುದೇ ಶಾಲೆ ಅಥವಾ ಕಾಲೇಜು ಬಂದ್ ಪ್ರಯುಕ್ತ ರಜೆ ಘೋಷಿಸಿಲ್ಲ ಎಂದು ತಿಳಿದು ಬಂದಿದೆ.

  11 ಗಂಟೆಗೆ ಆರಂಭವಾಗಲಿದೆ ಬೃಹತ್ ರ್ಯಾಲಿ:

  ಡಾ. ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು ಕನ್ನಡಿಗರಿಗೆ ನ್ಯಾಯ ದೊರಕಬೇಕು ಎಂದು ಒತ್ತಾಯಿಸಿ ಕನ್ನಡ ಪರ ಹೋರಾಟಗಾರರು ಇಂದು ಬೆಂಗಳೂರಿನಲ್ಲಿ ರ್ಯಾಲಿ ನಡೆಸಲು ಮುಂದಾಗಿದ್ದಾರೆ.

  ಬೆಳಗ್ಗೆ 11 ಗಂಟೆಗೆ ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ವರೆಗೆ ಬೃಹತ್ ರ್ಯಾಲಿ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಫ್ರೀಡಂ ಪಾರ್ಕ್ ಸುತ್ತ ಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

  ಎಲ್ಲೂ ಅಹಿತಕರ ಘಟನೆ ನಡೆಯದಂತೆ ತಡೆಯಲು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ 2 ಎಸಿಪಿ, 5 ಇನ್ಸ್ಪೆಕ್ಟರ್, 15 ಪಿಎಸ್ಐ ಸೇರಿದಂತೆ 400 ಸಿಬ್ಬಂದಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

  ಇನ್ನೂ ಹಲವು ಕನ್ನಡ ಪರ ಹೋರಾಟಗಾರರು ಬೆಂಗಳೂರು ಹೊಸೂರು ಗಡಿಯಲ್ಲಿ ರಸ್ತೆಯಲ್ಲಿ ಟೈರ್ ಹಚ್ಚಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿರುವ ಘಟನೆಯೂ ನಡೆದಿದೆ.

  ಇದನ್ನೂ ಓದಿ : Karnataka Bandh: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್​ಗೆ ಕರೆ; ಯಾವೆಲ್ಲ ಸೇವೆಗಳು ಅಬಾಧಿತ?
  First published: